ಸುಭಾಷಿತಗಳ ಸಂಗ್ರಹದಿಂದ ನಮ್ಮ ಜೀವನದೃಷ್ಟಿ ವಿಶಾಲವಾಗುವುದು; ಜೀವನದ ಎಷ್ಟೋ ಸಂದರ್ಭಗಳ ಗುಣಾವಗುಣಗಳನ್ನು ಸ್ಪಷ್ಟವಾಗಿ ವಿಮರ್ಶಿಸಲು ನೆರವಾಗುತ್ತವೆ
‘ಭೂಮಿಯಲ್ಲಿ ಶ್ರೇಷ್ಠವಸ್ತುಗಳೆಂದರೆ ಕೇವಲ ಮೂರು: ನೀರು, ಅನ್ನ ಮತ್ತು ಒಳ್ಳೆಯ ಮಾತು. ಆದರೆ ಮೂರ್ಖರು ಕಲ್ಲಿನ ಚೂರುಗಳನ್ನು ‘‘ರತ್ನ ’’ಎಂದು ಕರೆಯುತ್ತಿರುವುದು ವಿಷಾದಕರ.
– ನಮ್ಮ ಜೀವನವು ಮಾತನ್ನು ಆವಲಂಬಿಸಿಕೊಂಡಿದೆ; ನಮ್ಮ ಜೀವನ ಮಾತಿಲ್ಲದೆ ನಡೆಯದು. ನಮ್ಮ ಜೀವನದ ಸೊಗಸಿಗೂ, ಸುಖಕ್ಕೂ, ನೋವಿಗೂ ನಾವಾಡುವ ಮಾತು ಕಾರಣವಾಗಿರುತ್ತದೆ.
ಸತ್ಯಕ್ಕಾಗಿ ಯಾವುದನ್ನಾದರೂ ತ್ಯಾಗ ಮಾಡಿ. ಆದರೆ ಸತ್ಯವನ್ನು ಮಾತ್ರ ತ್ಯಾಗ ಮಾಡಬೇಡಿ.
ತನ್ನ ಕರ್ತವ್ಯವನ್ನು ಸರಿಯಾಗಿ ಮಾಡುತ್ತಿರುವವನಿಗೆ ಜಗತ್ತು ಎಂದೂ ಬೇಸರದ್ದಾಗಿ ಕಾಣುವುದಿಲ್ಲ