ಲಹರಿಗೆ ನಲವತ್ತೆಂಟು ವರುಷ. ರಿಕ್ಕಿಕೇಜ್ ಗೆ ಮತ್ತೆ ಗ್ರ್ಯಾಮಿ ಬಂದ ಹರುಷ.

ಇಬ್ಬರ ಈ ಸಾಧನೆಗೆ ಸನ್ಮಾನ್ಯ ಮುಖ್ಯಮಂತ್ರಿಗಳು ಸೇರಿದಂತೆ ಅನೇಕ ಗಣ್ಯರಿಂದ ಅಭಿನಂದನೆ.

ಸಂಗೀತ ಕ್ಷೇತ್ರದಲ್ಲಿ ತನ್ನದೇ ಆದ ಹೆಸರು ಮಾಡಿರುವ ಲಹರಿ ಸಂಸ್ಥೆ ಆರಂಭವಾಗಿ ನಲವತ್ತೆಂಟು ವರ್ಷಗಳು ಕಳೆದಿದೆ. ಈಗ ಮತ್ತೊಂದು ವಿಶೇಷವೆಂದರೆ ಈ ಸಂಸ್ಥೆಯ ಮೂಲಕ ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿಕೇಜ್ ನೇತೃತ್ವದಲ್ಲಿ “ಡಿವೈನ್ ಟೈಡ್ಸ್” ಎಂಬ ಅದ್ಭುತ
ಆಲ್ಬಂ ಮೂಡಿಬಂದಿದೆ. ಈ ಆಲ್ಬಂ ಗಾಗಿ ರಿಕ್ಕಿಕೇಜ್ ಪ್ರತಿಷ್ಠಿತ ಗ್ರ್ಯಾಮಿ ಅವಾರ್ಡ್ ಪಡೆದುಕೊಂಡಿದ್ದಾರೆ. ರಿಕ್ಕಿಕೇಜ್ ಅವರಿಗೆ ಗ್ರ್ಯಾಮಿ ಅವಾರ್ಡ್ ಬಂದಿರುವುದು ಇದು ಎರಡನೇ ಬಾರಿ.

ಈ ಸಂತಸ ಹಂಚಿಕೊಳ್ಳಲು ಲಹರಿ ಸಂಸ್ಥೆ ಆತ್ಮೀಯ ಸಮಾರಂಭ ಏರ್ಪಡಿಸಿತ್ತು. ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವರಾದ ಸುಧಾಕರ್, ಪಬ್ಲಿಕ್ ಟಿವಿ ಮುಖ್ಯಸ್ಥರಾದ ರಂಗನಾಥ್, ಕ್ರೇಜಿಸ್ಟಾರ್ ರವಿಚಂದ್ರನ್, ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಾಜೇಂದ್ರ ಸಿಂಗ್ ಬಾಬು, ವಸಿಷ್ಠ ಸಿಂಹ, ಗುರುಕಿರಣ್, ಉದಯ್ ಕೆ ಮೆಹ್ತಾ, ಕೆ.ಪಿ. ಶ್ರೀಕಾಂತ್ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.WhatsApp Image 2022 05 03 at 8.54.44 AM

ನಾನು ಲಹರಿ ಸಂಸ್ಥೆಯ ಮನೋಹರ್ ನಾಯ್ಡು ಹಾಗೂ ವೇಲು ಅವರನ್ನು ಮೊದಲಿನಿಂದಲೂ ಬಲ್ಲೆ. ನಮ್ಮ ಪಕ್ಕದ ಮನೆಯವರು ಅವರು. ಲಹರಿ ಸಂಸ್ಥೆ ಈ ಎತ್ತರಕ್ಕೆ ಬೆಳೆದಿರುವುದು ಖುಷಿ ತಂದಿದೆ. ಇಲ್ಲಿಗೆ ಬಂದಾಗ ಈ ಆಲ್ಬಂ ನ ಒಂದು ಹಾಡು ನೋಡಿ ತುಂಬಾ ಸಂತೋಷವಾಯಿತು. ಗ್ರ್ಯಾಮಿ ಬಗ್ಗೆ ಅಷ್ಟು ಗೊತ್ತಿರಲಿಲ್ಲ. ಅದರ ಬಗ್ಗೆ ತಿಳಿದು ಆಶ್ಚರ್ಯವಾಯಿತು. ರಿಕ್ಕಿಕೇಜ್ ಎರಡು ಸಲ ಈ ಪ್ರಶಸ್ತಿ ಪಡೆದಿರುವುದು ನಿಜಕ್ಕೂ ಅಭಿನಂದನಾರ್ಹ. ಅವರ ಸಾಧನೆ ಇಡೀ ಕನ್ನಡಿಗರು ಹೆಮ್ಮೆ ಪಡುವಂತದು. ಅವರಿಂದ ಇನ್ನಷ್ಟು ಈ ರೀತಿಯ ಸಾಧನೆಯಾಗಲಿ. ಅದು ಎಲ್ಲರಿಗೂ ಸ್ಪೂರ್ತಿಯಾಗಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದರು.

ನನಗೆ ಇದು ಕುಟುಂಬದ ಸಮಾರಂಭ ಇದ್ದ ಹಾಗೆ. ಕಳೆದವರ್ಷ ಕೊರೋನ ದಿಂದ ಅನೇಕ ಜನ ಹತ್ತಿರದವರನ್ನು ಕಳೆದುಕೊಂಡಿದ್ದೀವಿ. ಕೆಟ್ಟಸಮಯ ಹೋದ ಮೇಲೆ ಒಳ್ಳೆಯ ಸಮಯ ಬರುತ್ತದೆ ಎನ್ನುತ್ತಾರೆ. ಈಗ ಒಳ್ಳೆಯ ಸಮಯ ಬಂದಿದೆ. ಕೆ.ಜಿ.ಎಫ್ ೨ ಚಿತ್ರ ಪ್ರಚಂಡ ಜಯಭೇರಿ ಬಾರಿಸುತ್ತಿದೆ. ರಿಕ್ಕಿಕೇಜ್ ಗೆ ಗ್ರ್ಯಾಮಿ ಬಂದಿದೆ. ಇನ್ನೂ ಲಹರಿ ಸಂಸ್ಥೆ ಜೊತೆ ನನ್ನ ಸ್ನೇಹ ಬಹಳ ವರ್ಷಗಳದು. ನನ್ನ ಪ್ರೇಮಲೋಕ ಸೇರಿದಂತೆ ಅನೇಕ ಚಿತ್ರಗಳ ಹಾಡುಗಳು ಈ ಸಂಸ್ಥೆ ಮೂಲಕ ಬಿಡುಗಡೆಯಾಗಿದೆ ಅಂದರು ಕ್ರೇಜಿಸ್ಟಾರ್ ರವಿಚಂದ್ರನ್.

ನಿಜಕ್ಕೂ ಇದೊಂದು ಆತ್ಮೀಯ ಸಮಾರಂಭ. “ಮನ ಮೆಚ್ಚಿದ ಹುಡುಗಿ” ಸೇರಿದಂತೆ ನಮ್ಮ ಸಂಸ್ಥೆಯ ಅನೇಕ ಚಿತ್ರಗಳು ಲಹರಿ ಮೂಲಕ ಬಿಡುಗಡೆಯಾಗಿದೆ. ಈಗ ಅವರ ಸಂಸ್ಥೆಯ ನಿರ್ಮಾಣದ ಆಲ್ಬಂ ಸಾಂಗ್ ಗಾಗಿ ರಿಕ್ಕಿಕೇಜ್ ಗ್ರ್ಯಾಮಿ ಅವಾರ್ಡ್ ಪಡೆದುಕೊಂಡಿದ್ದಾರೆ. ಇಬ್ಬರಿಗೂ ಶುಭಾಶಯ ಎಂದರು ಶಿವರಾಜಕುಮಾರ್.WhatsApp Image 2022 05 03 at 8.54.54 AM

ಕೇವಲ ಐನ್ನೂರು ರೂಪಾಯಿಯಿಂದ ಆರಂಭವಾದ ಈ ಸಂಸ್ಥೆ ಈ ಮಟ್ಟಕ್ಕೆ ಬರಲು ಕಾರಣರಾದ ಪ್ರತಿಯೊಬ್ಬರಿಗೂ ಧನ್ಯವಾದ. ಇದರಲ್ಲಿ ಅಣ್ಣ ಮನೋಹರ್ ನಾಯ್ಡು ಅವರ ಪರಿಶ್ರಮ ಸಾಕಷ್ಟಿದೆ. ಲಹರಿ ನಿರ್ಮಾಣದ ಆಲ್ಬಂ ಗಾಗಿ ರಿಕ್ಕಿಕೇಜ್ ಅವರಿಗೆ ಗ್ರ್ಯಾಮಿ ಪ್ರಶಸ್ತಿ ಬಂದಿರುವುದು ಸಂತೋಷ. ಅದಕ್ಕಾಗಿ ರಿಕ್ಕಿಕೇಜ್ ಅವರಿಗೆ ಧನ್ಯವಾದ ಎಂದರು ಲಹರಿ ವೇಲು.

ಲಹರಿ ಜೊತೆಗಿನ ಸಂಬಂಧ ಹಾಗೂ ಈ ಆಲ್ಬಂ ಸಾಂಗ್ ಬಗ್ಗೆ ಎಳೆಎಳೆಯಾಗಿ ಬಿಡಿಸಿಟ್ಟ ರಿಕ್ಕಿಕೇಜ್ ಎಲ್ಲರಿಗೂ ಧನ್ಯವಾದ ಅರ್ಪಿಸಿದರು.

ಪಬ್ಲಿಕ್‌ ಟಿ ವಿ ರಂಗನಾಥ್ ಅವರು ಸೇರಿದಂತೆ ಸಮಾರಂಭಕ್ಕೆ ಆಗಮಿಸಿದ್ದ ಗಣ್ಯರು ಲಹರಿ ಸಂಸ್ಥೆ ಹಾಗೂ ರಿಕ್ಕಿಕೇಜ್ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…