31 ಗೋವು ದತ್ತು ಪಡೆದ ಚಿತ್ರನಟ ಸುದೀಪ್

Actor Sudeep who adopted 31 cows

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸರ್ಕಾರಿ ಗೋಶಾಲೆಗಳಲ್ಲಿ ಪ್ರತಿ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆಯುತ್ತೇನೆ ಎಂದು ಚಿತ್ರನಟ ಸುದೀಪ್ ಹೇಳಿದರು.

ಇಂದು ತಮ್ಮ ನಿವಾಸದಲ್ಲಿ ಪಶುಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ಅವರೊಂದಿಗೆ ಗೋಪೂಜೆ ನೇರವೇರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಗೋಸಂಕುಲ ಸಂರಕ್ಷಣೆಯಲ್ಲಿ ಮಹತ್ವದ ಕೆಲಸ ಮಾಡುತ್ತಿದೆ ಎಂದರು.Actor Sudeep who adopted 31 cows

ನನ್ನನ್ನು ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯನ್ನಾಗಿ ನೇಮಕ ಮಾಡಿ ಸರ್ಕಾರ ನನ್ನ ಜವಾಬ್ದಾರಿ ಹೆಚ್ಚಿಸಿದೆ. ನನ್ನನ್ನು ನೇಮಕ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಪ್ರಭು ಚವ್ಹಾಣ್ ಅವರಿಗೆ ಕೃತಜ್ಞತೆ ತಿಳಿಸುತ್ತೇನೆ. ಸಾರ್ವಜನಿಕರು, ಚಿತ್ರರಂಗದ ಕಲಾವಿದರು, ಸಾರ್ವಜನಿಕ ಸಂಘ ಸಂಸ್ಥೆಗಳು ಗೋವುಗಳನ್ನು ದತ್ತು ಪಡೆಯಬೇಕು ಎಂದು ಸುದೀಪ್ ಮನವಿ ಮಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಹುಟ್ಟುಹಬ್ಬದಂದು 11 ಗೋವು ದತ್ತು ಪಡೆದು, ತಮ್ಮ ಕನಸಿನ ಕೂಸಾದ ಪುಣ್ಯಕೋಟಿ ದತ್ತು ಯೋಜನೆ ಜಾರಿಗೆ ತಂದರು. ನಾನು ಕೂಡ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆದಿದ್ದೇನೆ ಎಂದು ಸಚಿವ ಪ್ರಭು ಚವ್ಹಾಣ್ ಅವರು ವಿವರಿಸಿದಾಗ ನಾನು ಕೂಡ ನಿಮ್ಮಂತೆ ದತ್ತು ಪಡೆಯುತ್ತಿದ್ದೇನೆ ಎಂದು ಸುದೀಪ್ ಅವರು ಸಚಿವರಿಗೆ ತಿಳಿಸಿದರು.Actor Sudeep who adopted 31 cows

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದ ನಂತರ 100 ಸರ್ಕಾರಿ ಗೋಶಾಲೆ ಸ್ಥಾಪಿಸಲಾಗುತ್ತಿದೆ.‌ ರಾಷ್ಟ್ರದಲ್ಲಿಯೇ ಪುಣ್ಯಕೋಟಿ ದತ್ತು ಯೋಜನೆ ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ. ಪ್ರಾಣಿ ಕಲ್ಯಾಣ ಮಂಡಳಿ, ಪ್ರಾಣಿ ಸಹಾಯವಾಣಿ ಕೇಂದ್ರ, ಪಶು ಸಂಜೀವಿನಿ ಆ್ಯಂಬುಲೆನ್ಸ್, ಗೋಮಾತಾ ಸಹಕಾರ ಸಂಘ, ಆತ್ಮ ನಿರ್ಭರ ಗೋಶಾಲೆ ಸ್ಥಾಪನೆ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದು ಸಚಿವರು ತಿಳಿಸಿದರು.

ಜಾನುವಾರುಗಳ ದತ್ತು ಯೋಜನೆಯಡಿ ಪುಣ್ಯಕೋಟಿ ದತ್ತು ಪೋರ್ಟಲ್‌ನಲ್ಲಿರುವ ಯಾವುದೇ ಗೋಶಾಲೆಗಳ ಪ್ರತಿ ಜಾನುವಾರಿಗೆ ವಾರ್ಷಿಕ ರೂ.11,000/- (ರೂಪಾಯಿ ಹನ್ನೊಂದು ಸಾವಿರ ಮಾತ್ರ)ಗಳು, ಜಾನುವಾರುಗಳಿಗಾಗಿ ಆಹಾರ ಪೂರೈಕೆಗೆ ಯೋಜನೆಯಡಿ ಸಾರ್ವಜನಿಕರು ತಮ್ಮ ಜೀವನದ ವಿಶೇಷ ಸಂದರ್ಭಗಳಲ್ಲಿ (ಹುಟ್ಟುಹಬ್ಬ, ಮದುವೆ ವಾರ್ಷಿಕೋತ್ಸವ ಇತ್ಯಾದಿ) ರಾಸುಗಳಿಗೆ ಒಂದು ದಿನಕ್ಕೆ ರೂ.70ಗಳು, ಗೋಶಾಲೆಗಳಿಗೆ ದೇಣಿಗೆ ಮತ್ತು ಗೋಶಾಲೆ ನಿರ್ವಹಣೆ ಯೋಜನೆಯಡಿ ಸಾರ್ವಜನಿಕರು ಪುಣ್ಯಕೋಟಿ ದತ್ತು ಪೋರ್ಟಲ್‌ನಲ್ಲಿರುವ ಯಾವುದೇ ಗೋಶಾಲೆಗಳಿಗೆ ಕನಿಷ್ಠ ರೂ.10/- ಯಿಂದ ತಮ್ಮ ಶಕ್ತಾನುಸಾರ ಎಷ್ಟು ಬೇಕಾದರೂ ಮೂಲಭೂತ ಸೌಕರ್ಯ ಹಾಗೂ ಇತರೆ ವೆಚ್ಚಗಳಿಗಾಗಿ ದೇಣಿಗೆ ನೀಡಬಹುದು. ಈ ಯೋಜನೆಗೆ 80 ಜಿ ಆದಾಯ ತೆರಿಗೆ ವಿನಾಯಿತಿ ನೀಡಲಾಗಿದೆ ಎಂದು ಸಚಿವರು ಪುಣ್ಯಕೋಟಿ ಯೋಜನೆ ಕುರಿತು ಮಾಹಿತಿ ನೀಡಿದರು.Actor Sudeep who adopted 31 cows

ಗೋಶಾಲೆಗಳನ್ನು ಆರ್ಥಿಕವಾಗಿ ಸದೃಢಗೊಳಿಸಿ, ಸಾರ್ವಜನಿಕರ ಸಹಕಾರದಿಂದ ಯಾವುದೇ ಅಡಚಣೆಯಿಲ್ಲದೇ ನಡೆಸುವುದು ಈ ಯೋಜನೆ ಉದ್ದೇಶ. ಗೋವು ದತ್ತು, ಗೋಶಾಲೆಗೆ ದೇಣಿಗೆ ಮತ್ತು ಜಾನುವಾರುಗಳಿಗೆ ಆಹಾರ ಯೋಜನೆಯಡಿ ಸಾರ್ವಜನಿಕರು ಪಾಲ್ಗೊಳ್ಳುವಂತೆ ಗೋವುಗಳ ಪಾಲನೆಗೆ ಅವಕಾಶ ಕಲ್ಪಿಸಲಾಗಿದೆ. ತಾವು ಸರ್ಕಾರದೊಂದಿಗೆ ಕೈಜೋಡಿಸಿ ಗೋಸಂಕುಲ ಸಂರಕ್ಷಣೆಯಲ್ಲಿ ಭಾಗವಹಿಸಬೇಕು ಎಂದು ಪ್ರಭು ಚವ್ಹಾಣ್ ಅವರು ಚಿತ್ರನಟ ಸುದೀಪ್ ಅವರಿಗೆ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಚಿತ್ರನಟ ಸುದೀಪ್ ಅವರಿಗೆ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿ ನೇಮಕಾತಿ ಪತ್ರ ವಿತರಿಸಿ, ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಇಲಾಖೆ ಕಾರ್ಯದರ್ಶಿ ಡಾ.ಸಲ್ಮಾ ಕೆ.ಫಾಹೀಮ್, ಆಯುಕ್ತೆ ಎಸ್.ಅಶ್ವಥಿ, ಅಪರ ನಿರ್ದೇಶಕ ಡಾ.ಶ್ರೀನಿವಾಸ್,ವೀರಲೋಕ ಬುಕ್ಸ್ ಸಂಸ್ಥಾಪಕ ವೀರಕಪುತ್ರ ಶ್ರೀನಿವಾಸ ಸೇರಿದಂತೆ ಹಲವರಿದ್ದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…