ವಿರಾಗಿ ಶ್ರೀ ಕುಮಾರೇಶ್ವರ ಬೃಹತ್ ರಥಯಾತ್ರೆ
6 ರಥ, 13 ದಿನ, 7000 ಕಿಮೀ, 360 ಸಭೆ, 1 ಕೋಟಿ ಜನರ ಉಪಸ್ಥಿತಿ

Viragi Shree Kumareshwar Big Rath Yatra

ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳ ಜೀವನಚರಿತ್ರೆ ಆಧರಿತ ಸಿನಿಮಾ ವಿರಾಟಪುರ ವಿರಾಗಿ ಸಿದ್ಧವಾಗಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬಿ.ಎಸ್. ಲಿಂಗದೇವರು ನಿರ್ದೇಶನದ ಈ ಸಿನಿಮಾವನ್ನು ಸಮಾಧಾನ್ ಸಂಸ್ಥೆ ನಿರ್ಮಿಸಿದೆ. ಹಿನ್ನೆಲೆಯಲ್ಲಿ ಮಹಾಪುರುಷ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳ ನೆನಪಿನಲ್ಲಿ ವಿರಾಗಿ ಶ್ರೀ ಕುಮಾರೇಶ್ವರ ರಥಯಾತ್ರೆ ನಡೆಸಲು ಉದ್ದೇಶಿಸಲಾಗಿದೆ.Viragi Shree Kumareshwar Big Rath Yatra

6 ರಥ, 13 ದಿನ, 7000 ಕಿಮೀ, 360 ಸಭೆ, 1 ಕೋಟಿ ಜನರ ಉಪಸ್ಥಿತಿ ಇರುವ ಈ ಬೃಹತ್ ರಥಯಾತ್ರೆ ಡಿಸೆಂಬರ್ 20ರಂದು ಆರಂಭವಾಗಲಿದ್ದು, ಜನವರಿ 1ರಂದು ಗದಗನಲ್ಲಿ ಮುಕ್ತಾಯಗೊಳ್ಳಲಿದೆ. ಈ ರಥಯಾತ್ರೆ ಕುರಿತ ಸಂಪೂರ್ಣ ಮಾಹಿತಿ ಪೋಸ್ಟರ್ ನಲ್ಲಿ ಲಭ್ಯವಿದೆ. ಈ ಮಾಹಿತಿಯನ್ನು ಜನರಿಗೆ ತಲುಪಿಸಿ ಈ ರಥಯಾತ್ರೆ ಯಶಸ್ವಿಗೊಳಿಸಬೇಕೆಂದು ವಿನಂತಿಸಿಕೊಳ್ಳುತ್ತಿದ್ದೇವೆ.Viragi Shree Kumareshwar Big Rath Yatra

ಕುಮಾರ ಶಿವಯೋಗಿಗಳು ದಂತಕತೆ

ಕುಮಾರ ಶಿವಯೋಗಿಗಳು ಒಂದು ದಂತಕಥೆ. ಒಬ್ಬ ಮನುಷ್ಯ ತನ್ನ ಜೀವಿತಾಧಿಯಲ್ಲಿ ಏನೇನು ಮಾಡಲು ಅಸಾಧ್ಯವೋ ಅದನ್ನೆಲ್ಲಾ ಸಾಧ್ಯ ಮಾಡಿದ್ದಾರೆ. ಗಾಂಧೀಜಿಯವರು ಭಾರತಕ್ಕೆ ಬರುವ ಕೆಲವು ವರ್ಷಗಳ ಮೊದಲೇ ಗಾಂಧೀಜಿ ಅವರು ಆದರ್ಶ ಅಂದುಕೊಂಡಿದ್ದ ಬಹುತೇಕ ಕೆಲಸಗಳನ್ನು ಮಾಡಿ ತೋರಿಸಿದವರು ಹಾನಗಲ್ಲ ಗುರುಕುಮಾರ ಶಿವಯೋಗಿಗಳು.  -ಪದ್ಮಶ್ರೀ ಪುರಸ್ಕೃತಡಾ. ಗಿರೀಶ್ ಕಾಸರವಳ್ಳಿViragi Shree Kumareshwar Big Rath Yatra

ಹಾನಗಲ್ಲ ಶ್ರೀ ಗುರುಕುಮಾರ ಶಿವಯೋಗಿಗಳ ಕುರಿತು

ವೀರಶೈವಕ್ಕೊಂದು ಇತಿಹಾಸವಿದೆ; ಅಧ್ಯಯನವಿಲ್ಲ. ಅದರದೇ ಆದ ಸಂಹಿತೆ ಇದೆ; ವ್ಯವಸ್ಥೆ ಇಲ್ಲ. ಸಂಸ್ಕೃತಿ ಇದೆ; ಸಂವಹನ ಸಾಧ್ಯತೆಯ ಸೌಲಭ್ಯಗಳು ಸಾಕಷ್ಟಿಲ್ಲ. ದರ್ಶನವಿದೆ; ಮಾರ್ಗದರ್ಶನವಿಲ್ಲ. ಪರಂಪರೆ ಇದೆ; ಪರಿಣಾಮವಿಲ್ಲ. ಅನುಭಾವವಿದೆ; ಅನುಷ್ಠಾನವಿಲ್ಲ. ಸಿದ್ಧಾಂತವಿದೆ; ಸಾಧನೆ – ಸಿದ್ಧಿಗಳಿಲ್ಲ. ಸಮಾಜ ಇದೆ; ಸಂಘಟನೆ ಇಲ್ಲ! ಸ್ವಾತಂತ್ರ್ಯಪೂರ್ವದ ಈ ವಿಪರ್ಯಾಸ ದಿನಗಳನ್ನು ನೆನೆದರೆ ಕಣ್ಣೀರು ಬರದಿರದು. ಇಂತಹ ಸಂಕೀರ್ಣ ಸನ್ನಿವೇಶದಲ್ಲಿ ಈ ಎಲ್ಲಾ ಅಸಾಧ್ಯಗಳನ್ನು ಸಾಧ್ಯವಾಗಿಸಲು ಸಮಾಜಕ್ಕೆ ಸಂಜೀವಿನಿಯಾಗಿ ಬಂದವರು ಶ್ರೀ ಹಾನಗಲ್ಲ ಕುಮಾರೇಶ್ವರರು.Viragi Shree Kumareshwar Big Rath Yatra

ಹಾನಗಲ್ಲ ಗುರುಕುಮಾರ ಶಿವಯೋಗಿಗಳು, ಮಠದಿಂದ ಘಟ ಬೆಳಗಬಾರದು – ಘಟದಿಂದ ಮಠ ಬೆಳಗಬೇಕೆಂದು ಸಾಧಿಸಿ ತೋರಿಸಿದವರು. 19ನೇ ಶತಮಾನದ ಆದಿಯಲ್ಲಿಯೇ ಅವರು ಹೊಸ ಮನ್ವಂತರಕ್ಕೆ ಭದ್ರ ಬುನಾದಿ ಹಾಕಿದವರು.

ಸಮ ಸಮಾಜ ನಿರ್ಮಾಣದ ರೂವಾರಿಗಳು. ಸರ್ವರಿಗೂ ಶಿಕ್ಷಣ. ಅಂಧರ ಬಾಳಿಗೆ ಸಂಗೀತ ಶಿಕ್ಷಣ. ಅಖಿಲ ಭಾರತ ವೀರಶೈವ (ಲಿಂಗಾಯತ) ಮಹಾಸಭಾ ಸ್ಥಾಪನೆ. ಮಹಿಳಾ ಶಿಕ್ಷಣ ಮತ್ತು ಸ್ತ್ರೀ ಸಬಲೀಕರಣ. ಶಿವಯೋಗ ಮಂದಿರ ಸ್ಥಾಪನೆ. ವಚನ ತಾಡೋಲೆಗಳ ಸಂಗ್ರಹ ಮತ್ತುಗ್ರಂಥಾಲಯ ಸ್ಥಾಪನೆ. ಅಧುನಿಕ ಕೃಷಿ ಪದ್ಧತಿ ಮತ್ತು ಗೋಶಾಲೆ ಸ್ಥಾಪನೆ. ವಿಭೂತಿ ಹಾಗೂ ಇಷ್ಟ ಲಿಂಗದ ನಿರ್ಮಾಣ, ಹತ್ತಿ ಕರ್ಖಾನೆಯ ಸ್ಥಾಪನೆ. ಆಯುರ್ವೇದಚಿಕಿತ್ಸಾಲಯ ಸ್ಥಾಪನೆ. ಚಿತ್ರಮಂದಿರಗಳ ಪ್ರಾರಂಭ, ಪ್ರಾಣಿ ಬಲಿ ನಿಷೇಧ.Viragi Shree Kumareshwar Big Rath Yatra

ಹೀಗೆ ಹತ್ತು ಹಲವಾರು ಸಾಧ್ಯತೆಗಳನ್ನು ಸಾಧ್ಯವಾಗಿಸಿದವರು ಮತ್ತುಒಬ್ಬ ವ್ಯಕ್ತಿತನ್ನಜೀವಿತಾವಧಿಯಲ್ಲಿ ಇಷ್ಟೆಲ್ಲಾ ಮಾಡಬಹುದೆ ಎಂಬುದಕ್ಕೆ ಸಾಕ್ಷಿ ಪೂಜ್ಯ ಹಾನಗಲ್ಲ ಶ್ರೀ ಗುರುಕುಮಾರ ಶಿವಯೋಗಿಗಳು. ಸಮಾಜದ ಕಣ್ಣೀರನ್ನು ಒರಸಿ ಸದೃಢ ಸಮಾಜವನ್ನು ನಿರ್‍ಮಿಸಲುತಮ್ಮಜೀವನವನ್ನೆ ಶ್ರೀಗಂಧದಂತೆ ತೇಯ್ದು ಸುಗಂಧ ಬೀರಿದವರು.Viragi Shree Kumareshwar Big Rath Yatra

ಚಿತ್ರತಂಡದ ಪರಿಚಯ

ಸಂಗೀತ ನಿರ್ದೇಶನ: ಮಣಿಕಾಂತ್ ಕದ್ರಿ, ಛಾಯಾಗ್ರಹಣ: ಅಶೋಕ್ ವಿ ರಾಮನ್, ಸಂಕಲನ: ಎಸ್ ಗುಣಶೇಖರನ್, ವಸ್ತ್ರ ವಿನ್ಯಾಸ: ಶಂಕರ್ ಎಚ್ ಬಿ, ಪ್ರಸಾದನ: ರಮೇಶ್ ಬಾಬು, ಕಲೆ: ಶರವಣ, ಲೈಟ್ ಯುನಿಟ್: ಸೆಲ್ವಂ, ಪಾಪ ಔಟ್ ಡೋರ್ ಯುನಿಟ್

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…