ಪಿಎಂ ಕೇರ್ಸ್ ಫಂಡ್‌ ಸಲಹಾ ಮಂಡಳಿಗೆ ಕನ್ನಡತಿ ಸುಧಾ ಮೂರ್ತಿ

ಕರೊನಾ ಮೊದಲ ಲಾಕ್​ಡೌನ್​ ಸಂದರ್ಭದಲ್ಲಿ ಸ್ಥಾಪನೆಯಾದ ಪಿಎಂ ಕೇರ್ಸ್​ ಫಂಡ್​ನ ಸಲಹಾ ಮಂಡಳಿಗೆ ಹೆಮ್ಮೆಯ ಕನ್ನಡತಿ ಮತ್ತು ಇನ್ಫೋಸಿಸ್​ ಫೌಂಡೇಶನ್​ನ ಅಧ್ಯಕ್ಷೆ ಸುಧಾ ಮೂರ್ತಿ ಆಯ್ಕೆಯಾಗಿದ್ದಾರೆ.

ಪ್ರಧಾನ ಮಂತ್ರಿಗಳ ನಾಗರಿಕ ಸಹಾಯ ಮತ್ತು ತುರ್ತು ಪರಿಸ್ಥಿತಿಗಳ ನಿಧಿಯಾಗಿರುವ ಈ ಪಿಎಂ ಕೇರ್ಸ್​ ಫಂಡ್​, ಎರಡೂವರೆ ವರ್ಷಗಳ ಹಿಂದೆ ಮಾರ್ಚ್ 28, 2020ರಂದು ಸ್ಥಾಪನೆಯಾಯಿತು. ಈ ನಿಧಿಗೆ ಕಾರ್ಪೊರೇಟ್​ ಸಂಸ್ಥೆಗಳು ಸೇರಿದಂತೆ ಎಲ್ಲಾ ನಾಗರಿಕರು ಕೊಡುಗೆ ನೀಡುವ ಮೂಲಕ ವಿಪತ್ತಿನ ಸಂದರ್ಭದಲ್ಲಿ ದೇಶದ ಜನರಿಗೆ ಸಹಾಯ ಮಾಡಬಹುದಾಗಿದೆ.WhatsApp Image 2022 09 23 at 9.16.19 AM

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬುಧವಾರ ನಡೆದ ಸಭೆಯಲ್ಲಿ ಈ ನಿಧಿಗೆ ಟ್ರಸ್ಟಿಗಳು ಮತ್ತು ಸಲಹಾ ಮಂಡಳಿಯ ಸದಸ್ಯರನ್ನು ನಾಮನಿರ್ದೇಶನ ಮಾಡಲಾಯಿತು. ಪಿಎಂ ಕೇರ್ಸ್ ಫಂಡ್‌ನ ಟ್ರಸ್ಟಿಗಳಾಗಿ ಟಾಟಾ ಸನ್ಸ್ ಅಧ್ಯಕ್ಷ ರತನ್ ಟಾಟಾ, ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಕೆ.ಟಿ. ಥಾಮಸ್ ಮತ್ತು ಮಾಜಿ ಲೋಕಸಭಾ ಸ್ಪೀಕರ್ ಕರಿಯಾ ಮುಂಡಾ ಆಯ್ಕೆಯಾದರೆ, ಟ್ರಸ್ಟ್ ಮಾಜಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ರಾಜೀವ್ ಮೆಹ್ರಿಷಿ, ಮಾಜಿ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಮತ್ತು ಟೀಚ್ ಫಾರ್ ಇಂಡಿಯಾ ಸಹ-ಸಂಸ್ಥಾಪಕ ಆನಂದ್ ಶಾ ಅವರನ್ನು ಸಲಹಾ ಮಂಡಳಿಗೆ ನೇಮಿಸಲಾಗಿದೆ. ಈ ಸಭೆಯಲ್ಲಿ ನೂತನ ಟ್ರಸ್ಟಿಗಳು ಮತ್ತು ಸಲಹೆಗಾರರು ಭಾಗವಹಿಸಿದ್ದರು.WhatsApp Image 2022 09 23 at 9.16.19 AM 1

ಹೊಸ ಟ್ರಸ್ಟಿಗಳು ಮತ್ತು ಸಲಹೆಗಾರರ ಆಯ್ಕೆಯಿಂದ ಪಿಎಂ ಕೇರ್ಸ್ ಫಂಡ್‌ನ ಕಾರ್ಯಚಟುವಟಿಕೆಗಳು ಇನ್ನಷ್ಟು ವ್ಯಾಪಕವಾಗಲಿವೆ ಎಂದು ಪ್ರಧಾನಮಂತ್ರಿ ಇದೇ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ ಜೀವನದಲ್ಲಿನ ಅವರ ಅಪಾರ ಅನುಭವವು, ಈ ನಿಧಿ ಹೆಚ್ಚುಹೆಚ್ಚು ಜನರ ಅಗತ್ಯಗಳಿಗೆ ಸ್ಪಂದಿಸುವಂತೆ ಮಾಡಲು ಸಹಾಯ ಮಾಡುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಸಭೆಯಲ್ಲಿ, 4345 ಮಕ್ಕಳನ್ನು

ವಿದ್ಯಾಭ್ಯಾಸವನ್ನು ಪೋಷಿಸುವ ಹೊಸ ಯೋಜನೆ ಸೇರಿದಂತೆ ಪಿಎಂ ಕೇರ್ಸ್ ನಿಧಿಯ ಸಹಾಯದಿಂದ ಕೈಗೊಂಡಿರುವ ಗಂಭೀರ ಉಪಕ್ರಮಗಳ ಕುರಿತು ಪ್ರಸ್ತುತಿಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉಪಸ್ಥಿತರಿದ್ದರು.WhatsApp Image 2022 09 23 at 9.16.19 AM 2

ಟೆಲ್ಕೋನಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುವ ಮೂಲಕ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಸುಧಾ ಮೂರ್ತಿ, ಆ ನಂತರ ಇನ್ಫೋಸಿಸ್​ ಫೌಂಡೇಶನ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ಇದರ ಜತೆಗೆ ಅವರು ತಮ್ಮ ಬರಹಗಳಿಂದ ಸಾವಿರಾರು ಜನರನ್ನು ಪ್ರೇರೇಪಿಸಿದ್ದಾರೆ. ಸುಧಾ ಮೂರ್ತಿ ಅವರಿಗೆ ಭಾರತ ಸರ್ಕಾರವು 2006ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ. ಈಗ ಅವರು ಪಿಎಂ ಕೇರ್ಸ್ ಫಂಡ್‌ ಸಲಹಾ ಮಂಡಳಿಗೆ ಆಯ್ಕೆಯಾಗಿರುವುದು ಕನ್ನಡಿಗರಿಗೆ ಇನ್ನಷ್ಟು ಖುಷಿ ನೀಡುವ ವಿಚಾರವಾಗಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…