ವ್ಯೋಮಕಾಯ ಸಿದ್ದ ಶ್ರೀ “ಅಲ್ಲಮಪ್ರಭು” ಚಿತ್ರದ ಟ್ರೇಲರ್ ಬಿಡುಗಡೆ.

ಹನ್ನೆರಡನೆಯ ಶತಮಾನದ ಮಹಾಶರಣ ಶ್ರೀ ಅಲ್ಲಮಪ್ರಭು ಅವರ ಜೀವನಾಧಾರಿತ ವ್ಯೋಮಕಾಯ ಸಿದ್ದ “ಶ್ರೀ ಅಲ್ಲಮಪ್ರಭು” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಶ್ರೀರಾಮಸೇನೆ ಮುಖ್ಯಸ್ಥರಾದ ಪ್ರಮೋದ್ ಮುತಾಲಿಕ್, ನಟ ನೆನಪರಲಿ ಪ್ರೇಮ್ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.WhatsApp Image 2022 06 01 at 8.55.17 AM 1

ನನಗೂ ಚಿತ್ರರಂಗಕ್ಕೂ ಸಂಬಂಧವಿಲ್ಲ. ನನ್ನ ಕ್ಷೇತ್ರವೇ ಬೇರೆ. ಆದರೂ ನನ್ನನ್ನು ಏಕೆ ಕರೆದರೂ ಎಂದು ಯೋಚಿಸುತ್ತಿದೆ? ಅವರು ನನ್ನ ಮೇಲಿಟ್ಟಿರುವ ಪ್ರೀತಿ ಅಪಾರ. ಹಾಗಾಗಿ ಬಂದಿದ್ದೀನಿ. ಕಮರ್ಷಿಯಲ್ ಚಿತ್ರಗಳ ಪೈಪೋಟಿ ಇರುವ ಈ ಸಮಯದಲ್ಲಿ ಇಂತಹ ಕಥೆ ಆಯ್ದುಕೊಂಡಿರುವ ನಿರ್ಮಾಪಕರಿಗೆ ಮೊದಲು ಧನ್ಯವಾದ ತಿಳಿಸಬೇಕು. ವೀರಭೂಮಿ, ಧರ್ಮಭೂಮಿ, ಪುಣ್ಯಭೂಮಿ ಅಂತ ಬೇರೆ ಯಾವ ದೇಶಕ್ಕೂ ಹೆಸರಿಲ್ಲ.‌ ಆ ಎಲ್ಲಾ ಹೆಸರುಗಳಿರುವುದು ನಮ್ಮ ಭಾರತಕ್ಕೆ ಮಾತ್ರ. ಭಾರತಕ್ಕೆ ಈ ರೀತಿಯ ಹೆಸರು ಬರಲು ಸಾಕಷ್ಟು ಜನ ಸಾಧು-ಸಂತರು ಇಲ್ಲಿ ಅವತರಿಸುವುದೇ ಕಾರಣ. ಅಂತಹ ಮಹಾಪುರುಷರಾದ ಶ್ರೀಅಲ್ಲಮಪ್ರಭುಗಳ ಕುರಿತಾದ ಈ ಚಿತ್ರಕ್ಕೆ ಶುಭವಾಗಲಿ ಎಂದು ಪ್ರಮೋದ್ ಮುತಾಲಿಕ್ ಹಾರೈಸಿದರು.WhatsApp Image 2022 06 01 at 8.55.16 AM 1

ನಮ್ಮದು ಪುಣ್ಯಭೂಮಿ. ಹಿಂದೆ ಎಷ್ಟೋ ಜನ ನಮ್ಮ ದೇಶದ ಸಂಪತ್ತು ಲೂಟಿ ಹೊಡೆದರೂ, ಇನ್ನೂ ನಮ್ಮಲ್ಲಿ ಸಂಪತ್ತು ಇದೆ ಅಂದರೆ ಅದಕ್ಕೆ ಈ ಸಾಧು-ಸಂತರ ಆಶೀರ್ವಾದವೇ ಕಾರಣ. ಮಹಾಶರಣ ಅಲ್ಲಮಪ್ರಭುಗಳ ಕುರಿತಾದ ಈ ಚಿತ್ರಕ್ಕೆ ಒಳಿತಾಗಲಿ ಎಂದರು ನಟ ನೆನಪಿರಲಿ ಪ್ರೇಮ್.WhatsApp Image 2022 06 01 at 8.55.16 AM

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಅವರು ಚಿತ್ರಕ್ಕೆ ಶುಭ ಕೋರಿದರು. ಅಲ್ಲಮಪ್ರಭುಗಳು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ಬಳಿಗಾವಿಯಲ್ಲಿ. ಆದರೆ ಅವರ ಕಾರ್ಯಕ್ಷೇತ್ರ ಬಾಗಲಕೋಟೆ ಬಳಿಯ ತೇರಾದಾಳ. ಚಾಮರಸ ಕವಿ ಬರೆದಿರುವ ಪ್ರಭುಲಿಂಗ ಲೀಲೆ ಆದರಿಸಿ ಈ ಚಿತ್ರ ಮಾಡಿದ್ದೀವಿ. ಹನ್ನೆರಡನೇ ಶತಮಾನದಲ್ಲಿ ಅಲ್ಲಮಪ್ರಭುಗಳು ಮಾಡಿದ ಸಾಧನೆಗಳು ಅನಂತ. ಅನುಭವ ಮಂಟಪದ ಮೊದಲ ಆಧ್ಯಕ್ಷರು ಅವರು. ಅಂತಹ ಮಹಾಶರಣರ ಬಗ್ಗೆ ಸಿನಿಮಾ ಮಾಡಿರುವುದು ನಮ್ಮ ಪುಣ್ಯ ಎಂದು ತಿಳಿಸಿದ ನಿರ್ಮಾಪಕ ಮಾಧವಾನಂದ ಅವರು, ಮಹಾವೀರ ಪ್ರಭು ಅವರು ನಿರ್ಮಾಣಕ್ಕೆ ನನಗೆ ಜೊತೆಯಾಗಿದ್ದಾರೆ ಎಂದರು.WhatsApp Image 2022 06 01 at 8.55.17 AM

ನಾನು ಸುಮಾರು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಹಾಯಕ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ನಿರ್ದೇಶಕನಾಗಿ ಇದು ಮೊದಲ ಚಿತ್ರ. ಹನ್ನೆರಡನೆಯ ಶತಮಾನದ ಕಾಲಘಟ್ಟದಲ್ಲಿ ನಡೆಯುವ ಕಥೆಯನ್ನು ತೆರೆಗೆ ತರುವುದು ಅಷ್ಟು ಸುಲಭವಲ್ಲ. ಆ ಪ್ರಯತ್ನ ಮಾಡಿದ್ದೇವೆ. ತೇರದಾಳ, ಬನವಾಸಿ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಸಿದ್ದೇವೆ ಎನ್ನುತ್ತಾರೆ ನಿರ್ದೇಶಕ ಶರಣ್ ಗದ್ವಾಲ್. ಸಂಕಲನಕಾರ‌ ಕೆಂಪರಾಜ್, ಛಾಯಾಗ್ರಾಹಕ ಗಿರಿ ಅವರು ಈ ಚಿತ್ರದ ಕುರಿತು ಮಾತನಾಡಿದರು. ಸಚಿನ್ ಸುವರ್ಣ, ನೀನಾಸಂ ಅಶ್ವಥ್, ರಮೇಶ್ ಪಂಡಿತ್, ಶೃಂಗೇರಿ ರಾಮಣ್ಣ, ಗಣೇಶ್ ರಾವ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…