’29’ರಿಂದ ರಾಜ್ಯಾದ್ಯಂತ “ನೈಂಟಿ ಭಾಗ್ಯ”
“90 ಬಿಡಿ ಮನೀಗ್ ನಡಿ” ರಿಲೀಸ್..

90 bidi manig nadi release 29th june

ಅಮ್ಮ ಟಾಕೀಸ್ ಬಾಗಲಕೋಟ ಸಂಸ್ಥೆಯಡಿ ರತ್ನಮಾಲಾ ಬಾದರದಿನ್ನಿ ನಿರ್ಮಿಸುತ್ತಿರುವ “90 ಬಿಡಿ ಮನೀಗ್ ನಡಿ” ಚಿತ್ರ ಇದೇ 29ಕ್ಕೆ ಬಿಡುಗಡೆಯಾಗುತ್ತಿದೆ. ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಇದಾಗಿದ್ದು, ಚಿತ್ರದಲ್ಲಿ ವಿಭಿನ್ನ ಗೆಟಪ್ಗಳ ಮೂಲಕ ಇದಾಗಲೇ ಸದ್ದು ಮಾಡಿಕೊಂಡಿದ್ದಾರೆ. ಉತ್ತರ ಕರ್ನಾಟಕದಲ್ಲೇ ಹೆಚ್ಚಾಗಿ ಚಿತ್ರೀಕರಣಗೊಂಡು ಆ ಶೈಲಿಯಲ್ಲೇ ಚಿತ್ರ ಮೂಡಿ ಬಂದಿದ್ದು, ಇದೇ ಇಪ್ಪತ್ತೊಂಬತ್ತರ ಗುರುವಾರದಿಂದ ರಾಜ್ಯಾದ್ಯಂತ ನೈಂಟಿಯ ನಶೆ ಏರಿಸಲು ಚಿತ್ರತಂಡ ಸಜ್ಜಾಗಿದೆ.90 bidi manig nadi  release  29th june

ಉಮೇಶ್ ಬಾದರದಿನ್ನಿ ಮತ್ತು ನಾಗರಾಜ್ ಅರೆಹೊಳೆ ಜಂಟಿಯಾಗಿ ನಿರ್ದೇಶಿಸಿರುವ 90ಯಲ್ಲಿ ಧರ್ಮ,ಕರಿಸುಬ್ಬು, ಪ್ರಶಾಂತ್ ಸಿದ್ದಿ, ನೀತಾ ಮೈಂದರ್ಗಿ, ಪ್ರೀತು ಪೂಜಾ, ರಿಷಭ್ ಬಾದರದಿನ್ನಿ, ಅಭಯ್ ವೀರ್, ಆರ್ ಡಿ ಬಾಬು, ವಿವೇಕ್ ಜಂಬಗಿ, ಮುರುಳಿ ಹೊಸಕೋಟೆ,ರವಿದೀಪ್ ದಳವಾಯಿ ಮುಂತಾದವರು ಬಿರಾದಾರ್ ಜೊತೆ ತೆರೆ ಹಂಚಿಕೊಂಡಿದ್ದಾರೆ. ಕೃಷ್ಣ ನಾಯ್ಕರ್ ಛಾಯಾಗ್ರಹಣ, ಯುಡಿವಿ ವೆಂಕಟೇಶ್ ಸಂಕಲನ, ರಾಕಿ ರಮೇಶ್ ಸಾಹಸವಿರುವ 90ಗೆ ಕಿರಣ್ ಶಂಕರ್ ಮತ್ತು ಶಿವು ಭೇರಗಿ ಸಂಗೀತ ನಿರ್ದೇಶಿನವಿದೆ.90 bidi manig nadi  release  29th june

ಈಗಾಗಲೇ ಚಿತ್ರದ ಎರಡು ಹಾಡು ಬಿಡುಗಡೆ ಕಂಡು ಜನಮನ ರಂಜಿಸಿವೆ. ವಿಶೇಷವಾಗಿ ಉತ್ತರ ಕರ್ನಾಟಕ ಶೈಲಿಯ “ಸಿಂಗಲ್ ಕಣ್ಣಾ ಹಾರಸ್ತಿ ಡಬ್ಬಲ್ ಹಾರನ್ ಬಾರಸ್ತಿ..” ಎಂಬ ಕಚಗುಳಿ ಇಡುವ ಹಾಡು ಸಖತ್ ಸದ್ದಾಗಿದೆ. ಇತ್ತಿಚೆಗೆ ಬಿಡುಗಡೆಯಾದ ಟ್ರೈಲರ್ ಕೂಡ ಸದ್ದು ಮಾಡುತ್ತಿದ್ದು, ನೈಂಟಿ ಕಿಕ್ ಏರಿಸುವ ಜೊತೆಗೆ ಥ್ರಿಲ್ ಕೊಡುವ ಕಂಟೆಂಟ್ ಚಿತ್ರ ಎಂಬಂತೆ ಟ್ರೈಲರ್ ಕಟ್ಟಿಕೊಡಲಾಗಿದೆ.
ಒಟ್ಟಿನಲ್ಲಿ ಯಾವ ದೊಡ್ಡ ಸ್ಟಾರ್ ಸಿನಿಮಾಗಳು ಇಲ್ಲದ ಸಮಯಕ್ಕೆ ಐನೂರು ಚಿತ್ರಗಳ ಸರದಾರ ಬಿರಾದಾರ್ “90” ಹೊತ್ತು ತಂದಿದ್ದು, ಮುಂದಿನ ಗುರುವಾರದಿಂದ ಅದೃಷ್ಟ ಪರೀಕ್ಷೆ ನಡೆಯಲಿದೆ.90 bidi manig nadi  release  29th june

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…