ಗೆಳೆಯನ ಚೊಚ್ಚಲ ನಿರ್ದೇಶನದ ಚಿತ್ರದ ಶೀರ್ಷಿಕೆ ಅನಾವರಣಗೊಳಿಸಿದ ರೀಷಬ್ ಶೆಟ್ಟಿ.

‘ಆಫ್ಟರ್ ಆಪರೇಷನ್ ಲಂಡನ್ ಕೆಫೆ’ ಚಿತ್ರದ ಟೈಟಲ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಬಿಡುಗಡೆಗೊಳಿಸುವ ಮೂಲಕ ನಿರ್ದೇಶಕ ಸಡಗರ ರಾಘವೇಂದ್ರ ತಮ್ಮ ಮೊದಲನೆಯ ನಿರ್ದೇಶನದ ಸಡಗರದಕ್ಕೆ ಗೆಳೆಯ ರೀಷಬ್ ಶೆಟ್ಟಿ ಸಾಥ್ ನೀಡಿದ್ದಾರೆ.WhatsApp Image 2022 06 06 at 1.25.30 AM

ಈಗಾಗಲೇ ಸುದ್ಧಿಯಾಗಿರುವ ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್ನಿನ ಕನ್ನಡ, ಮರಾಠಿ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಯ ಪ್ಯಾನ್ ಇಂಡಿಯಾ ಸಿನಿಮಾ ಬಹುತೇಕ ಚಿತ್ರೀಕರಣ ಮುಗಿಸಿದ್ದು, ಚಿತ್ರದ ಟೈಟಲ್ ಬಿಡುಗಡೆಯ ವಿಚಾರದಲ್ಲಿ ಮೊದಲಿನಿಂದಲೂ ಕುತೂಹಲ ಹುಟ್ಟಿಸಿದ್ದ ಚಿತ್ರ ತಂಡ ಕೊನೆಗೂ ನಾಯಕ ಕವೀಶ್ ಶೆಟ್ಟಿ ಹುಟ್ಟುಹಬ್ಬದ ಉಡುಗೊರೆಯಾಗಿ ಪ್ಯಾನ್ ಇಂಡಿಯಾ ಮಟ್ಟದ ಆಕರ್ಷಕ ಟೈಟಲ್ ಬಿಡುಗಡೆ ಮಾಡಿ ಚಿತ್ರದ ಬಗ್ಗೆ ಇನ್ನಷ್ಟೂ ಕುತೂಹಲ ಮೂಡಿಸಿದೆ.WhatsApp Image 2022 06 06 at 1.25.31 AM 2

‘ಆಫ್ಟರ್ ಆಪರೇಷನ್ ಲಂಡನ್ ಕೆಫೆ’ ಟೈಟಲ್ನಲ್ಲಿಯೇ ಇದೊಂದು ದೊಡ್ಡ ಮಟ್ಟದ ಆಕ್ಷನ್ ಪ್ಯಾಕೇಜ್ ಸಿನಿಮಾ ಎನ್ನುವುದನ್ನು ರುಜು ಮಾಡಿದೆ. ಹಾಲಿವುಡ್ ಶೈಲಿಯ ಪೋಸ್ಟರ್ನಲ್ಲಿರುವ ನಾಯಕ ಕವೀಶ್ ಶೆಟ್ಟಿ ಖದರ್ರು ಅದಕ್ಕೆ ಪುಷ್ಟಿ ನೀಡಿದೆ.WhatsApp Image 2022 06 06 at 1.25.30 AM 1

ನುರಿತ ತಾಂತ್ರಿಕ ವರ್ಗ ಹಾಗೂ ಕನ್ನಡ, ಮರಾಠಿ ಮತ್ತು ಬಹುಭಾಷಾ ಕಲಾವಿದರನ್ನು ಹೊಂದಿರುವ ಲಂಡನ್ ಕೆಫೆಯ ಗುಟ್ಟು ಬಿಟ್ಟು ಕೊಡದ ನಿರ್ದೇಶಕ ಸಡಗರ ರಾಘವೇಂದ್ರ ಹೆಸರಿಗೆ ತಕ್ಕಂತೆ ಚಿತ್ರ ಪ್ರೇಕ್ಷಕರ ನಿರೀಕ್ಷೆಯನ್ನು ನಿರಾಸೆಗೊಳಿಸುವುದಿಲ್ಲ ಎನ್ನುತ್ತಾ ಚಿತ್ರದ ಟೈಟಲ್ ಬಿಡುಗಡೆಗೆ ಸಹಕರಿಸಿದ ಗೆಳೆಯ ರೀಷಬ್ ಶೆಟ್ಟಿಗೆ ಈ ಮೂಲಕ ಕೃತಜ್ಞತೆಯನ್ನು ಸೂಚಿಸಿದ್ದಾರೆ.WhatsApp Image 2022 06 06 at 1.25.29 AM

ಉಡುಪಿಯ ವಿಜಯ್ ಕುಮಾರ್ ಶೆಟ್ಟಿ ಹವರಾಲ್, ರಮೇಶ್ ಕೊಠಾರಿ ಮತ್ತು ಮರಾಠಿಯ ಹೆಸರಾಂತ ಡ್ರೀಮರ್ಸ್ ಪ್ರೊಡಕ್ಷನ್ ದೀಪಕ್ ರಾಣೆ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು. ಚಿತ್ರದ ಬಗ್ಗೆ ಹೆಚ್ಚಿನ ನಿರೀಕ್ಷೆಯನ್ನು ಹೊಂದಿದ್ದಾರೆ. ಕನ್ನಡದ ಮತ್ತೊಂದು ಚಿತ್ರ ಕರ್ನಾಟಕದ ಗಡಿ ಭಾಷೆಯನ್ನು ಮೀರಿ ಯಶಸ್ಸಿನ ಹಾದಿಯಲ್ಲಿ ಸಾಗಲಿ!

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…