ಕುತೂಹಲ ಹೊತ್ತು ತಂದ ನೈಜ ಘಟನೆ ಆಧಾರಿತ ‘ಅಂಬುಜಾ’ ಟೀಸರ್

ambuja kannada movie teaser released

ಶುಭಾ ಪೂಂಜಾ, ಅಮೃತವರ್ಷಿಣಿ ಧಾರಾವಾಹಿ ಖ್ಯಾತಿಯ ರಜಿನಿ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ‘ಅಂಬುಜಾ’ ಸಿನಿಮಾ ಟೀಸರ್ ಹಾಗೂ ಲಿರಿಕಲ್ ವೀಡಿಯೋ ಬಿಡುಗಡೆಯಾಗಿ ಎಲ್ಲರ ಗಮನ ಸೆಳೆಯುತ್ತಿದೆ. ನೈಜ ಘಟನೆ ಆಧಾರಿತ ಈ ಚಿತ್ರದ ಟೀಸರ್ ಕುತೂಹಲವನ್ನು ಹುಟ್ಟು ಹಾಕಿದ್ದು, ಪ್ರೇಕ್ಷಕರಲ್ಲಿ ನಿರೀಕ್ಷೆಯನ್ನು ಹೆಚ್ಚಿಸಿದೆ.ambuja kannada movie

ಕ್ರೈಂ ಥ್ರಿಲ್ಲರ್ ಹಾರಾರ್ ಕಥಾಹಂದರ ಒಳಗೊಂಡ ಈ ಚಿತ್ರವನ್ನು ಕಾಶಿನಾಥ್ ಡಿ ಮಡಿವಾಳರ್ ನಿರ್ಮಾಣ ಮಾಡಿದ್ದು, ಮೊದಲ ಬಾರಿ ಸಿನಿಮಾ ನಿರ್ಮಾಣ ಸಾಹಸಕ್ಕೆ ಕೈ ಹಾಕಿರುವ ಇವರು ಚಿತ್ರಕ್ಕೆ ಕಥೆ, ಸಾಹಿತ್ಯ ಕೂಡ ಬರೆದಿದ್ದಾರೆ. ಶ್ರೀನಿ ಹನುಮಂತರಾಜು ಚಿತ್ರವನ್ನು ನಿರ್ದೇಶಿಸಿದ್ದು, ಕೆಲವು ದಿನಗಳ ನಂತರ ಸಿನಿಮಾ ಮಾಡಿದ್ದ ಇವರಿಗೆ ಇದು ಎರಡನೇ ಸಿನಿಮಾ.ambuja kannada movie

ಹಾರರ್ ಥ್ರಿಲ್ಲರ್ : ನಿರ್ದೇಶಕ ಶ್ರೀನಿ

ನಿರ್ದೇಶಕ ಶ್ರೀನಿ ಅವರ ಜೊತೆ ಈ ಹಿಂದೆ ಕೆಲವು ದಿನಗಳ ನಂತರ ಸಿನಿಮಾ ಮಾಡಿದ್ದೆ, ಇದೀಗ ಅವರ ನಿರ್ದೇಶನದಲ್ಲಿ ಕ್ರೈಂ ಥ್ರಿಲ್ಲರ್ ಹಾರಾರ್ ಸಿನಿಮಾ ಅಂಬುಜಾದಲ್ಲಿ ನಟಿಸುತ್ತಿದ್ದೇನೆ. ಚಿತ್ರದಲ್ಲಿ ಕ್ರೈಂ ರಿಪೋರ್ಟರ್ ಪಾತ್ರ ನಿರ್ವಹಿಸಿದ್ದೇನೆ. ಪಾತ್ರ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಸಿನಿಮಾ ಕೂಡ ಅಷ್ಟೇ ಚೆನ್ನಾಗಿ ಮೂಡಿ ಬಂದಿದೆ ಎಂದು ತಿಳಿಸಿದ್ರು.ambuja kannada movie

ನಟಿ ರಜನಿ ಖುಷಿ

ನಟಿ ರಜಿನಿ ಮಾತನಾಡಿ ಸಿನಿಮಾ ತುಂಬಾ ವಿಶೇಷವಾಗಿದೆ ಹಾಗೆಯೇ ನನ್ನ ಪಾತ್ರ ಕೂಡ ಅಷ್ಟೇ ವಿಶೇಷವಾಗಿದೆ. ಲಂಬಾಣಿ ವೇಷ ಭೂಷಣ ಕಣ್ಣಿಗೆ ಹಬ್ಬ.ಚಿತ್ರೀಕರಣ ಸಮಯದಲ್ಲಿ ಅವರು ನಮ್ಮನ್ನು ಸ್ವೀಕರಿಸಿದ ರೀತಿ ಎಲ್ಲವೂ ತುಂಬಾ ಖುಷಿ ಕೊಟ್ಟಿದೆ. ಲಂಬಾಣಿ ಪಾತ್ರ ಅಂದಾಗ ನನಗೆ ಬಹಳ ಖುಷಿ ಆಯ್ತು. ಮೊದಲ ದಿನ ಲಂಬಾಣಿ ವೇಷ ಹಾಕಿಕೊಂಡಾಗ ತಲೆ ಎಲ್ಲ ತುಂಬಾ ನೋವಾಗುತ್ತಿತ್ತು. ಆಮೇಲೆ ಅಡ್ಜೆಜ್ಟ್ ಆಯ್ತು. ಸಿನಿಮಾದ ಹಾಡು ಕೂಡ ತುಂಬಾ ಚೆನ್ನಾಗಿ ಮೂಡಿ ಬಂದಿದೆ ಎಂದು ತಮ್ಮ ಪಾತ್ರ ಹಾಗೂ ಹಾಡಿನ ಬಗ್ಗೆ ಸಂತಸ ಹಂಚಿಕೊಂಡ್ರು.ambuja kannada movie

ಮನೆ ಮಂದಿಯೆಲ್ಲಾ ನೋಡಬಹುದು: ಕಾಶೀನಾಥ್

ಕಥೆ ಬರೆದಾಗ ಚೆನ್ನಾಗನ್ನಿಸಿತು, ಗೊತ್ತಿಲ್ಲದ ವಿಚಾರಗಳನ್ನು ಜನರಿಗೆ ಹೇಳಬೇಕು ಎನಿಸಿತು. ಅದಾದ ಮೇಲೆ ನಿರ್ದೇಶಕ ಶ್ರೀನಿ ಅವರ ಜೊತೆ ಮಾತನಾಡಿದಾಗ ಅವರು ಕೂಡ ಕಥೆ ತುಂಬಾ ಚೆನ್ನಾಗಿದೆ ಅಂದ್ರು. ಸಿನಿಮಾ ಮಾಡೋಣ ಎಂದು ನಿರ್ಧರಿಸಿದೆ. ಸಿನಿಮಾಗೆ ಬೇಕಾದ ಪಾತ್ರಗಳು ಸಿಗುತ್ತ ಹೋಯಿತು. ಫೈನಲಿ ಒಂದೊಳ್ಳೆ ಸಿನಿಮಾ ರೆಡಿಯಾಗಿದೆ. ಪ್ರೇಕ್ಷಕರು ನೋಡಿ ಹರಸಬೇಕು. ‘ಅಂಬುಜಾ’ ಪಕ್ಕ ಕಮರ್ಶಿಯಲ್ ಸಿನಿಮಾವಾಗಿದ್ರೂ ಕೂಡ ಮನೆಮಂದಿಯೆಲ್ಲ ಕುಳಿತು ನೋಡಬಹುದು ಎಂದು ಚಿತ್ರದ ನಿರ್ಮಾಪಕ ಕಾಶಿನಾಥ್ ಡಿ ಮಡಿವಾಳರ್ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು.ambuja kannada movie

ದೊಡ್ಡ ಕಲಾವಿದರ ದಂಡು

ಶುಭಾ ಪೂಂಜಾ, ಪದ್ಮಜಾ ರಾವ್, ರಜಿನಿ, ಕಾಮಿಡಿ ಕಿಲಾಡಿ ಗೋವಿಂದೇಗೌಡ, ಕಾಮಿಡಿ ಕಿಲಾಡಿ ನಿರ್ದೇಶಕ ಶರಣಯ್ಯ, ಪ್ರಿಯಾಂಕ ಕಾಮತ್, ಸಂದೇಶ್ ಶೆಟ್ಟಿ ಅಜ್ರಿ ಸೇರಿದಂತೆ ಹಲವು ಕಲಾವಿದರು ತಾರಾಬಳಗದಲ್ಲಿದ್ದಾರೆ.ಬೆಂಗಳೂರು, ಗದಗ, ಉಡುಪಿ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ.ambuja kannada movie

ಎಸ್ ಕೆ ಸಿನಿಮಾಸ್ ಬ್ಯಾನರ್ ನಡಿ ಸಿನಿಮಾ ನಿರ್ಮಾಣವಾಗಿದ್ದು, ವಿಜಯ್ ಎಂ ಕುಮಾರ್ ಸಂಕಲನ, ಮುರಳೀಧರ್ ಎಂ ಛಾಯಾಗ್ರಹಣ, ಪ್ರಸನ್ನ ಕುಮಾರ್ ಎಂ ಎಸ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.ambuja kannada movie

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…