“ಅಬ್ಬಬ್ಬ” ಟ್ರೇಲರ್ ಸಖತಾಗಿದೆ.

ಕೊರೋನ ಹಾವಳಿ ತುಸು ತಗ್ಗುತ್ತಿದಂತೆ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿದೆ. ಉತ್ತಮ ಚಿತ್ರಗಳು ತೆರೆ ಕಾಣುತ್ತಿದೆ.

“ಆ ದಿನಗಳು” ಖ್ಯಾತಿಯ ಕೆ.ಎಂ.ಚೈತನ್ಯ ನಿರ್ದೇಶಿಸಿರುವ ಸಂಪೂರ್ಣ ಮನೋರಂಜನೆಯ “ಅಬ್ಬಬ್ಬ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.WhatsApp Image 2022 06 17 at 7.46.16 PM

“ಫ್ಯಾಮಿಲಿ ಪ್ಯಾಕ್” ಖ್ಯಾತಿಯ ಲಿಖಿತ್ ಶೆಟ್ಟಿ ಹಾಗೂ ಅಮೃತ ಅಯ್ಯಂಗಾರ್ ಜೋಡಿಯ ಈ ಚಿತ್ರವನ್ನು ಮೀರಾಮಾರ್ ಸಂಸ್ಥೆ ಮೂಲಕ ಆನ್ ಆಗಸ್ಟೇನ್ ಹಾಗೂ ವಿವೇಕ್ ಥಾಮಸ್ ನಿರ್ಮಿಸಿದ್ದಾರೆ. ಇತ್ತೀಚೆಗೆ ಈ ಚಿತ್ರದ ಹಾಡೊಂದರ ಬಿಡುಗಡೆ ಮತ್ತು ಪತ್ರಿಕಾಗೋಷ್ಠಿ ನಡೆಯಿತು.

ಆನ್ ಆಗಸ್ಟೇನ್ ಅವರು ಈ ಕಥೆ ತಂದಾಗ, ನಾನು ಒಪ್ಪಿಕೊಳ್ಳಲು‌ ಕಾರಣವಿದೆ. ನನಗೆ ಹದಿನೈದು ವರ್ಷದ ಮಗಳಿದ್ದಾಳೆ. ಕೊರೋನದಿಂದಾಗಿ ಅವಳ ಜೀವನದ ಪ್ರಮುಖ ಘಟ್ಟವಾದ ಎಸ್ ಎಸ್ ಎಲ್ ಸಿ ಯನ್ನು ಶಾಲೆಗೆ ಹೋಗದೆ ಮನೆಯಲ್ಲೇ ಕಲಿತಳು. ಆನಂತರ ಕಾಲೇಜು ದಿನಗಳನ್ನು ಮಿಸ್ ಮಾಡಿಕೊಂಡಳು. ನನ್ನ ಮಗಳು ಸೇರಿದಂತೆ ಅನೇಕ ವಿದ್ಯಾರ್ಥಿಗಳು ಎರಡು ವರ್ಷ ಶಾಲೆ ಹಾಗೂ‌ ಕಾಲೇಜು ಜೀವನದಿಂದ ದೂರಾಗಿದ್ದರು. ಇದೆಲ್ಲಾ ನನ್ನನ್ನು ಕಾಡುತ್ತಿತ್ತು. ಆ ಸಮಯಕ್ಕೆ ಈ ಕಥೆ ಸೂಕ್ತವೆನಿಸಿ, ಚಿತ್ರ ಆರಂಭ ಮಾಡಿದ್ದೆವು. ಇದೊಂದು ಪಕ್ಕಾ ಎಂಟರ್ ಟೈನ್ ಮೆಂಟ್ ಚಿತ್ರ. ಕೊರೋನ ಮುಗಿದ ನಂತರದ ವೃತ್ತಿ ಜೀವನವನ್ನು ನಗುವಿನೊಂದಿಗೆ ಆರಂಭಿಸೋಣ ಎಂದು ಈ ಚಿತ್ರ‌ ನಿರ್ದೇಶಿಸಿದ್ದೇನೆ. ಇದು ನೂರು ವರ್ಷ ತುಂಬಲಿರುವ ಬಾಲಕರ ಹಾಸ್ಟೆಲ್ ನಲ್ಲಿ ನಡೆಯುವ ಕಥೆ‌. ಬೆಂಗಳೂರು ಹಾಗೂ ತುಮಕೂರಿನಲ್ಲಿ ಚಿತ್ರೀಕರಣ ಮಾಡಿದ್ದೇವೆ. ಇತ್ತೀಚೆಗೆ ಟ್ರೇಲರ್ ಬುಡುಗಡೆ ಮಾಡಿದ್ದೇವೆ. ಸಾಕಷ್ಟು ಮೆಚ್ಚುಗೆ ಸಿಕ್ಕಿದೆ. ಇಂದು ದೀಪಕ್ ಅಲೆಕ್ಸಾಂಡರ್ ಸಂಗೀತ ನೀಡಿ, ALL OK ಹಾಡಿರುವ ಟೈಟಲ್ ಸಾಂಗ್ ಬಿಡುಗಡೆ ಮಾಡಿದ್ದೇವೆ. ಚಿತ್ರದಲ್ಲಿ ಮೂರು ಹಾಡುಗಳಿದೆ. ಡಾಲಿ ಧನಂಜಯ, ಯೋಗರಾಜ್ ಭಟ್ ಹಾಗೂ ಕವಿರಾಜ್ ಹಾಡುಗಳನ್ನು ಬರೆದಿದ್ದಾರೆ. ಡಾಲಿ ಬರೆದಿರುವ ಹಾಡನ್ನು ವಸಿಷ್ಠ ಸಿಂಹ ಹಾಡಿದ್ದಾರೆ. ಜುಲೈ ಒಂದರಂದು ಚಿತ್ರ ಬಿಡುಗಡೆಯಾಗಲಿದೆ ನೋಡಿ. ಪ್ರೋತ್ಸಾಹ ನೀಡಿ ಎಂದರು ನಿರ್ದೇಶಕ ಕೆ.ಎಂ .ಚೈತನ್ಯ.WhatsApp Image 2022 06 17 at 7.46.15 PM 1

ಉತ್ತಮ ಕಥೆಯುಳ್ಳ ಈ ಚಿತ್ರವನ್ನು ಕನ್ನಡದಲ್ಲಿ ನಿರ್ಮಾಣ ಮಾಡುತ್ತಿರುವುದಕ್ಕೆ ನಿರ್ಮಾಪಕರಾದ ಆನ್ ಆಗಸ್ಟೇನ್ ಹಾಗೂ ವಿವೇಕ್ ಥಾಮಸ್ ಸಂತಸಪಟ್ಟರು.

ನಾನು ಕೆ.ಎಂ.ಚೈತನ್ಯ ಅವರು ಕಥೆ ಹೇಳಿದ ತಕ್ಷಣ ನಟಿಸಲು ಒಪ್ಪಿಕೊಂಡೆ. ಏಕೆಂದರೆ ನನಗೆ ಚೈತನ್ಯ ಅವರ ನಿರ್ದೇಶನದಲ್ಲಿ ನಟಿಸಲು ಆಸೆಯಿತ್ತು. ಚಿತ್ರದಲ್ಲಿ ಅಭಿನಯಿಸಿರುವ ಎಲ್ಲಾ ಕಲಾವಿದರೊಂದಿಗೆ ಕಳೆದ ಚಿತ್ರೀಕರಣದ ಸಮಯವನ್ನು ಮರೆಯಲಾಗುತ್ತಿಲ್ಲ. ಸಂಪೂರ್ಣ ಮನೋರಂಜನೆಯ ಚಿತ್ರ ನಮ್ಮದು ಎನ್ನುತ್ತಾರೆ ನಾಯಕ ಲಿಖಿತ್ ಶೆಟ್ಟಿ.

ಬೇರೆ ಭಾಷೆಯವರಾಗಿದ್ದರೂ, ಕನ್ನಡದಲ್ಲಿ ಮೊದಲ ಸಿನಿಮಾ ನಿರ್ಮಾಣ ಮಾಡುತ್ತಿರುವ ನಿರ್ಮಾಪಕರಿಗೆ ಧನ್ಯವಾದ. ನಾನು ಯಾವತ್ತೂ ಹಾಸ್ಟೆಲ್ ನಲ್ಲಿ ವಾಸ್ತವ್ಯ ಮಾಡಿಲ್ಲ. ಆದರೆ ನನ್ನನ್ನು ಬಾಯ್ಸ್ ಹಾಸ್ಟೆಲ್ ಗೆ ಕಳುಹಿಸಬಿಟ್ಟರು ಕೆ.ಎಂ.ಚೈತನ್ಯ. ಅನಿವಾರ್ಯ ಕಾರಣದಿಂದ ಆ ಹಾಸ್ಟೆಲ್ ನಲ್ಲಿ ಸಿಕ್ಕಿಹಾಕಿಕೊಂಡ ನಾನು ಹೇಗೆ ಆಚೆ ಬರುತ್ತೇನೆ ಎನ್ನವುದೇ ಕಥೆ ಎನ್ನುತ್ತಾರೆ ನಾಯಕಿ ಅಮೃತ ಅಯ್ಯಂಗಾರ್.

ನಾನು ಹಾಸ್ಟೆಲ್ ವಾರ್ಡನ್. ಫಾದರ್ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಚಿತ್ರೀಕರಣ ಸಮಯದಲ್ಲಿ ಹುಡಗರ ಜೊತೆ ಹುಡುಗನಾಗಿಬಿಟ್ಟಿದೆ. ವಿಭಿನ್ನ ಕಾಮಿಡಿ ಜಾನರ್ ನ ಈ ಚಿತ್ರವನ್ನು ನೋಡಿ ಆನಂದಿಸಿ ಎಂದರು ಹಿರಿಯ ನಟ ಶರತ್ ಲೋಹಿತಾಶ್ವ.WhatsApp Image 2022 06 17 at 7.46.15 PM

ಸಂಗೀತದ ಬಗ್ಗೆ ದೀಪಕ್ ಅಲೆಕ್ಸಾಂಡರ್ ಹಾಗೂ ಛಾಯಾಗ್ರಹಣದ ಕುರಿತು ಮನೋಹರ ಜೋಶಿ ಮಾತನಾಡಿದರು. ಚಿತ್ರದಲ್ಲಿ ನಟಿಸಿರುವ ಅಜಯ್ ರಾಜ್, ಧನರಾಜ್ ಹಾಗೂ ತಾಂಡವರಾಮ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಹರಿದಾಸ್ ಕೆ ಜಿ ಎಫ್ ಅವರ ಸಂಕಲನವಿರುವ ಈ ಚಿತ ಕೆ ಆರ್ ಜಿ ಸ್ಟುಡಿಯೋಸ್ ಮೂಲಕ ಜುಲೈ ಒಂದರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…