ವಿಭಿನ್ನ ಕಥೆಯ “ಖೆಯೊಸ್”ಫೆಬ್ರವರಿ 17 ರಂದು ಬಿಡುಗಡೆ .

A different story "Cheos" released on February 17.

ಮೊದಲ ಬಾರಿಗೆ ಮಗನ ಸಿನಿಮಾದಲ್ಲಿ ಕಾಣಿಸಿಕೊಂಡಿರುವ ಸುಪ್ರೀಂ ಹೀರೋ .

‌‌ಮನುಷ್ಯನ ಮನಸ್ಸಿನಲ್ಲಾಗುವ ಗೊಂದಲ, ಮನಸ್ಥಿತಿಯ ಬಗ್ಗೆ ಹೇಳುವ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ ಖೆಯೊಸ್. ಈ ಚಿತ್ರ ಫೆ.17 ರಂದು ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಅಕ್ಷಿತ್ ಶಶಿಕುಮಾರ್ ಈ ಚಿತ್ರದ ನಾಯಕನಾಗಿ ಅಭಿನಯಿಸಿದ್ದು, ನಾಯಕಿಯಾಗಿ ಅದಿತಿ ಪ್ರಭುದೇವ ಅಭಿನಯಿಸಿದ್ದಾರೆ. ವಿಶೇಷವೆಂದರೆ ಸುಪ್ರೀಂ ಹೀರೋ ಶಶಿಕುಮಾರ್ ಸಹ ಈ ಚಿತ್ರದಲ್ಲಿ ನಟಿಸಿದ್ದಾರೆ. ಅಪ್ಪ – ಮಗ ಮೊದಲ ಬಾರಿಗೆ ಈ ಚಿತ್ರದಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.‌ ಇತ್ತೀಚೆಗೆ ಈ ಚಿತ್ರದ ಪ್ರೀ ರಿಲೀಸ್ ಇವೆಂಟ್ ಅದ್ದೂರಿಯಾಗಿ ನಡೆಯಿತು.A different story "Kheos" released on February 17.

ಮೂಲತಃ ವೈದ್ಯರಾಗಿರುವ ಡಾ|ಜಿ.ವಿ.ಪ್ರಸಾದ್ ಈ ಚಿತ್ರ ನಿರ್ದೇಶನ ಮಾಡಿದ್ದಾರೆ. ‌ ವೈದ್ಯಕೀಯ ಕಾಲೇಜೊಂದರಲ್ಲಿ ನಡೆಯುವ ಕಥೆಯನ್ನೇ ಆಯ್ಕೆ ಮಾಡಿಕೊಂಡಿದ್ದಾರೆ. ಅಕ್ಷಿತ್ ಶಶಿಕುಮಾರ್ ಹಾಗೂ ಅದಿತಿ ಪ್ರಭುದೇವ ಅವರದು ಈ ಚಿತ್ರದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳ ಪಾತ್ರ.A different story "Kheos" released on February 17.

ಅಲ್ಲದೆ ಹಿರಿಯನಟ ಶಶಿಕುಮಾರ್ ಸಹ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದು, ಟ್ರೈಲರ್ ಬಿಡುಗಡೆ ಮಾಡಿ ಶುಭ ಕೋರಿದರು. ವಿಶೇಷ ಅತಿಥಿಗಳಾಗಿ ವಿನೋದ್ ಪ್ರಭಾಕರ್, ನಿರಂಜನ್ ಸುಧೀಂದ್ರ ಹಾಗೂ ಮಂಜು ಪಾವಗಡ ಆಗಮಿಸಿದ್ದರು. ನಟ ಶಶಿಕುಮಾರ್ “ಖೆಯೊಸ್” ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿ, ಯಜಮಾನ ಚಿತ್ರದ ಹಾಡೊಂದಕ್ಕೆ ಹೆಜ್ಜೆ ಹಾಕಿದರು. ನಟ ವಿನೋದ್ ಪ್ರಭಾಕರ್ ಚಿತ್ರತಂಡವನ್ನು ಅಭಿನಂದಿಸುವ ಮೂಲಕ ಹೊಸಬರ ಪ್ರಯತ್ನಕ್ಕೆ ಬೆನ್ನು ತಟ್ಟಿದರು.A different story "Cheos" released on February 17.

ಗಾಯಕ ಶಶಾಂಕ್ ಶೇಷಗಿರಿ, ಸಂಗೀತ ನಿರ್ದೇಶಕ ವಿಜಯ್ ಹರಿತ್ಸ, ನಟರಾದ ಶಿವಾನಂದ್, ಆರ್.ಕೆ. ಚಂದನ್, ಡಾ.ಸುಮಿತ್ ತಲ್ವಾರ್, ನಟಿ ಗಗನ, ಛಾಯಾಗ್ರಾಹಕ ಸಂದೀಪ್ ವಲ್ಲೂರಿ ಮುಂತಾದವರು ಚಿತ್ರದ ಕುರಿತಂತೆ ಮಾತನಾಡಿದರು. ಪಾರುಲ್ ಅಗರವಾಲ್ ಹಾಗೂ ಹೇಮಚಂದ್ರ ರೆಡ್ಡಿ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
ನಿರ್ಮಾಪಕಿ ಪಾರೂಲ್ ಅಗರ್‌ವಾಲ್ ಚಿತ್ರದ ಆಶಯಗಳನ್ನು ವಿವರಿಸಿದರೆ, ನಿರ್ದೇಶಕ ಜಿ.ವಿ.ಪ್ರಸಾದ್ ಅವರು ಚಿತ್ರದ ಶೀರ್ಷಿಕೆ ಮತ್ತು ಅದನ್ನು ಚಿತ್ರದಲ್ಲಿ ಬಳಸಿಕೊಂಡಿರುವುದರ ಬಗ್ಗೆ ಹೇಳಿದರು.A different story "Cheos" released on February 17.

ನಾಯಕ ಅಕ್ಷಿತ್ ಶಶಿಕುಮಾರ್ ಮಾತನಾಡಿ ಚಿತ್ರಕ್ಕೆ ಪ್ರತಿಯೊಬ್ಬರು ನೀಡಿದ ಸಹಕಾರವನ್ನು ನೆನೆಯುತ್ತಾ, ಇದು ನನ್ನ ಎರಡನೇ ಚಿತ್ರ. ದಯವಿಟ್ಟು ಎಲ್ಲರೂ ಪ್ರೋತ್ಸಾಹಿಸಿ ಎಂದರಲ್ಲದೆ ನಾನು ಅಪ್ಪನ ನೆರಳಿನಲ್ಲಿ ಅರಳಿದರೂ ಬೆಳೆಯಲು ಬೇರೆ ಆಶ್ರಯ ಬೇಕಾಗುತ್ತದೆ. ಈ ವಿಷಯದಲ್ಲಿ ಸ್ನೇಹಿತರು ಅತ್ಯಂತ ಸಹಕಾರ ನೀಡುತ್ತಿದ್ದಾರೆ ಎಂದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…