ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ “ಕುಟೀರ” ಚಿತ್ರಕ್ಕೆ ಚಾಲನೆ .

25th film Komal Kutiera

ಇದು ಕೋಮಲ್ ಕುಮಾರ್ ನಾಯಕರಾಗಿ ನಟಿಸುತ್ತಿರುವ 25ನೇ ಚಿತ್ರ .

ಕಂಸಾಳೆ ಫಿಲಂಸ್ ಲಾಂಛನದಲ್ಲಿ ಮಧು ಮರಿಸ್ವಾಮಿ ನಿರ್ಮಿಸುತ್ತಿರುವ, ಅನೂಪ್ ಅಂಟೋನಿ ನಿರ್ದೇಶನದ ಹಾಗೂ ಕೋಮಲ್ ಕುಮಾರ್ ನಾಯಕರಾಗಿ ನಟಿಸುತ್ತಿರುವ 25ನೇ ಚಿತ್ರಕ್ಕೆ “ಕುಟೀರ” ಎಂದು ಹೆಸರಿಡಲಾಗಿದೆ. 25th film Komal Kutiera  ಇತ್ತೀಚಿಗೆ ಈ ಚಿತ್ರದ ಮುಹೂರ್ತ ಸಮಾರಂಭ ಹಾಗೂ ಶೀರ್ಷಿಕೆ ಅನಾವರಣ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಚಿತ್ರರಂಗದ ಸಾಕಷ್ಟು ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಸಮಾರಂಭದಲ್ಲಿ ಭಾಗಿಯಾಗಿದ್ದರು. ನಂತರ “ಕುಟೀರ”ದ ಬಗ್ಗೆ ಚಿತ್ರತಂಡದ ಸದಸ್ಯರು ಮಾಧ್ಯಮದವರಿಗೆ ಮಾಹಿತಿ ನೀಡಿದರು.25th film Komal Kutiera 3

ನಾನು ಈವರೆಗೂ ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದೇನೆ. ಆದರೆ ನಾಯಕನಾಗಿ ನಟಿಸುತ್ತಿರುವ 25 ನೇ ಚಿತ್ರವಿದು ಎಂದು ಮಾತನಾಡಿದ ನಾಯಕ ಕೋಮಲ್ ಕುಮಾರ್, ಇದು ನಾನು ಬಹಳ ಇಷ್ಟಪಡುವ ಹಾರಾರ್ ಕಾಮಿಡಿ ಫ್ಯಾಂಟಸಿ ಜಾನರ್ ನ ಚಿತ್ರ. ಈ ಹಿಂದೆ ನಾನು ಕೆಲವು ಹಾರಾರ್ ಕಾಮಿಡಿ ಚಿತ್ರಗಳಲ್ಲಿ ನಟಿಸಿದ್ದೇನೆ. ಆದರೆ ಈ ಚಿತ್ರದ ಕಥೆ ಸ್ವಲ್ಪ ವಿಭಿನ್ನ. ಚಿತ್ರದ ಹೆಸರೆ ಹೇಳುವಂತೆ ” ಕುಟೀರ” ಎಂದರೆ ಮನೆ. 25th film Komal Kutiera 3ಈ ಚಿತ್ರದಲ್ಲೂ ಒಂದು ದೊಡ್ಡ ಮನೆ ಇರುತ್ತದೆ. ಅಲ್ಲಿಗೆ ಬಂದು ಸಿಕ್ಕಿ ಹಾಕಿಕೊಳ್ಳುವ ನನಗೆ ದೆವ್ವಗಳು ಏನು ಮಾಡುತ್ತದೆ? ಎಂಬುದನ್ನು ನಿರ್ದೇಶಕರು ಕಾಮಿಡಿ ಮೂಲಕ ತೋರಿಸಲಿದ್ದಾರೆ. ಈ ಚಿತ್ರದಲ್ಲಿ ಸಿಜಿ ವರ್ಕ್ ಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದೆ. ಮಧು ಮರಿಸ್ವಾಮಿ ಮೊದಲ ಬಾರಿಗೆ ನಿರ್ಮಾಣ ಮಾಡುತ್ತಿದ್ದಾರೆ. ಅನೂಪ್ ಆಂಟೋನಿ ನಿರ್ದೇಶಿಸುತ್ತಿದ್ದಾರೆ. ಪ್ರಿಯಾಂಕ ತಿಮ್ಮೇಶ್ ನಾಯಕಿಯಾಗಿ ನಟಿಸುತ್ತಿದ್ದಾರೆ. ನುರಿತ ತಂತ್ರಜ್ಞರು ಹಾಗೂ ಅನುಭವಿ ಕಲಾವಿದರ ತಾರಾಬಳಗ “ಕುಟೀರ” ಚಿತ್ರದಲ್ಲಿದೆ. ನನ್ನ ಮೂವತ್ತು ವರ್ಷಗಳ ಸಿನಿಜರ್ನಿಯಲ್ಲಿ ನೀವು ನೀಡುತ್ತಾ ಬಂದಿರುವ ಪ್ರೋತ್ಸಾಹ ಹಾಗೆ ಮುಂದುವರೆಯಲಿ ಎಂದರು.25th film Komal Kutiera 3

ಅವಕಾಶ ನೀಡಿದ ನಿರ್ಮಾಪಕರಿಗೆ ಹಾಗೂ ಯೋಗೇಶ್ ಅವರಿಗೆ ಧನ್ಯವಾದ. ಈ ಕಥೆ ಬರೆದಾಗಲೇ ಕೋಮಲ್ ಅವರೆ ನಾಯಕ ಅಂದುಕೊಂಡಿದ್ದೆ. ನಿರ್ಮಾಪಕರ ಬಳಿಯೂ ಹೇಳಿದ್ದೆ‌. ಕೋಮಲ್ ಅವರು ಕಥೆ ಕೇಳಿ ಇಷ್ಟಪಟ್ಟರು. ಮಾರ್ಚ್ ಎರಡನೇ ವಾರದಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಹೆಚ್ಚಿನ ಚಿತ್ರೀಕರಣ ಬೆಂಗಳೂರಿನಲ್ಲೇ ನಡೆಯಲಿದೆ. “ಗಣಪ” ಚಿತ್ರದ ಖ್ಯಾತಿಯ ಪ್ರಿಯಾಂಕ ತಿಮ್ಮೇಶ್ ಈ ಚಿತ್ರದ ನಾಯಕಿ. ಯಶ್ ಶೆಟ್ಟಿ, ಕಾಕ್ರೋಜ್ ಸುಧೀ ಮುಂತಾದವರು ತಾರಾಬಳಗದಲ್ಲಿದ್ದಾರೆ. ಬಿ.ಜಿ.ಭರತ್ ಸಂಗೀತ ನಿರ್ದೇಶನ, ಅರುಣ್ ಸುರೇಶ್ ಛಾಯಾಗ್ರಹಣ ಹಾಗೂ ಎನ್ ಎಂ ವಿಶ್ವ ಅವರ ಸಂಕಲನವಿರುವ ಈ ಚಿತ್ರಕ್ಕೆ ಶಂಕರ್ ರಾಮನ್ ಸಂಭಾಷಣೆ ಬರೆಯುತ್ತಿದ್ದಾರೆ ಎಂದು ನಿರ್ದೇಶಕ ಅನೂಪ್ ಆಂಟೋನಿ ತಿಳಿಸಿದರು.25th film Komal Kutiera 3

ಈ ಚಿತ್ರ ಆರಂಭವಾಗಲೂ ಪ್ರಮುಖ ಕಾರಣರಾದ ಸಾಜಿದ್ ಖುರೇಶಿ ಅವರಿಗೆ ಹಾಗೂ ನನ್ನ ಮಾವ ಯೋಗೇಶ್ ಅವರಿಗೆ ವಿಶೇಷ ಧನ್ಯವಾದ. ಕೋಮಲ್ ಸರ್ ನಾಯಕರಾಗಿ ನಟಿಸುತ್ತಿರುವುದು ಖುಷಿಯಾಗಿದೆ. ನಮ್ಮ ಮೊದಲ ಚಿತ್ರಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ ಎಂದರು ನಿರ್ಮಾಪಕ ಮಧು ಮರಿಸ್ವಾಮಿ.25th film Komal Kutiera 3

ನನ್ನದು ಈ ಚಿತ್ರದಲ್ಲಿ ಆಂಗ್ಲೋ ಇಂಡಿಯನ್ ಪಾತ್ರ ಎಂದು ನಾಯಕಿ ಪ್ರಿಯಾಂಕ ತಿಮ್ಮೇಶ್ ತಿಳಿಸಿದರು. ಯೋಗೇಶ್, ಸಂಗೀತ ನಿರ್ದೇಶಕ ಭರತ್ ಬಿ.ಜೆ, ಛಾಯಾಗ್ರಾಹಕ ಅರುಣ್ ಸುರೇಶ್, ಸಂಭಾಷಣೆಕಾರ ಶಂಕರ್ ರಾಮನ್ ಹಾಗೂ ಕಲಾವಿದರಾದ ಯಶ್ ಶೆಟ್ಟಿ, ಕಾಕ್ರೋಜ್ ಸುಧೀ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…