ಅನಿರುದ್ಧ್ ಜತಕರ್ ಅಭಿನಯದ “chef ಚಿದಂಬರ” ಚಿತ್ರದ ಚಿತ್ರೀಕರಣ ಮುಕ್ತಾಯ .

Anirudh Jatkar Chef Chidambara

ಹಿರಿತೆರೆ ಹಾಗೂ ಕಿರುತೆರೆಯಲ್ಲಿ ತಮ್ಮದೇ ಆದ ಅಭಿಮಾನಿ ಬಳಗ ಹೊಂದಿರುವ ನಟ ಅನಿರುದ್ಧ್ ಜತಕರ್ ನಾಯಕರಾಗಿ ನಟಿಸಿರುವ, “ರಾಘು” ಚಿತ್ರದ ಖ್ಯಾತಿಯ ಎಂ.ಆನಂದರಾಜ್ ನಿರ್ದೇಶನದ “chef ಚಿದಂಬರ” Anirudh Jatkar Chef Chidambara ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ನೀಡಿದರು.Anirudh Jatkar

ನಮ್ಮ ಚಿತ್ರದ ಚಿತ್ರೀಕರಣ ಆಗಸ್ಟ್ 10ರಂದು ಆರಂಭವಾಗಿತ್ತು. ಅಕ್ಟೋಬರ್ 10ರಂದು ಮುಕ್ತಾಯವಾಗಿದೆ ಎಂದು ಮಾತು ಪ್ರಾರಂಭಿಸಿದ ನಿರ್ದೇಶಕ ಆನಂದರಾಜ್, ನಮ್ಮ ಚಿತ್ರಕ್ಕೆ ಒಟ್ಟು 29 ದಿನಗಳ ಕಾಲ ಬೆಂಗಳೂರು, ಮಂಗಳೂರು, ತುಮಕೂರು, ದೇವರಾಯನದುರ್ಗ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಇದೊಂದು ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಡಾರ್ಕ್ ಹ್ಯೂಮರ್ ಜಾನರ್ ನ ಚಿತ್ರ. ಅನಿರುದ್ದ್ ಅವರು ಶೆಫ್ ಪಾತ್ರದಲ್ಲಿ ಅಭಿನಯಿಸಿದ್ದಾರೆ. ನಿಧಿ ಸುಬ್ಬಯ್ಯ ಈತನಕ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರೆಚೆಲ್ ಡೇವಿಡ್ ಅವರ ಪಾತ್ರ ಕೂಡ ವಿಭಿನ್ನವಾಗಿದೆ. ಶರತ್ ಲೋಹಿತಾಶ್ವ, ಶಿವಮಣಿ, ಶ್ರೀಧರ್, ಮಾಹಂತೇಶ್ ಮುಂತಾದವರು ಚಿತ್ರದಲ್ಲಿ ನಟಿಸಿದ್ದಾರೆ.
ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಚಿತ್ರತಂಡದ ಸಹಕಾರದಿಂದ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಆರಂಭವಾಗಲಿದೆ ಎಂದು ತಿಳಿಸಿದರು.Anirudh Jatkar

ನಾನು ಯಾವತ್ತಿಗೂ ಅಡುಗೆಮನೆ ಕಡೆ ಹೋದವನಲ್ಲ. ಈ ಚಿತ್ರದಲ್ಲಿ ಮೊದಲ ಬಾರಿಗೆ ಶೆಫ್ ಪಾತ್ರ ನಿರ್ವಹಿಸಿದ್ದೇನೆ. ತರಬೇತಿ ಪಡೆದು ಈ ಪಾತ್ರ ನಿರ್ವಹಣೆ ಮಾಡಿದ್ದೇನೆ. ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರವಾದರೂ, ನಿರ್ದೇಶಕರು ಕಥೆಯನ್ನು ಹಾಸ್ಯದ ಮೂಲಕ ಹೇಳಿದ್ದಾರೆ. ಸಹ ಕಲಾವಿದರ ಅಭಿನಯ ಹಾಗೂ ತಂತ್ರಜ್ಞರ ಕಾರ್ಯವೈಖರಿ ಚೆನ್ನಾಗಿದೆ ಎಂದರು ನಾಯಕ ಅನಿರುದ್ಧ್ ಜತಕರ್.

Christopher Nolan Hollywood Best Directors

ನಾನು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಈ ಪಾತ್ರ ಎಲ್ಲರಿಗೂ ಮೆಚ್ಚುಗೆಯಾಗಲಿದೆ ಎನ್ನುತ್ತಾರೆ ನಾಯಕಿ ನಿಧಿ ಸುಬ್ಬಯ್ಯ. ಅನು ಎಂಬುದು ನನ್ನ ಪಾತ್ರದ ಹೆಸರು. ನನ್ನ ಪಾತ್ರ ಹಾಗೂ ಕಥೆ ಎರಡೂ ಚೆನ್ನಾಗಿದೆ ಎಂದರು ನಾಯಕಿ ರೆಚೆಲ್ ಡೇವಿಡ್.Anirudh Jatkar

ನಿರ್ಮಾಪಕಿ ರೂಪ ಡಿ.ಎನ್, ಛಾಯಾಗ್ರಾಹಕ ಉದಯ್ ಲೀಲಾ, ಚಿತ್ರದಲ್ಲಿ ‌ನಟಿಸಿರುವ ಮಹಾಂತೇಶ್, ಸೌಂಡ್ ಇಂಜಿನಿಯರ್ ಬಿ.ಆರ್ ನವೀನ್ ಕುಮಾರ್ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಬೇಸರಕ್ಕೆ ಕುತೂಹಲವೇ ಔಷಧಿ. ಕುತೂಹಲಕ್ಕೆ ಯಾವ ಔಷಧಿಯೂ ಇಲ್ಲ.

ಚಿತ್ರಕ್ಕೆ ನಿರ್ದೇಶಕರೆ ಕಥೆ ರಚಿಸಿದ್ದು, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಗಣೇಶ್ ಪರಶುರಾಮ್ ಬರೆದಿದ್ದಾರೆ. ಉದಯಲೀಲಾ ಛಾಯಾಗ್ರಹಣ, ವಿಜೇತ್ ಚಂದ್ರ ಸಂಕಲನ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ಆಶಿಕ್ ಹುಸಗುಳ್ಳಿ ಡಿ.ಐ, ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ ಅವರ ನೃತ್ಯ ನಿರ್ದೇಶನ “chef ಚಿದಂಬರ” ಚಿತ್ರಕ್ಕಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…