‘ಜಸ್ಟ್ ಪಾಸ್’ ಆಗಲು ಹೊರಟ ನಟ ಶ್ರೀ ಗೆ ಸಿಕ್ಕಳು ಹೀರೋಯಿನ್ – ಡಿಸೆಂಬರ್ 14ಕ್ಕೆ ಸೆಟ್ಟೇರಲಿದೆ ಸಿನಿಮಾ

Actor Shree who was going to be 'Just Pass' got the heroine

‘ತರ್ಲೆ ವಿಲೇಜ್’, ‘ಪರಸಂಗ’, ‘ದೊಡ್ಡಹಟ್ಟಿ ಬೋರೇಗೌಡ’ ಸಿನಿಮಾ ಮೂಲಕ ಗುರುತಿಸಿಕೊಂಡಿರುವ ನಿರ್ದೇಶಕ ಕೆ.ಎಂ.ರಘು ಹೊಸ ಸಬ್ಜೆಕ್ಟ್ ಹೊತ್ತು ಬಂದಿದ್ದಾರೆ. ಈ ಬಾರಿ ಯೂತ್ ಫುಲ್ ಸಬ್ಜೆಕ್ಟ್ ಕಥೆ ಹೇಳಲು ರೆಡಿಯಾಗಿದ್ದಾರೆ. ಡಿಸೆಂಬರ್ 14ರಂದು ಸಿನಿಮಾ ಸೆಟ್ಟೇರಲಿದ್ದು, ಚಿತ್ರಕ್ಕೆ ‘ಜಸ್ಟ್ ಪಾಸ್’ ಎಂದು ಶೀರ್ಷಿಕೆ ಇಡಲಾಗಿದೆ.Actor Shree who was going to be 'Just Pass' got the heroine

ಕಾಲೇಜ್ ಯೂತ್ ಸಬ್ಜೆಕ್ಟ್ ಒಳಗೊಂಡ ಚಿತ್ರದಲ್ಲಿ ಇರುವುದೆಲ್ಲವ ಬಿಟ್ಟು, ಗಜಾನನ ಗ್ಯಾಂಗ್ ಖ್ಯಾತಿಯ ನಟ ಶ್ರೀ ನಾಯಕ ನಟನಾಗಿ ನಟಿಸುತ್ತಿದ್ದಾರೆ. ಸ್ಕ್ರಿಪ್ಟ್ ಕೆಲಸಗಳೆಲ್ಲ ಮುಗಿಸಿ ಶೂಟಿಂಗ್ ಹೊರಡಲು ಸಿನಿಮಾ ತಂಡ ಸಕಲ ತಯಾರಿ ನಡೆಸಿಕೊಂಡಿದೆ. ಚಿತ್ರಕ್ಕೆ ಹೀರೋಯಿನ್ ಹುಡುಕಾಟಲ್ಲಿದ್ದ ಚಿತ್ರತಂಡಕ್ಕೆ ಹೊಸ ಪ್ರತಿಭೆ ಪ್ರಣತಿ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಡಾನ್ಸ್ ಕರ್ನಾಟಕ ಡಾನ್ಸ್, ಫ್ಯಾಮಿಲಿ ವಾರ್ ಸೀಸನ್ 2 ರನ್ನರ್ ಅಪ್ ಆಗಿರುವ ಪ್ರಣತಿ ಬ್ರಹ್ಮಗಂಟು ಸೀರಿಯಲ್ ನಲ್ಲೂ ನಟಿಸಿದ್ದಾರೆ. ಈಗ ಜಸ್ಟ್ ಪಾಸ್ ಮೂಲಕ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.Actor Shree who was going to be 'Just Pass' got the heroine

ಕೆ.ಎಂ ರಘು. ನಿರ್ದೇಶನದ ದೊಡ್ಡಹಟ್ಟಿ ಬೋರೇಗೌಡ ಸಿನಿಮಾ ಬೆಂಗಳೂರು ಇಂಟರ್ ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಕನ್ನಡದ ಅತ್ಯುತ್ತಮ ಮೊದಲ ಸಿನಿಮಾ ಎಂಬ ಪ್ರಶಸ್ತಿ ಪಡೆದುಕೊಂಡು ಗಮನ ಸೆಳೆದಿತ್ತು. ಮೊಲದ ಬಾರಿ ನಿರ್ದೇಶಕರು ಯೂತ್ ಫುಲ್ ಸಬ್ಜೆಕ್ಟ್ ಕೈಗೆತ್ತಿಕೊಂಡಿದ್ದು, ಇದೇ ಡಿಸೆಂಬರ್ 14ರಂದು ಸಿನಿಮಾ ಸೆಟ್ಟೇರಲಿದೆ.Actor Shree who was going to be 'Just Pass' got the heroine

ರಾಯ್ಸ್ ಎಂಟಟೈನ್ಮೆಂಟ್ ಬ್ಯಾನರ್ ನಡಿ ಶಶಿಧರ್.ಕೆ.ವಿ, ಶ್ರೀಧರ್ ಕೆ.ವಿ ಜಸ್ಟ್ ಪಾಸ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಂಗಾಯಣ ರಘು, ಸಾಧುಕೋಕಿಲ, ಸುಚೇಂದ್ರ ಪ್ರಸಾದ್, ನವೀನ್ ಡಿ ಪಡಿಕ್ಕಲ್, ಪ್ರಕಾಶ್ ತುಮಿನಾಡ್, ದೀಪಕ್ ರೈ, ಅರ್ಪಿತಾ, ಚಂದು ಶ್ರೀ, ಯಶಿಕಾ, ವಿಶ್ವಾಸ್, ನಿಖಿಲ್, ಗಗನ್, ಅಭಿ ಚಿತ್ರದ ತಾರಾಬಳಗದಲ್ಲಿದ್ದಾರೆ. ಕೆ.ಎಂ.ಪ್ರಕಾಶ್ ಸಂಕಲನ, ಹರ್ಷವರ್ಧನ್ ರಾಜ್ ಸಂಗೀತ, ವೀನಸ್ ನಾಗರಾಜ್ ಮೂರ್ತಿ ಛಾಯಾಗ್ರಾಹಣ ಚಿತ್ರಕ್ಕಿದೆ.Actor Shree who was going to be 'Just Pass' got the heroine

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…