ತುಪ್ಪದ ಹುಡುಗಿ ರಾಗಿಣಿಗೆ ಹುಟ್ಟುಹಬ್ಬದ ಸಡಗರ.

“ಸಾರಿ” (ಕರ್ಮ ರಿಟರ್ನ್ಸ್) ಚಿತ್ರತಂಡದಿಂದ ರಾಗಿಣಿ ದ್ವಿವೇದಿ ಹುಟ್ಟುಹಬ್ಬಕ್ಕೆ ಮೋಷನ್ ಪೋಸ್ಟರ್ ಬಿಡುಗಡೆ.

“ವೀರ ಮದಕರಿ” ಚಿತ್ರದಿಂದ ಕನ್ನಡಿಗರ ಮನ ಗೆದ್ದಿರುವ ರಾಗಿಣಿ, ಈವರೆಗೂ ಇಪ್ಪತ್ತೈದಕ್ಕೂ ಹೆಚ್ಚಿನ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಪ್ರಸ್ತುತ ಅವರ ನಟನೆಯ ಚಿತ್ರ “ಸಾರಿ” (ಕರ್ಮ ರಿಟರ್ನ್ಸ್).281402220 149530404287741 2628943797511287115 n

ಮೇ 24 ರಾಗಿಣಿ ಹುಟ್ಟುಹಬ್ಬ. ಈ ಸಂಭ್ರಮಕ್ಕಾಗಿ ಚಿತ್ರತಂಡ ವಿಭಿನ್ನಯ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದೆ. ಕನ್ನಡ ಚಿತ್ರರಂಗದ ಗಣ್ಯರು ರಾಗಿಣಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.WhatsApp Image 2022 05 24 at 7.29.01 PM 1

ನನ್ನನ್ನು ಪತ್ರಕರ್ತ ಅಫ್ಜಲ್ ಭೇಟಿಯಾಗಿ ಈ ಚಿತ್ರದ ಕುರಿತು ಹೇಳಿದರು. ತುಂಬಾ ಇಷ್ಟವಾಯಿತು. ಈ ಚಿತ್ರದ ನಿರ್ದೇಶಕ ಬ್ರಹ್ಮ ಅವರ ಬಗ್ಗೆ ತಿಳಿದು ಆಶ್ಚರ್ಯವಾಯಿತು. ಅತ್ಯುತ್ತಮ ತಂತ್ರಜ್ಞ ಅವರು. ನಾನು ಒಂದೇ ತರಹದ ಪಾತ್ರ ಮಾಡಲು ಇಷ್ಟ ಪಡುವುದಿಲ್ಲ. ಬೇರೆಬೇರೆ ಪಾತ್ರ ಮಾಡಬೇಕೆಂದು ನನ್ನ ಆಸೆ. ಇದರಲ್ಲೂ ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ. ನಿಮ್ಮ ಹಾರೈಕೆ ಸದಾ ಇರಲಿ ಎನ್ನುತ್ತಾರೆ ನಾಯಕಿ ರಾಗಿಣಿ ದ್ವಿವೇದಿ.WhatsApp Image 2022 05 24 at 7.29.00 PM 1

ನಾನು 2000 ನೇ ಇಸವಿಯಿಂದಲ್ಲೂ ಅನಿಮೇಷನ್‌ ಹಾಗೂ ವಿ ಎಫ್ ಎಕ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಈ ಕುರಿತು ಕೆಲವರಿಗೆ ತರಗತಿ ಕೂಡ ತೆಗೆದುಕೊಳ್ಳುತ್ತೇನೆ. ಹಿಂದೆ “ಸಿದ್ದಿ ಸೀರೆ” ಎಂಬ ಚಿತ್ರ ನಿರ್ದೇಶಿಸಿದ್ದ ನನಗೆ ಇದು ಎರಡನೇ ಚಿತ್ರ. ಅಫ್ಜಲ್ ಅವರು ಹೇಳಿದ ಒಂದೆಳೆ ಕಥೆ ಇಷ್ಟವಾಯಿತು. ನಾನು ಅದನ್ನು ಮುಂದುವರೆಸಿದೆ. ಇದರಲ್ಲಿ ಮಾಟ-ಮಂತ್ರ, ಬ್ಲ್ಯಾಕ್ ಮ್ಯಾಜಿಕ್ ಅಂತ ಏನು ಇಲ್ಲ. ಇದೊಂದು ಕ್ರೈಂ ಥ್ರಿಲ್ಲರ್. ಸೂಪರ್ ಹೀರೋ ಕಾನ್ಸೆಪ್ಟ್ ನ ಚಿತ್ರ ಕೂಡ ಹೌದು ಎನ್ನುತ್ತಾರೆ ನಿರ್ದೇಶಕ ಬ್ರಹ್ಮ.281259271 123882753646330 3531785655805967554 n

ಸಮಾರಂಭವೊಂದರಲ್ಲಿ ಬ್ರಹ್ಮ ಅವರ ಬಳಿ ಈ ಸಿನಿಮಾ ವಿಷಯ ಹೇಳಿದೆ. ನಂತರ ರಾಗಿಣಿ ಅವರು ಈ ಪಾತ್ರಕ್ಕೆ ಸೂಕ್ತ ಅನಿಸಿತು. ಅವರ ಬಳಿ ಹೋಗಿ ನೀವು ಈ ಚಿತ್ರದಲ್ಲಿ ನಟಿಸಬೇಕು ಎಂದು ಕೇಳಿದಾಗ, ತಕ್ಷಣ ಒಪ್ಪಿಕೊಂಡರು. ಅವರಿಗೆ ಧನ್ಯವಾದ. ಕೆನಡಾ ನಿವಾಸಿ ನವೀನ್ ಕುಮಾರ್ ಈ ಚಿತ್ರದ ನಿರ್ಮಾಪಕರು. ಜೈ ಕೃಪ್ಲಾನಿ ಹಾಗೂ ಜೇನ್ ಜಾರ್ಜ್ ಸಹ ನಿರ್ಮಾಪಕರು. ಬೆಂಗಳೂರು, ಸಕಲೇಶಪುರದ ಸುತ್ತ ಚಿತ್ರೀಕರಣ ಮಾಡಿದ್ದೇವೆ. ಮುಂದಿನ ಭಾಗದ ಚಿತ್ರೀಕರಣ ಹೈದರಾಬಾದ್ ನಲ್ಲಿ ನಡೆಯಲಿದೆ ಎಂದು ಕಾರ್ಯಕಾರಿ ನಿರ್ಮಾಪಕ ಅಫ್ಜಲ್ ಮಾಹಿತಿ ನೀಡಿದರು. ಛಾಯಾಗ್ರಾಹಕ ರಾಜೀವ್ ಗಣೇಶನ್ ಹಾಗೂ ನಟ ಸ್ವರ್ಣ ಚಂದ್ರ ಕೂಡ “ಸಾರಿ” ಚಿತ್ರದ ಬಗ್ಗೆ ಮಾತನಾಡಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…