10 ವರ್ಷಗಳ ನಂತರ ನಿರ್ದೇಶನದತ್ತ ಕಿಚ್ಚ ಸುದೀಪ್,ಕೆ ಆರ್ ಜಿ ಸ್ಟುಡಿಯೋಸ್ ನಿರ್ಮಾಣದ “ಕೆಕೆ” ಚಿತ್ರ ನಿರ್ದೇಶನ

After 10 years, Kiccha Sudeep turns to direction

ಕೆ ಆರ್ ಜಿ ಸ್ಟುಡಿಯೋಸ್ ನಿರ್ಮಾಣದ “ಕೆಕೆ” ಚಿತ್ರ ನಿರ್ದೇಶನ

ಕಿಚ್ಚ ಸುದೀಪ್ ನಿರ್ದೇಶನಕ್ಕೆ ಯಾವಾಗ ಮರಳುತ್ತಾರೆ ಎಂಬ ಪ್ರಶ್ನೆ ಅವರ ಅಭಿಮಾನಿಗಳ ವಲಯದಲ್ಲಿ ಇದ್ದೇ ಇತ್ತು. ಆ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ‘ಮಾಣಿಕ್ಯ’ ಬಿಡುಗಡೆಯಾಗಿ 10 ವರ್ಷಗಳ ನಂತರ ಸುದೀಪ್ ‘ಕೆಕೆ’ ಎಂಬ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಈ ಚಿತ್ರವನ್ನು ಕೆ ಆರ್ ಜಿ ಸ್ಟುಡಿಯೋಸ್ ನಡಿ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸುತ್ತಿದ್ದಾರೆ.After 10 years, Kiccha Sudeep turns to direction

ಸುದೀಪ್ ಅವರು ನಾಳೆ (ಸೆಪ್ಟೆಂಬರ್ 02) ಶನಿವಾರ ತಮ್ಮ 50ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಅವರು ನಿರ್ದೇಶನಕ್ಕೆ ಮರಳಿರುವ ವಿಷಯ ಅವರ ಅಭಿಮಾನಿಗಳ ಸಂತಸವನ್ನು ಇನ್ನಷ್ಟು ಹೆಚ್ಚಿಸಿದೆ. ಈ ಚಿತ್ರಕ್ಕೆ ‘God Forgives, I don’t – King Kichcha’ ಎಂಬ ಅಡಿಬರಹವಿದ್ದು, ಈ ಚಿತ್ರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.Arasu Creations gift for Kich's birthday.. Sudeep named the star of the sky

‘ಮೈ ಆಟೋಗ್ರಾಫ್’ ಚಿತ್ರದ ಮೂಲಕ ನಿರ್ದೇಶಕರಾದ ಸುದೀಪ್, ಇದುವರೆಗೂ ಆರು ಚಿತ್ರಗಳನ್ನು ನಿರ್ದೇಶನ ಮಾಡಿದ್ದು, ‘ಕೆಕೆ’ ಅವರ ನಿರ್ದೇಶನದ ಏಳನೇ ಚಿತ್ರವಾಗಿದೆ. ಹಾಗೆಯೇ, ಇದು ಕೆ ಆರ್ ಜಿ ಸ್ಟುಡಿಯೋಸ್ ನಿರ್ಮಾಣದ ಆರನೇ ಚಿತ್ರವಾಗಿದೆ . ‘ರತ್ನನ್ ಪ್ರಪಂಚ’ ಚಿತ್ರದ ಮೂಲಕ ಪ್ರಾರಂಭವಾದ ಕೆ ಆರ್ ಜಿ ಸ್ಟುಡಿಯೋಸ್ ಚಿತ್ರ ಪಯಣ, ಸತತವಾಗಿ ಮುಂದುವರೆಯುತ್ತಿದ್ದು, ಮುಂಬರುವ ದಿನಗಳಲ್ಲಿ ಹಲವು ಗುಣಮಟ್ಟದ ಚಿತ್ರಗಳು ಬಿಡುಗಡೆಯಾಗಲಿಕ್ಕೆ ಸಜ್ಜಾಗಿವೆ.After 10 years, Kiccha Sudeep turns to direction

ಸುದೀಪ್ ನಿರ್ದೇಶನದಲ್ಲಿ ಚಿತ್ರ ನಿರ್ಮಿಸುತ್ತಿರುವ ಕುರಿತು ಮಾತನಾಡುವ ಕಾರ್ತಿಕ್ ಗೌಡ, ‘’ಹುಚ್ಚ’ ಚಿತ್ರದಿಂದ ನಾನು ಸುದೀಪ್ ಅವರ ದೊಡ್ಡ ಅಭಿಮಾನಿಯಾಗಿದ್ದು, ಅವರ ಜೊತೆಗೆ ಕೆಲಸ ಮಾಡುವುದು ನನ್ನ ಕನಸಾಗಿತ್ತು. ಆ ಕನಸು ಇದೀಗ ನನಸಾಗುತ್ತಿದ್ದು, ಅವರು ನಟನೆಯ ಜೊತೆಗೆ ನಿರ್ದೇಶನ ಸಹ ಮಾಡುತ್ತಿರುವುದು ನಮ್ಮ ಸಂಭ್ರಮವನ್ನು ಇಮ್ಮಡಿಗೊಳಿಸಿದೆ’ ಎನ್ನುತ್ತಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…