ಕನ್ನಡಕ್ಕೆ ವಿಧು ವಿನೋದ್‍ ಚೋಪ್ರಾ ನಿರ್ದೇಶನದ ’12th ಫೇಲ್‍’ ಚಿತ್ರ

ಕೆ ಆರ್ ಜಿ ಸ್ಟುಡಿಯೋಸ್‍ನಿಂದ ಕರ್ನಾಟಕದಲ್ಲಿ ವಿತರಣೆ; ಅ.27ಕ್ಕೆ ಬಿಡುಗಡೆ

ಕರ್ನಾಟಕದ ಜನತೆಗೆ ಗುಣಮಟ್ಟದ ಚಿತ್ರಗಳನ್ನು ತಲುಪಿಸುವ ನಿಟ್ಟಿನಲ್ಲಿ ಕನ್ನಡದ ಜನಪ್ರಿಯ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಕೆ ಆರ್ ಜಿ ಸ್ಟುಡಿಯೋಸ್‍ ಯಾವತ್ತೂ ಮುಂಚೂಣಿಯಲ್ಲಿದ್ದು, ಈ ಸಂಬಂಧ ಹೊಸ ಹೆಜ್ಜೆ ಇಟ್ಟಿದೆ. ‘ಪರಿಂದಾ’, ‘1942 ಎ ಲವ್‍ ಸ್ಟೋರಿ’ ಮುಂತಾದ ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸುವುದರ ಜೊತೆಗೆ ‘ಮುನ್ನಾಭಾಯ್‍’ ಸರಣಿಯ ನಿರ್ಮಾಪಕರಾದ ಬಾಲಿವುಡ್‍ನ ಖ್ಯಾತ ನಿರ್ಮಾಪಕ ಮತ್ತು ನಿರ್ದೇಶಕ ವಿಧು ವಿನೋದ್‍ ಚೋಪ್ರಾ ಅವರೊಂದಿಗೆ ಇದೀಗ ಕಾರ್ತಿಕ್‍ ಗೌಡ ಮತ್ತು ಯೋಗಿ ಜಿ ರಾಜ್‍ ಒಡೆತನದ ಕೆ ಆರ್ ಜಿ ಸ್ಟುಡಿಯೋಸ್‍ ಕೈಜೋಡಿಸಿದೆ. ವಿಧು ವಿನೋದ್‍ ಚೋಪ್ರಾ ಅವರ ’12th ಫೇಲ್‍’  12th Fail Kannada Movie ಚಿತ್ರವನ್ನು ಕನ್ನಡ ಮತ್ತು ಹಿಂದಿಯಲ್ಲಿ ಅ. 27ರಂದು ರಾಜ್ಯಾದ್ಯಂತ ಬಿಡುಗಡೆ ಮಾಡುವುದಕ್ಕೆ ಸಜ್ಜಾಗಿದೆ.12th Fail Kannada Movie 2
’12th ಫೇಲ್‍’ ಚಿತ್ರವು ಅನುರಾಗ್‍ ಪಾಠಕ್‍ ಅವರ ಅದೇ ಹೆಸರಿನ ಜನಪ್ರಿಯ ಕಾದಂಬರಿಯನ್ನು ಆಧರಿಸಿದೆ. ಹಲವು ಅಡೆತಡೆಗಳನ್ನು ದಾಟಿ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾಸ್‍ ಆಗಿ, ಅಸಾಧ್ಯವನ್ನು ಸಾಧ್ಯವನ್ನಾಗಿಸಿದ ಐಪಿಎಸ್ ಅ‍ಧಿಕಾರಿ ಮನೋಜ್‍ ಕುಮಾರ್ ಶರ್ಮಾ ಅವರ ಜೀವನವನ್ನಾಧರಿಸಿದ ಈ ಚಿತ್ರದಲ್ಲಿ ‘ಎ ಡೆಥ್‍ ಇನ್‍ ದಿ ಗುಂಜ್‍’, ‘ಚಪಾಕ್‍’, ‘ಹಸೀನ್‍ ದಿಲ್ರುಬಾ’ ಮುಂತಾದ ಚಿತ್ರಗಳ ಖ್ಯಾತಿಯ ವಿಕ್ರಾಂತ್ ಮಾಸ್ಸೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.12th Fail Kannada Movie 2

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…