ರಾಜವರ್ಧನ್ ನಟನೆಯ ‘ಹಿರಣ್ಯ’ನಿಗೆ ಕುಂಬಳಕಾಯಿ…

Pumpkin for Rajavardhan starrer Hiranya

Pumpkin for Rajavardhan starrer Hiranyaಮ್ಯಾಸೀವ್ ಸ್ಟಾರ್ ರಾಜವರ್ಧನ್ ನಟನೆಯ ಬಹುನಿರೀಕ್ಷಿತ ಹಿರಣ್ಯ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದೆ. ಬೆಂಗಳೂರು ಸುತ್ತಮುತ್ತ ಇಡೀ ಚಿತ್ರದ ಚಿತ್ರೀಕರಣ ನಡೆಸಲಾಗಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ.Pumpkin for Rajavardhan starrer Hiranya

ಹಿರಣ್ಯ ಸಿನಿಮಾಗೆ ಪ್ರವೀಣ್ ಅವ್ಯುಕ್ತ್ ಆಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ಹಲವು ಶಾರ್ಟ್‌ ಮೂವಿಗಳನ್ನು ಮಾಡಿದ ಅನುಭವ ಇರುವ ಪ್ರವೀಣ್‌ ಅವ್ಯೂಕ್ತ್ ಈ ಚಿತ್ರದ ಮೂಲಕ ಪೂರ್ಣ ಪ್ರಮಾಣದಲ್ಲಿ ನಿರ್ದೇಶಕನಾಗಿ ಸ್ಯಾಂಡಲ್‌ ವುಡ್‌ಗೆ ಪರಿಚಯವಾಗುತ್ತಿದ್ದಾರೆ. ರಾಜವರ್ಧನ್ ಗೆ ಜೋಡಿಯಾಗಿ ಮಾಡೆಲ್ ರಿಹಾನಾ ನಟಿಸಿದ್ದು, ಈ ಚಿತ್ರದ ಮೂಲಕ ರಿಹಾನಾ ಚಂದನವನ ಪ್ರವೇಶಿಸಿದ್ದಾರೆ.Pumpkin for Rajavardhan starrer Hiranya

ಕಂಪ್ಲೀಟ್ ಆಕ್ಷನ್ ಥ್ರಿಲ್ಲರ್ ಜೊತೆಗೆ ತಾಯಿ ಸೆಂಟಿಮೆಂಟ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಸ್ಪೆಷಲ್ ರೋಲ್ ನಲ್ಲಿ ಕಾಣಿಸಿಕೊಂಡಿದ್ದು, ಹುಲಿ ಕಾರ್ತಿಕ್, ಅರವಿಂದ್ ರಾವ್, ದಿಲೀಪ್ ಶೆಟ್ಟಿ ಮುಂತಾದವರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.Pumpkin for Rajavardhan starrer Hiranya

“ವೇದಾಸ್‌ ಇನ್ಫಿನಿಟಿ ಪಿಕ್ಚರ್’ ಬ್ಯಾನರ್‌ನಡಿ ವಿಘ್ನೇಶ್ವರ. ಯು ಹಾಗೂ ವಿಜಯ್‌ ಕುಮಾರ್‌ ಬಿ.ವಿ “ಹಿರಣ್ಯ’ ಸಿನಿಮಾಗೆ ಬಂಡವಾಳ ಹೂಡಿ ನಿರ್ಮಿಸುತ್ತಿದ್ದು, ಚಿತ್ರಕ್ಕೆ ಯೋಗೇಶ್ವರನ್‌ ಆರ್‌ ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಇರುವ ಚಿತ್ರತಂಡ ಆದಷ್ಟು ಬೇಗ ಸಿನಿಮಾವನ್ನು ತೆರೆಗೆ ತರುವ ಪ್ರಯತ್ನ ನಡೆಸುತ್ತಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…