ನಶೆ ಏರಿಸುತ್ತಿದೆ ನೈಂಟಿ!!?”ನೈಂಟಿ ಬಿಡಿ ಮನೀಗ್ ನಡಿ” ಚಿತ್ರದ ಟೀಸರ್ ಸಖತ್ ಸದ್ದು ಮಾಡುತ್ತಿದೆ!

90bidi manig nadi kannada movie teaser

ನಟ ಶರಣ್ ಬಿಡುಗಡೆ ಗೊಳಿಸಿದ್ದ “ನೈಂಟಿ ಬಿಡಿ ಮನೀಗ್ ನಡಿ” ಚಿತ್ರದ ಟೀಸರ್ ಸಖತ್ ಸದ್ದು ಮಾಡುತ್ತಿದೆ! ಹಿರಿಯ ನಟ ‘ಬಿರದಾರ್ ಹೊಸ ಅವತಾರ’ದಲ್ಲಿ ಕಾಣಿಸಿಕೊಂಡು ಕಲರ್ ಫುಲ್ ಆಗಿ ಮಿಂಚಿರುವ ಚಿತ್ರದ ಟೀಸರಿಗೆ ಅತಿಕಡಿಮೆ ಅವಧಿಯಲ್ಲಿ ಲಕ್ಷ ದಾಟಿದ ವೀಕ್ಷಣೆ ಕಂಡು ಸೌಂಡು ಮಾಡತೊಡಗಿದೆ.90bidi manig nadi kannada movie

‘ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತ ಬಿರಾದಾರರ ಐನೂರ’ನೇ ಚಿತ್ರ ಇದಾಗಿದ್ದು, ಕಾಮಿಡಿಯ ಜೊತೆ ಕ್ರೈಂ ಥ್ರಿಲ್ಲರ್ ಕಥಾ ಹಂದರ ಹೊಂದಿದ್ದು, ಚಿತ್ರ ನಿರೀಕ್ಷೆ ಮೂಡಿಸುತ್ತಿದೆ. ‘ಅಮ್ಮಾ ಟಾಕೀಸ್ ಬಾಗಲಕೋಟೆ’ ಸಂಸ್ಥೆಯ ಈ ಚಿತ್ರಕ್ಕೆ ಉಮೇಶ್ ಬಾದರದಿನ್ನಿ ಮತ್ತು ನಾಗರಾಜ್ ಅರೆಹೊಳೆ ಜಂಟಿ ನಿರ್ದೇಶನ ಮಾಡಿದ್ದು, ಚಿತ್ರ ಬಿಡುಗಡೆಗೆ ತಯಾರಾಗುತ್ತಿದೆ.90bidi manig nadi kannada movie

ಬಿಡುಗಡೆಯ ಮೊದಲ ಹೆಜ್ಜೆಯಾಗಿ ಟೀಸರ್ ಬಿಟ್ಟುಕೊಂಡಿದ್ದು, ಪ್ರೇಕ್ಷಕರ ರೆಸ್ಪಾನ್ಸ್ ಕಂಡು ಫುಲ್ಖುಷ್ ಆಗುವುದರ ಜೊತೆಗೆ, ಬಿರಾದಾರ್ ಮೇಲೆ ನಂಬಿಕೆ ಇಟ್ಟು ಹಣ ಸುರಿದ ನಿರ್ಮಾಪಕರು ನಿರಾಳವಾಗಿದ್ದಾರೆ ಎನ್ನಬಹುದು! ಹಾಗೆಯೇ ಹಾಡುಗಳು ಬಿಡುಗಡೆಗೆ ಸಜ್ಜಾಗುತ್ತಿದ್ದು, ಉತ್ತರ ಕರ್ನಾಟಕ ಶೈಲಿಯ ‘ಜವಾರಿ’ ಹಾಡೊಂದರಲ್ಲಿ ಎಪ್ಪತ್ತರ ವಯಸ್ಸಿನ ಬಿರಾದಾರ್ ಸಖತ್ ಸ್ಟೆಪ್ಸ್ ಹಾಕಿದ್ದು, ಪ್ರೇಕ್ಷಕರಿಂದ ಇವರ ಡಾನ್ಸ್ ಎನರ್ಜಿಗೆ ‘ಫುಲ್ ಮಾರ್ಕ್ಸ್’ ಸಿಗೋದು ಪಕ್ಕಾ ಅನ್ನೋದು ಚಿತ್ರತಂಡದ ನಂಬಿಕೆ.90bidi manig nadi kannada movie

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…