‘ಅನಾವರಣ’ ಸಿನಿಮಾದ ಮತ್ತೊಂದು ಹಾಡು ಬಿಡುಗಡೆ… ಅರ್ಜುನ್ ಯೋಗಿ ಹಾಗೂ ಸಾರಿಕಾ ರಾವ್ ಜೋಡಿಯ ಗಾನಬಜಾನ

Anavarana

ನಮ್ಮ ಸಿನಿಮಾ ಬ್ಯಾನರ್ ನಡಿ ಅದ್ವೈತ್ ಪ್ರಭಾಕರ್, ಆರ್.ರಾಮಚಂದ್ರ, ಸತ್ಯ ರಾಣಿ ಜಿ & ರಚನಾ ಬಿ. ಹೆಚ್ ನಿರ್ಮಾಣದ ಅನಾವರಣ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ.Anavarana KANNADA MOVIE

ಈ ಹಿಂದೆ ಬಿಡುಗಡೆಯಾಗಿದ್ದ ಏನಾಗಿದೆ ಎಂಬ ಪ್ರೇಮಗೀತೆಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿತ್ತು. ಇದೀಗ ಅನಾವರಣ ಸಿನಿಮಾದ ರೀ ದೇವರೇ ಎಂಬ ಮತ್ತೊಂದು ಗಾನಬಜಾನ ಬಿಡುಗಡೆಯಾಗಿದೆ. ಗಂಡ ಹೆಂಡತಿ ನಡುವಿನ ಮೆಲೋಡಿ ಮಸ್ತಿಗೆ ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದು, ಹರೀಶ್ ಕುಮಾರ್ ಬಿ.ಕೆ ಹಾಗೂ ಮೇಘನಾ ಕುಲಕರ್ಣಿ ಜೋಶಿ ಕಂಠ ಕುಣಿಸಿದ್ದಾರೆ. ಅರ್ಜುನ್ ಯೋಗಿ ಹಾಗೂ ಸಾರಿಕಾ ರಾವ್ ರೀ ದೇವರೇ ಹಾಡಿಗೆ ಹೆಜ್ಜೆ ಹಾಕಿದ್ದಾರೆ.Anavarana KANNADA MOVIE

ಅರ್ಜುನ್ ಯೋಗಿ, ಸಾರಿಕಾ ರಾವ್ ನಾಯಕ ಹಾಗೂ ನಾಯಕಿಯಾಗಿ ನಟಿಸಿದ್ದು, ಗೌರೀಶ್ ಅಕ್ಕಿ, ನಂದ ಗೋಪಾಲ್, ಹೊನ್ನವಳ್ಳಿ ಕೃಷ್ಣ, ರಥಸಪ್ತಮಿ ಅರವಿಂದ್, ಕಾಮಿಡಿ ಕಿಲಾಡಿ ಸೂರಜ್, ಸೂರ್ಯ, ಸಂತು, ವಾಣಿ, ರಾಜೇಶ್ವರಿ, ಕಮಲಾ, ಯುಕ್ತಾ, ಧರಣಿ ಕುಮಾರ್, ಸಿದ್ದೀ ವಿನಾಯಕ, ಗಿರೀಶ್ ಯು.ಬಿ, ಶಿವರಾಜ್, ರಂಗೋಲಿ ವಿಜಿ.. ಬೇಬಿ ದೃತಿ ಶುತ್ವ ಮತ್ತು ಅಭಿ ತಾರಾಬಳಗದಲ್ಲಿದ್ದಾರೆ. ರಂಗ ಕಲಾವಿದರು ನಿರ್ದೇಶಕರು ಆಗಿರುವ ಹರೀಶ್ ಕುಮಾರ್ ಹಾಗೂ ಮಂಜುನಾಥ್ ಪಿಳ್ಳಪ್ಪ ಇಬ್ಬರು ಅನಾವರಣ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ 40ಕ್ಕೂ ಹೆಚ್ಚು ಕಿರು ಚಿತ್ರಗಳನ್ನು ಮಾಡಿರುವ ಅನುಭವ ಈ ಇಬ್ಬರು ನಿರ್ದೇಶಕರಿಗಿದೆ.

MALAVIKA MOHANAN ಕೇರಳ ಬ್ಯೂಟಿಯ ಗ್ಲಾಮರ್ ಲುಕ್‌ಗೆ ಮನಸೋಲದವರು ಯಾರು?

Anavarana KANNADA MOVIE

ವೆಂಕಿ UDV ಸಂಕಲನ, ಡಾ.ವಿ.ನಾಗೇಂದ್ರ ಪ್ರಸಾದ್ ಮತ್ತು ಶಶಿಕುಮಾರ್ ಬೆಳಕವಾಡಿ ಸಾಹಿತ್ಯ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ, ಹಿನ್ನಲೆ ಸಂಗೀತ ಬಿ.ಆರ್.ಹೇಮಂತ್ ಕುಮಾರ್, ವಿಶಾಲ್ ಸಿ ಕೃಷ್ಣ ಸಂಗೀತ, ನಂದಕುಮಾರ್ ಛಾಯಾಗ್ರಹಣ, ಮದನ್ ಹರಿಣಿ ಮತ್ತು ರಾಮ್ಜ್ ನೃತ್ಯ ಸಂಯೋಜನೆ ಸಿನಿಮಾಕ್ಕಿದೆ. ಫ್ಯಾಮಿಲಿ ಡ್ರಾಮಾ ಜೊತೆಗೆ ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಅನಾವರಣ ಸಿನಿಮಾ ಡಿಸೆಂಬರ್ 1ಕ್ಕೆ ರಾಜ್ಯಾದ್ಯಂತ ರಿಲೀಸ್ ಆಗಲಿದ್ದು, ವಿಜಯ್ ಸಿನಿಮಾಸ್ ಬಿಡುಗಡೆ ಮಾಡಲಿದ್ದಾರೆ.Anavarana KANNADA MOVIE

ನಟ ಅರ್ಜುನ್ ಯೋಗಿ ಕಿರುತೆರೆಯಲ್ಲಂತೂ ಬಹಳಷ್ಟು ಹೆಸರು ಮಾಡಿದರು. ವರ್ಷಗಳ ಕಾಲ ಕಿರುತೆರೆಯಲ್ಲಿ ಅಭಿನಯಿಸಿ ತಮ್ಮ ನಟನೆಯ ಮೂಲಕ ಕಿರುತೆರೆ ಪ್ರಿಯರನ್ನು ರಂಜಿಸಿದ್ದಲ್ಲದೆ ಬೆಳ್ಳಿತೆರೆಯಲ್ಲೂ ಅದ್ಭುತಗಳಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿ ತಮ್ಮ ಅಭಿನಯ ಶಕ್ತಿಯನ್ನು ತೋರಿಸಿದರು. ಧಾರಾವಾಹಿ ಅಷ್ಟೇ ಅಲ್ಲದೆ ಕೆಲವು ರಿಯಾಲಿಟಿ ಶೋಗಳಲ್ಲಿಯೂ ಇವರು ಚೆನ್ನಾಗಿ ಹೆಸರು ಮಾಡಿದ್ದಾರೆ.

Athi I Love You ಗಂಡ ಹೆಂಡತಿಯ ನಡುವಿನ ನಿಮ್ಮದೇ ಜೀವನದ ಕಥೆ ಆಗಿರುತ್ತದೆ.

Anavarana KANNADA MOVIE

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…