“ಅಬ್ಬಬ್ಬ” ಹಾಸ್ಯಪ್ರಿಯರಿಗೆ ಭರ್ಜರಿ ರಸದೌತಣ.

ಕೆ.ಎಂ.ಚೈತನ್ಯ ನಿರ್ದೇಶನದ ಈ ಚಿತ್ರ ಜುಲೈ ಒಂದರಂದು ತೆರೆಗೆ.

“ಆ ದಿನಗಳು” ಚಿತ್ರದ ಮೂಲಕ ಜನಪ್ರಿಯ ನಿರ್ದೇಶಕರಾಗಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಕೆ.ಎಂ.ಚೈತನ್ಯ ನಿರ್ದೇಶನದ ಸಂಪೂರ್ಣ ಹಾಸ್ಯಮಯ “ಅಬ್ಬಬ್ಬ” ಚಿತ್ರ ಇದೇ ಜುಲೈ 1 ರಂದು ಬಿಡುಗಡೆಯಾಗಲಿದೆ.WhatsApp Image 2022 06 02 at 1.17.11 PM 2

ಬೆಂಗಳೂರಿನಲ್ಲಿ ಮೀರಾಮಾರ್ ಎಂಬ ಜಾಹೀರಾತು ನಿರ್ಮಾಣ ಸಂಸ್ಥೆ ನಡೆಸುತ್ತಿರುವ ಆನ್ ಆಗಸ್ಟೇನ್ ಹಾಗೂ ವಿವೇಕ್ ಥಾಮಸ್ ಈ ಚಿತ್ರವನ್ನು ನಿರ್ಮಿಸಿದ್ದಾರೆ.‌ ಆನ್ ಆಗಸ್ಟೇನ್ ಸುಪ್ರಸಿದ್ದ ಮಲಯಾಳಂ ನಟಿ ಕೂಡ. ಸಾಕಷ್ಟು ಮಲೆಯಾಳಂ ಚಿತ್ರಗಳಲ್ಲಿ ಇವರು ನಟಿಸಿದ್ದಾರೆ. ಇವರಿಬ್ಬರ ನಿರ್ಮಾಣದಲ್ಲಿ ಮೂಡಿಬಂದಿರುವ ಮೊದಲ ಚಿತ್ರ “ಅಬ್ಬಬ್ಬ”.WhatsApp Image 2022 06 02 at 1.17.11 PM

“ಫ್ಯಾಮಿಲಿ ಪ್ಯಾಕ್” ಜೋಡಿ ಲಿಖಿತ್ ಶೆಟ್ಟಿ ಹಾಗೂ ಅಮೃತ ಅಯ್ಯಂಗಾರ್ ಈ ಚಿತ್ರದಲ್ಲೂ ನಾಯಕ – ನಾಯಕಿಯಾಗಿ ನಟಿಸಿದ್ದಾರೆ. ಅಜಯ್ ರಾಜ್, ತಾಂಡವ್ ರಾಮ್, ಧನರಾಜ್ ಆಚಾರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.WhatsApp Image 2022 06 02 at 1.17.12 PM

ಬೆಂಗಳೂರು ಹಾಗೂ ತುಮಕೂರಿನಲ್ಲಿ ಚಿತ್ರೀಕರಣ ನಡೆದಿದ್ದು, ಇದೇ ಆರರಂದು ಟ್ರೇಲರ್ ಬಿಡುಗಡೆಯಾಗಲಿದೆ. ಜುಲೈ ಒಂದರಂದು ಚಿತ್ರ ತೆರೆಗೆ ಬರಲಿದೆ ಎಂದು ನಿರ್ದೇಶಕ ಕೆ.ಎಂ.ಚೈತನ್ಯ ತಿಳಿಸಿದ್ದಾರೆ.WhatsApp Image 2022 06 02 at 1.17.11 PM 1

ಮನೋಹರ್ ಜೋಶಿ ಅವರ ಮನಮೋಹಕ ಛಾಯಾಗ್ರಹಣ
ವಿರುವ ಈ ಚಿತ್ರಕ್ಕೆ ದೀಪಕ್ ಅಲೆಕ್ಸಾಂಡರ್ ಅವರ ಸುಮಧುರ ಸಂಗೀತವಿದೆ. ಹರಿದಾಸ್ ಕೆ.ಜಿ.ಎಫ್ ಈ ಚಿತ್ರದ ಸಂಕಲನಕಾರರು. ಕಲಾ ನಿರ್ದೇಶಕರು ವಿಶ್ವಾಸ್ ಕಷ್ಯಪ್. ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಈಗಾಗಲೇ ಅನೇಕ ಜಾಹೀರಾತುಗಳಿಗೆ ಸಂಗೀತ ಸಂಯೋಜಿಸಿರುವ ದೀಪಕ್ ಅಲೆಕ್ಸಾಂಡರ್ ಅವರಿಗೆ ಇದು ಸಂಗೀತ ನಿರ್ದೇಶಕರಾಗಿ ಚೊಚ್ಚಲ ಚಿತ್ರ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…