’ವಾಮನ’ ಸಿನಿಮಾಗೆ ಯಂಗ್ ರೆಬಲ್ ಸ್ಟಾರ್ ಸಾಥ್..ಧ್ವನೀರ್-ರೀಷ್ಮಾ ಜೋಡಿಯ ಮುದ್ದು ರಾಕ್ಷಸಿ ಹಾಡು ರಿಲೀಸ್ ಮಾಡಿದ ಅಭಿಷೇಕ್ ಅಂಬರೀಶ್

Abhishek Ambarish Releases Dhwaneer-Reeshma Jodi Muddu Rakshasi Song

ಶೋಕ್ದಾರ್ ಖ್ಯಾತಿಯ ಧನ್ವೀರ್ ಗೌಡ ನಟನೆಯ ಬಹುನಿರೀಕ್ಷಿತ ವಾಮನ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ. ಇತ್ತೀಚೆಗೆಷ್ಟೇ ರಿಲೀಸ್ ಆಗಿದ್ದ ವಾ..ವಾ..ವಾ..ವಾಮನ ಮಾಸ್ ನಂಬರ್ ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿತ್ತು. ಈಗ ವಾಮನ ಅಂಗಳದಿಂದ ಮುದ್ದು ರಾಕ್ಷಸಿ ಎಂಬ ರೋಮ್ಯಾಂಟಿಕ್ ಹಾಡು ಬಿಡುಗಡೆಯಾಗಿದೆ. ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿರುವ ಹಾಡಿಗೆ ಅಜನೀಶ್ ಲೋಕನಾಥ್ ಟ್ಯೂನ್ ಹಾಕಿದ್ದು, ವಿಜಯ್ ಪ್ರಕಾಶ್ ಹಾಗೂ ಹರ್ಷಿಕಾ ದೇವನಾಥ್ ಕಂಠ ಕುಣಿಸಿದ್ದಾರೆ. ಮುದ್ದು ರಾಕ್ಷಸಿ ಹಾಡಿಗೆ ಧನ್ವೀರ್ ಹಾಗೂ ರೀಷ್ಮಾ ನಾಣಯ್ಯ ಹೆಜ್ಜೆ ಹಾಕಿದ್ದಾರೆ.Abhishek Ambarish Releases Dhwaneer-Reeshma Jodi Muddu Rakshasi Song

ಈಕ್ವಿನಾಕ್ಸ್ ಗ್ಲೋಬಲ್‌ ಎಂಟರ್‌ಟೈನ್ಮೆಂಟ್‌ ಬ್ಯಾನರ್‌ ಅಡಿಯಲ್ಲಿ “ಚೇತನ್‌ ಗೌಡ” ಅದ್ಧೂರಿಯಾಗಿ ನಿರ್ಮಿಸಿರುವ ವಾಮನ ಸಿನಿಮಾವನ್ನು ಯುವ ನಿರ್ದೇಶಕ “ಶಂಕರ್‌ ರಾಮನ್‌” ರಚಿಸಿ ನಿರ್ದೇಶಿಸಿದ್ದಾರೆ. ಬೆಂಗಳೂರಿನ ಮಂತ್ರಿ ಮಾಲ್ ನಲ್ಲಿ ಮುದ್ದು ರಾಕ್ಷಸಿ ಮೆಲೋಡಿ ಹಾಡನ್ನು ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಷ್ ರಿಲೀಸ್ ಮಾಡಿ ಗೆಳೆಯನ ಚಿತ್ರಕ್ಕೆ ಸಾಥ್ ಕೊಟ್ಟರು.Abhishek Ambarish Releases Dhwaneer-Reeshma Jodi Muddu Rakshasi Song

ಅಭಿಷೇಕ್ ಅಂಬರೀಷ್, ನಾನು ಈಗಷ್ಟೇ ಮುದ್ದು ರಾಕ್ಷಸಿ ಹಾಡು ನೋಡಿದೆ. ಒಂದು ಸಾಂಗ್ ಹಿಟ್ ಆಗಬೇಕು ಅಂದರೆ ಅದರ ಕ್ರೆಡಿಟ್ ಹೀರೋಗೂ ಅಲ್ಲ ಹೀರೋಯಿನ್ ಗೂ ಅಲ್ಲ. ಮ್ಯೂಸಿಕ್ ಡೈರೆಕ್ಟರ್, ಲಿರಿಕ್ಸಿಸ್ಟ್ ಗೆ. ಅವರ ಎಫರ್ಟ್ ಜಾಸ್ತಿ ಇರುತ್ತದೆ. ನಮ್ಮ ಗೆಳೆಯ ಧನ್ವೀರ್ ಇಷ್ಟು ಚೆನ್ನಾಗಿ ರೋಮ್ಯಾನ್ಸ್ ಮಾಡ್ತಾನೆ ಗೊತ್ತಿರಲಿಲ್ಲ. ಬೈ ಟು ಲವ್ ಸಿನಿಮಾದಲ್ಲಿ ಸ್ವಲ್ಪ ನೋಡಿದ್ದೇವು. ಈಗ ವಾಮನ ಮುಖಾಂತರ ಕಂಪ್ಲೀಟ್ ಕಮರ್ಷಿಯಲ್ ಪ್ಯಾಕೇಜ್, ಕ್ಯೂಟ್ ಲವರ್ ಬಾಯ್ ರೀತಿ ಕಾಣಿಸುತ್ತಿದ್ದಾನೆ ಎಂದರು.Abhishek Ambarish Releases Dhwaneer-Reeshma Jodi Muddu Rakshasi Song

ಧ್ವನೀರ್ ಗೌಡ ಮಾತನಾಡಿ, ಒಂದೇ ಒಂದು ಫೋನ್ ಕಾಲ್ ಗೆ ಬಂದು ಮುದ್ದು ರಾಕ್ಷಸಿ ಹಾಡನ್ನು ಅಭಿಷೇಕ್ ಅಂಬರೀಶ್ ಅವರು ಲಾಂಚ್ ಮಾಡಿಕೊಟ್ಟಿದ್ದಾರೆ. ಭೂಷಣ್ ಮಾಸ್ಟರ್ ಕೊರಿಯೋಗ್ರಫಿಗೆ ಹೆಜ್ಜೆ ಹಾಕಿದ್ದೇನೆ ಎಂದರು.

ವಾಮನ ನಿರ್ಮಾಪಕ ಚೇತನ್ ಗೌಡ ಮಾತನಾಡಿ, ಎಲ್ಲರಿಗೂ ಧನ್ಯವಾದ..ಈ ಸಮಾರಂಭವನ್ನು ಇಷ್ಟು ಯಶಸ್ವಿಯಾಗಿ ನಡೆಸಿಕೊಟ್ಟಿದ್ದೀರಾ. ನಾನು ಮೊದಲ ಸಾಂಗ್ ಬಿಡುಗಡೆ ಟೈಮ್ ನಲ್ಲಿ ಸಿನಿಮಾ ಬಗ್ಗೆ ಎಲ್ಲವನ್ನೂ ಹೇಳಿದ್ದೇನೆ. ಈ ಹಾಡನ್ನು ನೋಡಿ ಸಪೋರ್ಟ್ ಮಾಡಿ. ಕನ್ನಡ ಸಿನಿಮಾಗಳನ್ನು ನೋಡಿ ಕನ್ನಡ ಚಿತ್ರರಂಗ ಬೆಳೆಸಿ ಎಂದರು.Abhishek Ambarish Releases Dhwaneer-Reeshma Jodi Muddu Rakshasi Song

ನಿರ್ದೇಶಕ ಶಂಕರ್ ರಾಮನ್ ಮಾತನಾಡಿ, ಮೊದಲ ಹಾಡಿಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದೆ. ಈ ಸಾಂಗ್ ನಿಮಗೆ ಡೆಡಿಕೇಟ್ ಗೆ ಮಾಡುತ್ತಿದ್ದೇವೆ. ಅಜನೀಶ್ ಲೋಕನಾಥ್ ಸಂಗೀತ, ವಿ ನಾಗೇಂದ್ರ ಪ್ರಸಾದ್ ಮುದ್ದಾದ ಸಾಹಿತ್ಯ, ವಿಜಯ್ ಪ್ರಕಾಶ್ ಹಾಗೂ ಹರ್ಷಿಕಾ ದೇವನಾಥ್ ಧ್ವನಿ ಕೂಡಿಸಿದ್ದು, ಭೂಷಣ್ ಮಾಸ್ಟರ್ ಕೊರಿಯೋಗ್ರಫ್ ಮಾಡಿದ್ದಾರೆ. ಮನೆಗೆ ಹೋಗ್ತಾ ನೀವು ಮುದ್ದು ಮುದ್ದು ರಾಕ್ಷಸಿ ಹಾಡುತ್ತಾ ಹೋಗಿ ಎಂದರು.Abhishek Ambarish Releases Dhwaneer-Reeshma Jodi Muddu Rakshasi Song

ವಾಮನ ಸಿನಿಮಾದಲ್ಲಿ ಧನ್ವೀರ್‌ಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ಅಭಿನಯಿಸಿದ್ದು, ತಾರಾ, ಸಂಪತ್‌, ಆದಿತ್ಯ ಮೆನನ್‌, ಶಿವರಾಜ್ ಕೆಆರ್ ಪೇಟೆ, ಅವಿನಾಶ್‌, ಅಚ್ಯುತ್‌ ಕುಮಾರ್‌, ಕಾಕ್ರೋಚ್‌ ಸುಧಿ, ಭೂಷಣ್‌ ಮುಂತಾದವು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಮಹೇಂದ್ರ ಸಿಂಹ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನ, ಅರ್ಜುನ್ ರಾಜ್, ವಿಕ್ರಮ್ ಮೋರ್ ಮತ್ತು ಜಾಲಿ ಬಾಸ್ಟಿನ್ ಆಕ್ಷನ್, ನವೀನ್ ಕಲಾ ನಿರ್ದೇಶನ ಚಿತ್ರಕ್ಕಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…