ನಟನೆಗಿಳಿದ ನಿರ್ದೇಶಕ ಸತ್ಯಪ್ರಕಾಶ್‌

Acting Director Satyaprakash

ಇತ್ತೀಚಿನ ದಿನಗಳಲ್ಲಿಹಲವು ನಿರ್ದೇಶಕರು ತಮ್ಮ ವಿಭಿನ್ನ ರೀತಿಯ ಕಥೆಯನ್ನು ತೆರೆ ಮೇಲೆ ತರಲು ತಾವೇ ನಟನೆಗಿಳಿಯುತ್ತಿದ್ದಾರೆ. ಈಗ ಆ ಸಾಲಿಗೆ ಹೊಸ ಸೇರ್ಪೆಡೆ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಡಿ ಸತ್ಯಪ್ರಕಾಶ್‌. Acting Director Satyaprakash

Acting Director Satyaprakash

ರಾಮಾ ರಾಮಾ ರೇ ಮತ್ತು ಒಂದಲ್ಲಾಎರಡಲ್ಲಾಸಿನಿಮಾಗಳ ಮೂಲಕ ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಿರ್ದೇಶಕ ಎಂದು ಹೆಸರು ಮಾಡಿದ್ದ ಅವರು ತಮ್ಮ ಮೊದಲೆರೆಡು ಸಿನಿಮಾಗಳಿಗೆ ಚಿತ್ರಗಳಿಗೆ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದರು. ಕೆಲ ದಿನಗಳ ಹಿಂದೆಯಷ್ಟೇ ಇವರ ನಿರ್ದೇಶನಲ್ಲಿ‘ಮ್ಯಾನ್‌ ಆಫ್‌ ದಿ ಮ್ಯಾಚ್‌’ ಎಂಬ ಸಿನಿಮಾ ಮೂಡಿ ಬಂದಿತ್ತು. ನಿರ್ದೇಶನದ ಜತೆಗೆ ತಮ್ಮದೇ ಬ್ಯಾನರ್ ನಲ್ಲಿ ನಿರ್ಮಾಣವನ್ನು ಸಹ ಮಾಡುವ ಸತ್ಯ ಸಿನಿಮಾಗಳ ವಿತರಣೆಯನ್ನು ಸಹ ಕಳೆದ ಒಂದೂವರೆ ವರ್ಷಗಳಿಂದ ಮಾಡುತ್ತಿದ್ದಾರೆ.

 

ಆದರ್ಶಗಳಿಗಾಗಿ ಬದುಕುವ ಬದುಕು ಒಂದು ತಪಸ್ಸೇ ಸರಿ

Acting Director Satyaprakash

ಈಗಾಗಲೇ 35ಕ್ಕೂ ಹೆಚ್ಚಿನ ಸಿನಿಮಾಗಳನ್ನು ಸತ್ಯ ಸಿನಿ‌ ಡಿಸ್ಟ್ರಿಬ್ಯೂಟರ್ಸ್ ವತಿಯಿಂದ ವಿತರಿಸಿದ್ದಾರೆ. ಈಗ ಅವರು ತಮ್ಮ ಮುಂದಿನ ಸಿನಿಮಾವನ್ನು ನಿರ್ದೇಶನ ಮಾಡಲು ಸಜ್ಜಾಗಿದ್ದು, ಈ ಚಿತ್ರದಲ್ಲಿತಾವು ಸಹ ಒಂದ ಪ್ರಮುಖ ಪಾತ್ರವನ್ನು ನಿರ್ವಹಿಸಲಿದ್ದಾರೆ.
ಕೊಂಚ ಫ್ಯಾಂಟಸಿ ಮತ್ತು ಕಮರ್ಷಿಯಲ್‌ ಎಲಿಮೆಂಟ್‌ಗಳಿರುವ ಈ ಹೊಸ ಸಿನಿಮಾದಲ್ಲಿಫ್ರೆಶ್‌ ಆಗಿರುವ ನಕ್ಕು ನಗಿಸುವಂತಹ ಕಥೆಯನ್ನು ಸಿನಿಮಾದಲ್ಲಿ ಸತ್ಯಪ್ರಕಾಶ್‌ ಹೇಳಲಿದ್ದಾರೆ. ಈ ಚಿತ್ರದಲ್ಲಿಸತ್ಯಪ್ರಕಾಶ್‌ ಜತೆಗೆ ಅಥರ್ವ ಪ್ರಕಾಶ್ ಎಂಬ ಯುವಕ ಕೂಡಾ ನಟಿಸುತ್ತಿದ್ದಾರೆ.Acting Director Satyaprakash

ಸತ್ಯಪ್ರಕಾಶ್‌ ಅವರೇ ನಿರ್ದೇಶನ ಮಾಡಿದ್ದ ‘ಮ್ಯಾನ್‌ ಆಫ್‌ ದಿ ಮ್ಯಾಚ್‌’ ಸಿನಿಮಾದಲ್ಲಿ ಅಥರ್ವ ಪ್ರಕಾಶ್ ಒಂದು ಪ್ರಮುಖ ಪಾತ್ರವನ್ನು ನಿರ್ವಹಿಸಿ ಗಮನ ಸೆಳೆದಿದ್ದರು. ವಿಶೇಷ ಎಂದರೆ ಈ ಸಿನಿಮಾದಲ್ಲಿಸತ್ಯಪ್ರಕಾಶ್‌ ನಿರ್ದೇಶನ, ಮತ್ತು ಪ್ರಮುಖ ಪಾತ್ರದಲ್ಲಿಕಾಣಿಸಿಕೊಳ್ಳುವುದರ ಜತಗೆ ನಿರ್ಮಾಣವನ್ನು ಸಹ ತಮ್ಮ ಸತ್ಯಪಿಕ್ಚರ್ಸ್‌ ಬ್ಯಾನರ್‌ನಲ್ಲಿಮಾಡುತ್ತಿದ್ದಾರೆ. ಸದ್ಯಕ್ಕೆ ಸಿನಿಮಾ ಅನೌನ್ಸ್‌ಮೆಂಟ್‌ ಮಾತ್ರ ಈಗ ಮಾಡಿದ್ದು, ಸತ್ಯಪ್ರಕಾಶ್‌ ಅವರ ಹಿಂದಿನ ಸಿನಿಮಾಗಳಲ್ಲಿಕೆಲಸ ಮಾಡಿದ ತಂತ್ರಜ್ಞರ ತಂಡ ಈ ಚಿತ್ರದಲ್ಲಿಯೂ ಮುಂದುವರೆಯಲಿದೆ. ಸ್ಯಾಂಡಲ್‌ವುಡ್‌ನ ಪ್ರಮುಖ ಕಲಾವಿದರು ಈ ಸಿನಿಮಾದ ಭಾಗವಾಗಲಿದ್ದಾರೆ. ಸದ್ಯಕ್ಕೆ ಸಿನಿಮಾಗೆ ಇನ್ನೂ ಟೈಟಲ್‌ ಇಟ್ಟಿಲ್ಲ, ಸದ್ಯದಲ್ಲೇ ಸಣ್ಣ ಟೀಸರ್‌ ಮೂಲಕ ಟೈಟಲ್‌ ಅನ್ನುಅನೌನ್ಸ್‌ ಮಾಡಲಿದ್ದಾರಂತೆ. ಇನ್ನೊಂದು ವಿಶೇಷ ಎಂದರೆ ಸತ್ಯಪ್ರಕಾಶ್‌ ಕಥೆ ಬರೆದಿರುವ ‘ಕಾಲಾ ಪತ್ಥರ್‌’ ಮತ್ತು ‘ಅನ್ಲಾಕ್‌ ರಾಘವ’ ಇದೇ ವರ್ಷ ಬಿಡುಗಡೆಯಾಗಲಿದೆ. ಈ ಎರಡೂ ಸಿನಿಮಾ ಮೂಲಕ ಪ್ರೇಕ್ಷಕರಿಗೆ ಒಂದು ನಿರೀಕ್ಷೆ ಇದೆ.

ಲೋಕದಲ್ಲಿ ಯಾವ ಮಾನವನೂ ಪೂರ್ಣ ಸುಖಿಯೂ ಅಲ್ಲ.

‘ಈಗ ಮಾಡಲು ಹೊರಟಿರುವ ಕಥೆಯನ್ನು ನಾನೇ ಬರೆದಿದ್ದೇನೆ. ಈ ಚಿತ್ರದಲ್ಲಿಎರಡು ಪ್ರಮುಖ ಪಾತ್ರಗಳು ಬರಲಿದ್ದು, ಒಂದನ್ನು ನಾನು ನಿರ್ವಹಿಸುತ್ತಿದ್ದೇನೆ. ಪಾತ್ರಕ್ಕೆ ನಾನು ಸೂಕ್ತವಾಗಿ ಹೊಂದಿಕೆಯಾಗುತ್ತೇನೆ ಎಂದು ಅನಿಸಿ ಮೇಲೆ ನಟನಾಗಲು ನಿರ್ಧರಿಸಿದೆ. ಈಗಾಗಲೇ ಅದಕ್ಕೆ ಬೇಕಾದ ತಯಾರಿಯನ್ನು ಮಾಡಿಕೊಳ್ಳುತ್ತಿದ್ದೇನೆ. ಪ್ರೇಕ್ಷಕರನ್ನು ನಕ್ಕು ನಗಿಸುತ್ತಾ ಒಂದು ಭಾವನಾತ್ಮಕ ಕಥೆಯನ್ನು ಈ ಚಿತ್ರದಲ್ಲಿಹೇಳುವ ಪ್ರಯತ್ನವಾಗಲಿದೆ. ’ಎನ್ನುವುದು ಸತ್ಯಪ್ರಕಾಶ್‌ ಅವರ ಮಾತು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…