ಶ್ರೀಕಾಳಹಸ್ತಿ ದೇವಾಲಯಕ್ಕೆ ಭೇಟಿ ಕೊಟ್ಟ ‘ರೆಮೋ’ ಸಿನಿಮಾ ನಾಯಕ ನಟ ಇಶಾನ್

actor-ishaan-the-hero-of-the-movie-remo-visited-the-srikalahasti-temple

ಪವನ್ ಒಡೆಯರ್ ನಿರ್ದೇಶನದ ಇಶಾನ್, ಆಶಿಕಾ ರಂಗನಾಥ್ ನಟನೆಯ ‘ರೆಮೋ’ ಸಿನಿಮಾ ಸ್ಯಾಂಡಲ್ ವುಡ್ ಸಿನಿ ಪ್ರೇಕ್ಷಕರ ಸೆಂಟರ್ ಆಫ್ ಅಟ್ರ್ಯಾಕ್ಷನ್ ಆಗಿದೆ. ಎಲ್ಲಿ ನೋಡಿದ್ರೂ ‘ರೆಮೋ’ ಟಾಕ್ ಜೋರಾಗಿದೆ. ಕ್ರೇಜಿ ಹಾಗೂ ಅದ್ದೂರಿ ಟ್ರೇಲರ್, ಹಾಡುಗಳ ಮೂಲಕ ಎಲ್ಲರ ಮನಗೆದ್ದಿರೋ ‘ರೆಮೋ’ ನವೆಂಬರ್ 25ಕ್ಕೆ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಸಿನಿಮಾದ ಭರ್ಜರಿ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರುವ ಚಿತ್ರದ ನಾಯಕ ನಟ ಇಶಾನ್ ಇಂದು ಶ್ರೀಕಾಳಹಸ್ತಿ ದೇವರ ಆರ್ಶೀವಾದವನ್ನು ಪಡೆದಿದ್ದಾರೆ.actor-ishaan-the-hero-of-the-movie-remo-visited-the-srikalahasti-temple

ಇದೇ ಸಿನಿ ಶುಕ್ರವಾರ ಸಿನಿಮಾ ಬಿಡುಗಡೆಯಾಗುತ್ತಿರುವ ಪ್ರಯುಕ್ತ ನಾಯಕ ನಟ ಇಶಾನ್ ಹಾಗೂ ಚಿತ್ರತಂಡ ಆಂಧ್ರದಲ್ಲಿರುವ ಶ್ರೀಕಾಳಹಸ್ತಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ದೇವರ ದರ್ಶನ ಮಾಡಿ ಸಿನಿಮಾ ಗೆಲುವಿಗಾಗಿ ಪೂಜೆ ಸಲ್ಲಿಸಿದ್ದಾರೆ.actor-ishaan-the-hero-of-the-movie-remo-visited-the-srikalahasti-temple

ಇಶಾನ್ ಸಿನಿ ಕೆರಿಯರ್ ನ ಬಹು ನಿರೀಕ್ಷಿತ ಸಿನಿಮಾ ‘ರೆಮೋ’. ಪೂರಿ ಜಗ್ಗನಾಥ್ ನಿರ್ದೇಶನದ ‘ರೋಗ್’ ಸಿನಿಮಾ ಮೂಲಕ ನಾಯಕ ನಟನಾಗಿ ಎಂಟ್ರಿ ಕೊಟ್ಟ ಇಶಾನ್ ಬಿಗ್ ಬ್ರೇಕ್ ನಂತರ ಕಂಬ್ಯಾಕ್ ಮಾಡುತ್ತಿದ್ದಾರೆ. ಈ ಸಿನಿಮಾ ಮೇಲೆ ಇಶಾನ್ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಚಿತ್ರ್ಕಕಾಗಿ ಅವರ ತಯಾರಿ ಕೂಡ ಬಿಡುಗಡೆಯಾಗಿರುವ ಸ್ಯಾಂಪಲ್ ಗಳಲ್ಲಿ ಎದ್ದು ಕಾಣುತ್ತಿದೆ. ಸ್ಕ್ರೀನ್ ಮೇಲೆ ಇಶಾನ್ ಅಪಿಯರೆನ್ಸ್ ಕೂಡ ಸಿನಿರಸಿಕರನ್ನು ಇಂಪ್ರೆಸ್ ಮಾಡಿದೆ. ಸಿನಿಮಾ ಹಾಗೂ ತಮ್ಮ ಬಗ್ಗೆ ಕೇಳಿ ಬರ್ತಿರೋ ಟಾಕ್ ಕೇಳಿ ಸಂತಸ ಗೊಂಡಿರುವ ಇಶಾನ್ ನವೆಂಬರ್ 25ರಂದು ಪ್ರೇಕ್ಷಕರ ರೆಸ್ಪಾನ್ಸ್ ಹೇಗಿರುತ್ತೆ ಎಂಬುದನ್ನು ನೋಡಲು ಕಾತುರರಾಗಿದ್ದಾರೆ.raymo kannada movie trailer released shivanna

‘ರೆಮೋ’ ಸಿನಿಮಾ ಮ್ಯೂಸಿಕಲ್ ಮತ್ತು ಔಟ್ ಅಂಡ್ ಔಟ್ ರೋಮ್ಯಾಂಟಿಕ್ ಸಬ್ಜೆಕ್ಟ್ ಒಳಗೊಂಡಿದೆ. ಚಿತ್ರವನ್ನು ಜಯಾದಿತ್ಯ ಬ್ಯಾನರ್ ನಡಿ ಸಿ ಆರ್ ಮನೋಹರ್ ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಸಿ ಆರ್ ಗೋಪಿ ಅವರ ಸಹ ನಿರ್ಮಾಣವೂ ಚಿತ್ರಕ್ಕಿದೆ. ವೈದಿ ಕ್ಯಾಮೆರಾ ವರ್ಕ್, ಕೆ.ಎಂ. ಪ್ರಕಾಶ್ ಸಂಕಲನ, ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಸಾಕಷ್ಟು ವಿಶೇಷತೆ ಹೊತ್ತ ‘ರೆಮೋ’ ನವೆಂಬರ್ 25ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…