ಸೆಟ್ಟೇರಿದ 1900 ಚಿತ್ರ

1900 kannada movie muhurtha

ಹಾರರ್, ಸಸ್ಪೆನ್ಸ್ ಅಂಶಗಳನ್ನು ಒಳಗೊಂಡಿರುವ ’1900’ ಚಿತ್ರದ ಮುಹೂರ್ತ ಸಮಾರಂಭವು ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ನಡೆಯಿತು. ಮೊದಲ ದೃಶ್ಯಕ್ಕೆ ಲವ್ ಮಾಕ್ಟೆಲ್ ಖ್ಯಾತಿಯ ಕೃಷ್ಣ ಕ್ಲಾಪ್ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಪದ್ಮಾವತಿ ಪ್ರೊಡಕ್ಷನ್ ಅಡಿಯಲ್ಲಿ ರಾಜೇಶ್.ಬಿ ಮತ್ತು ಉಮೇಶ್.ಕೆ.ಎನ್ ಬಂಡವಾಳ ಹೂಡುತ್ತಿದ್ದಾರೆ.1900 kannada movie

ಮೂಡಿಬಿದರೆಯ ರಾಜೇಶ್.ಬಿ ಮೂಲತ: ನಟನಾಗಿ ಗುರುತಿಸಿಕೊಂಡಿದ್ದು, ಇದರ ಅನುಭವದಿಂದಲೇ ಸಿನಿಮಾಕ್ಕೆ ಕಥೆ, ನಿರ್ದೇಶನ ಮಾಡುವ ಜತೆಗೆ ನಿರ್ಮಾಣದಲ್ಲಿ ಪಾಲುದಾರರಾಗಿದ್ದಾರೆ. ಉಮೇಶ್.ಕೆ.ಎನ್ ದುಡಿದ ಹಣವನ್ನು ಚಿತ್ರಕ್ಕೆ ವಿನಿಯೋಗಿಸುತ್ತಿದ್ದು ಅಲ್ಲದೆ ಒಂದು ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಶಾಪ ಎನ್ನುವುದು ಇನ್ನೂ ಜೀವಂತವಾಗಿ ಉಳಿದಿದೆ ಎಂದು ಇಂಗ್ಲೀಷ್‌ದಲ್ಲಿ ಅಡಬರಹವಿದೆ.1900 kannada movie 1900ರಲ್ಲಿ ಶುರುವಾಗುವ ಕಥೆಯು ಶಿವಪುರ ಗ್ರಾಮದಲ್ಲಿ ತೆರೆದುಕೊಳ್ಳುತ್ತದೆ. ಅತೀಂದ್ರೆಯ ವಿದ್ಯೆಗಳನ್ನು ಕಲಿತಿರುವ ಹುಂಬನೊಬ್ಬ ಅಲ್ಲಿನ ಹಿತಕ್ಕಾಗಿ ನರಬಲಿ ಕೊಡುತ್ತಿರುತ್ತಾನೆ. ಇದನ್ನು ತಿಳಿದ ಜನರು ಈತನನ್ನು ಜೀವಂತ ಸುಡುತ್ತಾರೆ. ಆ ಸಂದರ್ಭದಲ್ಲಿ ಇವನು ಶಾಪ ಕೊಡುತ್ತಾನೆ. ಅದೇ ಶಾಪವು ಪ್ರಸಕ್ತ ಕಾಲಕ್ಕೂ ಮುಂದುವರೆದಿರುತ್ತದೆ. ಇದನ್ನು ತನಿಖೆ ಮಾಡಲು ಪ್ರಾಚ್ಯವಸ್ತು ಮತ್ತು ವಸ್ತು ಸಂಗ್ರಹಾಲಯಗಳ ಇಲಾಖೆಯ ಅಧಿಕಾರಿ ನೇಮಕಗೊಳ್ಳುತ್ತಾರೆ. ಅವರು ಸ್ಥಳಕ್ಕೆ ಭೇಟಿ ನೀಡಿದಾಗ ಅಲ್ಲಿ ನಡೆಯುವ ಘಟನೆಗಳು, ಕೊನೆಗೆ ಗ್ರಾಮವನ್ನು ಕಷ್ಟದಿಂದ ಪಾರು ಮಾಡುತ್ತಾರಾ? ಎಂಬುದು ಒಂದು ಏಳೆಯ ಸಾರಾಂಶವಾಗಿದೆ.1900 kannada movie ಕಿರುತೆರೆ ನಟಿ ಡಾ.ಪೂಜಾರಮೇಶ್ ಈ ಹಿಂದೆ ಪೋಷಕ ಪಾತ್ರಗಳಲ್ಲಿ ಅಭಿನಯಿಸಿದ್ದು, ಇದರ ಮುಖಾಂತರ ಪೂರ್ಣ ಪ್ರಮಾಣದ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇವರೊಂದಿಗೆ ವಿ.ಮನೋಹರ್, ಮಿಮಿಕ್ರಿಗೋಪಿ, ಮಜಾಭಾರತ್ ಚಂದ್ರಪ್ರಭಾ, ಗುರುದೇವ್, ಮದನ್‌ರಾಜ್, ಮೀರಶ್ರೀ, ಚೈತನ್ಯಶೆಟ್ಟಿ ತಾರಬಳಗವಿದೆ. ಸಂಗೀತ ಸಂಯೋಜಕರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಛಾಯಾಗ್ರಹಣ ಅರುಣ್‌ನಾಗ್, ಸಂಕಲನ ನಾನಿಕೃಷ್ಣ ಅವರದಾಗಿದೆ. ಬೆಂಗಳೂರು, ಮಂಗಳೂರು, ಚಿಕ್ಕಮಗಳೂರು, ಉಡುಪಿ, ಮೂಡಿಗೆರೆ, ಕನಕಪುರ ಕಡೆಗಳಲ್ಲಿ ಅಕ್ಟೋಬರ್ ಕೊನೆವಾರದಿಂದ ಚಿತ್ರೀಕರಣ ನಡೆಸಲು ತಂಡವು ಯೋಜನೆ ರೂಪಿಸಿಕೊಂಡಿದೆ.1900 kannada movie

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…