“1 RAಬರಿ ಕಥೆ” ಸದ್ಯದಲ್ಲೇ ಬಿಡುಗಡೆ

"1 RABari Katha" release soon

ಬೇಲೂರಿನ ಸಂತೋಷ್ ನಾಗೇನಹಳ್ಳಿ ಅವರು ಸಮನ್ವಿ ಕ್ರಿಯೇಷನ್ಸ್ ಬೇಲೂರು ಸಂಸ್ಥೆಯಡಿ ನಿರ್ಮಿಸಿರುವ ಪ್ರಥಮ ಚಿತ್ರ “1 RAಬರಿ ಕಥೆ”. ಇತ್ತೀಚೆಗಷ್ಟೆ ತನ್ನ ಚಿತ್ರೀಕರಣ ಮುಗಿಸಿಕೊಂಡು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿರುವ ಚಿತ್ರತಂಡ ಶೀಘ್ರದಲ್ಲೇ ಚಿತ್ರವನ್ನು ತೆರೆಗೆ ತರಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ."1 RABari Katha" release soon

ಎಲ್ಲಾ ವರ್ಗದ ಪ್ರೇಕ್ಷಕರನ್ನು ಸೆಳೆಯುವಂಥ ಪಕ್ಕಾ ಮಾಸ್ ಕಮರ್ಷಿಯಲ್ ರೊಮ್ಯಾಂಟಿಕ್, ಕಾಮಿಡಿ, ಆಕ್ಷನ್, ಸಸ್ಪೆನ್ಸ್- ಥ್ರಿಲ್ಲರ್, ಸೆಂಟಿಮೆಂಟ್ ಕಥಾಹಂದರ ಒಳಗೊಂಡಿರುವ ‘ಒನ್ ರಾಬರಿ ಕಥೆ’ ಚಿತ್ರಕ್ಕೆ ಗೋಪಾಲ್ ಹಳ್ಳೇರ್ ಹೊನ್ನಾವರ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನದ ಜವಾಬ್ದಾರಿ ನಿಭಾಯಿಸಿದ್ದಾರೆ."1 RABari Katha" release soon

ಬಹುತಾರಾಗಣ ಒಳಗೊಂಡ ಈ ಚಿತ್ರದಲ್ಲಿ ರಕ್ಕಂ ಖ್ಯಾತಿಯ ರಣಧೀರ್ ಗೌಡ ನಾಯಕನಾಗಿ ನಟಿಸಿದರೆ, ಹೊಸ ಪ್ರತಿಭೆ ರಿಷ್ವಿ ಭಟ್ ನಾಯಕಿಯ ಪಾತ್ರ ನಿರ್ವಹಿಸಿದ್ದಾರೆ. ನಿರ್ಮಾಪಕ ಬೇಲೂರಿನ ಸಂತೋಷ್ ನಾಗೇನಹಳ್ಳಿ ಅವರು ನಿರ್ಮಾಣದ ಜೊತೆಗೆ ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ."1 RABari Katha" release soon

ಜೊತೆಗೆ ಸುಂದರ್ ರಾಜ್, ಕರಿಸುಬ್ಬು, ಕಡ್ಡಿಪುಡಿ ಚಂದ್ರು, ಶಿವರಾಜ್ ಕೆ.ಆರ್. ಪೇಟೆ, ತಬಲಾನಾಣಿ, ಜಹಾಂಗೀರ್, ಗಿರೀಶ್ ಶಿವಣ್ಣ, ಮೂಗ್ ಸುರೇಶ್, ಎಂ.ಕೆ. ಮಠ್, ನವೀನ್ ಪಡೀಲ್, ಸಂಜು ಬಸಯ್ಯ ಮತ್ತು ಕಿರುತೆರೆ ಹಾಗೂ ಮಜಾ ಟಾಕೀಸ್ ನ ಹಲವಾರು ಕಲಾವಿದರು ನಟಿಸಿದ್ದಾರೆ."1 RABari Katha" release soon

ಬೇಲೂರು, ಚಿಕ್ಕಮಗಳೂರು, ಸಕಲೇಶಪುರ, ಹೊನ್ನಾವರ ಮತ್ತು ಸಿಂದನೂರಿನ ರವಕುಂದದಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಪ್ರಕಾಶ್ ಜಿ. ಅವರ ಸಂಭಾಷಣೆ, ಸಂತೋಷ್ ನಾಗೇನಹಳ್ಳಿ, ಪ್ರಕಾಶ್ ಅವರ ಸಾಹಿತ್ಯ, ಡಿರೆಂಟ್ ಡ್ಯಾನಿ ಅವರ ಸಾಹಸ, ಹರೀಶ್ ಜಿಂದೆ ಅವರ ಛಾಯಾಗ್ರಹಣ, ಸಂಜಿವರೆಡ್ಡಿ ಅವರ ಸಂಕಲನ, ಶ್ರೀವತ್ಸ ಅವರ ಸಂಗೀತ ಮತ್ತು ಚಾಮರಾಜ್, ರೋಹಿತ್ ಅರುಣ್ ಕೊರಿಯೋಗ್ರಫಿ ಈ ಚಿತ್ರಕ್ಕಿದೆ."1 RABari Katha" release soonWhatsApp Image 2023 02 13 at 12.58.25 PM WhatsApp Image 2023 02 13 at 12.58.26 PM WhatsApp Image 2023 02 13 at 12.58.21 PM 1

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…