ಕೃಷಿ ಮಂತ್ರಿ ಬಿ.ಸಿ.ಪಾಟೀಲ್ ಅವರಿಂದ “ರೈತ” ಚಿತ್ರದ ಪೋಸ್ಟರ್ ಬಿಡುಗಡೆ.

ನಾವೆಲ್ಲಾ ಇಂದು ನೆಮ್ಮದಿಯ ಜೀವನ ನಡೆಸಿತ್ತಿರಲು ಮುಖ್ಯ ಕಾರಣ ರೈತ. ಆತ ಬೆಳೆದ ಆಹಾರ ತಿಂದು ನಾವು ಸುಖವಾಗಿದ್ದೇವೆ. ಅಂತಹ “ರೈತ” ನ ಕುರಿತು ಬರುತ್ತಿರುವ ಚಿತ್ರ “ರೈತ”.

ಇತ್ತೀಚೆಗೆ ಈ ಚಿತ್ರದ ಪೋಸ್ಟರನ್ನು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಬಿಡುಗಡೆ ಮಾಡಿ ಶುಭ ಕೋರಿದರು. ಕುಮುದ ಆರ್ಟ್ಸ್ ಕ್ರಿಯೇಷನ್ಸ್ ಲಾಂಛನದಲ್ಲಿ ಅಮರನಾಥ ರೆಡ್ಡಿ ವಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.WhatsApp Image 2022 05 01 at 10.39.45 PM

ರೈತ ಬೇರೆ ಯಾರಿಂದಲೂ ಬಡ್ಡಿಗಾಗಿ ಹಣ ಪಡೆದು ಕಷ್ಟ ಪಡಬಾರದು. ಆತನ ಅನುಕೂಲಕ್ಕಾಗಿ ಸಾಕಷ್ಟು ಬ್ಯಾಂಕ್ ಗಳಿದೆ‌. ಇನ್ಶುರೆನ್ಸ್ ಇದೆ. ಇದರ ಲಾಭ ಪಡೆದುಕೊಳ್ಳಬಹುದು ಎಂಬ ವಿಷಯವನ್ನು ಈ ಚಿತ್ರದ ಮೂಲಕ ಹೇಳ ಹೊರಟಿದ್ದಾರೆ ನಿರ್ದೇಶಕ ರಾಜೇಂದ್ರ ಕುಣಿಗಲ್.

ತೆಲುಗಿನಲ್ಲಿ ಸಾಕಷ್ಟು ಕಿರುಚಿತ್ರಗಳನ್ನು ನಿರ್ಮಿಸಿರುವ ಇವರಿಗೆ ಇದು ಚೊಚ್ಚಲ ಚಿತ್ರ. ಕಥೆ, ಚಿತ್ರಕಥೆ, ಹಾಡುಗಳು ಹಾಗೂ ಸಂಭಾಷಣೆಯನ್ನು ಇವರೆ ಬರೆದಿದ್ದಾರೆ.‌ ನೃತ್ಯ ನಿರ್ದೇಶನ ಕೂಡ ರಾಜೇಂದ್ರ ಅವರೆ ಮಾಡಿದ್ದಾರೆ. ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಬೆಂಗಳೂರು, ಚಿಂತಾಮಣಿ ಮುಂತಾದ ಕಡೆ ಮೂವತ್ತೆಂಟು ದಿನಗಳ ಕಾಲ ಚಿತ್ರೀಕರಣ ನಡೆದಿದೆ.WhatsApp Image 2022 05 01 at 10.39.45 PM 1

ನಾಲ್ಕು ಹಾಡುಗಳು ಹಾಗೂ ಒಂದು ಸಾಹಸ ಸನ್ನಿವೇಶ ಈ ಚಿತ್ರದಲ್ಲಿದೆ.
ಮುರಳಿ ನೃತ್ಯ ನಿರ್ದೇಶನ, ಕೊಟ್ರೇಶ್ – ಸುರೇಶ್ ಛಾಯಾಗ್ರಹಣ, ಲಿಂಗರಾಜ್ ಸಂಕಲನ ಹಾಗೂ ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಅಮರ್ ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಖುಷಿ. ಸೊಫಿಯಾ, ಸುಜಾತ, ರೇಖಾದಾಸ್, ಸಂಗೀತ, ಸಿದ್ದಾರ್ಥ, ಲಕ್ಷ್ಮಣ್, ಸುರೇಶ್, ಕೃಷ್ಣ ರೆಡ್ಡಿ ಮುಂತಾದವರು ” ರೈತ” ಚಿತ್ರದ ತಾರಾಬಳಗದಲ್ಲಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…