ನಾಯಕಿಯಾಗಿ ನಮ್ಮನೆ ಯುವರಾಣಿ ಖ್ಯಾತಿಯ ಅಂಕಿತಾ ಅಮರ್‌ ಎಂಟ್ರಿ

ankita amar new movie

ವಿಹಾನ್‌ ಚಿತ್ರಕ್ಕೆ ಪರಂವಃ ಸ್ಟುಡಿಯೋಸ್‌ ಬಂಡವಾಳ ನಾಯಕಿಯಾಗಿ ನಮ್ಮನೆ ಯುವರಾಣಿ ಖ್ಯಾತಿಯ ಅಂಕಿತಾ ಅಮರ್‌ ಎಂಟ್ರಿ

ಚಂದ್ರಜಿತ್‌ ಬೆಳ್ಳಿಯಪ್ಪ ನಿರ್ದೇಶನ ಆಗಸ್ಟ್‌ನಲ್ಲಿ ಶೀರ್ಷಿಕೆ ಘೋಷಣೆ; ಸೆಪ್ಟೆಂಬರ್‌ನಲ್ಲಿ ಶೂಟಿಂಗ್‌ ಶುರು

“ಕಾಲ್‌ ಕೆಜಿ ಪ್ರೀತಿ”, “ಪಂಚತಂತ್ರ” ಸಿನಿಮಾಗಳ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಗುರುತಿಸಿಕೊಂಡಿರುವ ನಟ ವಿಹಾನ್‌ ಮತ್ತೆ ಬೆಳ್ಳಿತೆರೆಮೇಲೆ ಮಿಂಚಲು ಬರುತ್ತಿದ್ದಾರೆ. ವಿಶೇಷ ಏನೆಂದರೆ, ಈ ಸಲ ವಿಹಾನ್‌ಗೆ ರಕ್ಷಿತ್‌ ಶೆಟ್ಟಿ ಸಾಥ್‌ ನೀಡುತ್ತಿದ್ದಾರೆ. ಅಂದರೆ, ರಕ್ಷಿತ್‌ ಶೆಟ್ಟಿ ಹೋಮ್‌ ಬ್ಯಾನರ್‌ “ಪರಂವಃ‌ ಸ್ಟುಡಿಯೋಸ್‌” ಬ್ಯಾನರ್‌ನಲ್ಲಿ ಮೂಡಿಬರುವ ಚಿತ್ರದಲ್ಲಿ ವಿಹಾನ್‌ ಹೀರೋ!ankita amar new movie

ಕಳೆದ ಮೂರು ವರ್ಷಗಳ ಹಿಂದೆ ಯೋಗರಾಜ್‌ ಭಟ್‌ ನಿರ್ದೇಶನದಲ್ಲಿನ “ಪಂಚತಂತ್ರ” ಸಿನಿಮಾದಲ್ಲಿ ನಟಿಸಿದ ಬಳಿಕ ಬೇರೆ ಸಿನಿಮಾಗಳತ್ತ ಮುಖ ಮಾಡಿರಲಿಲ್ಲ. ಇದೀಗ ವಿಶೇಷ ಕಥೆಯೊಂದಿಗೆ ಅವರ ಆಗಮನವಾಗುತ್ತಿದೆ. ರೊಮ್ಯಾನ್ಸ್‌ ಡ್ರಾಮಾ ಶೈಲಿಯ ಈ ಚಿತ್ರದ ಪ್ರೀ ಪ್ರೊಡಕ್ಷನ್‌ ಕೆಲಸಗಳೂ ಈಗಾಗಲೇ ಶುರುವಾಗಿವೆ.ankita amar new movie

ಚಿತ್ರದಲ್ಲಿ ನಾಯಕನಿಗೆ ಮೂರು ಹಂತಗಳಿರಲಿವೆ. ಕಾಲೇಜ್‌ ವಿದ್ಯಾರ್ಥಿ, ಕ್ರಿಕೆಟ್‌ ಆಟಗಾರ ಹಾಗೂ ಬಿಜಿನೆಸ್‌ ಮ್ಯಾನ್‌ ಆಗಿಯೂ ವಿಹಾನ್‌ ಕಾಣಿಸಿಕೊಳ್ಳಲಿದ್ದಾರೆ. ಇದೆಲ್ಲದಕ್ಕೂ ಸೂಟ್‌ ಆಗಲಿದ್ದಾರೆ ಎಂಬ ಕಾರಣಕ್ಕೆ ಚಿತ್ರತಂಡ ವಿಹಾನ್‌ರನ್ನು ಆಯ್ಕೆ ಮಾಡಿದ್ದಾರೆ.ankita amar new movie

ಹಾಗಾದರೆ ಈ ಚಿತ್ರದ ನಿರ್ದೇಶಕರು ಯಾರು? ಅದಕ್ಕೂ ಇಲ್ಲಿ ಉತ್ತರವಿದೆ. ರಕ್ಷಿತ್‌ ಅವರ ಸೆವೆನ್‌ ಆಡ್ಸ್‌ ಟೀಮ್‌ನಲ್ಲಿ ಬರಹಗಾರರಾಗಿ ಗುರುತಿಸಿಕೊಂಡಿರುವ ಚಂದ್ರಜೀತ್‌ ಬೆಳ್ಳಿಯಪ್ಪ, ಇನ್ನೂ ಶೀರ್ಷಿಕೆ ಅಂತಿಮವಾಗದ ಈ ಚಿತ್ರಕ್ಕೆ ನಿರ್ದೇಶನ ಮಾಡಲಿದ್ದಾರೆ. ಈ ಮೊದಲು ರಿಷಬ್‌ ಶೆಟ್ಟಿ ಅವರ ಕಥಾಸಂಗಮ ಸಿನಿಮಾದಲ್ಲಿನ “ರೇನ್‌ಬೋ ಲ್ಯಾಂಡ್‌” ಏಪಿಸೋಡ್‌ ಅನ್ನು ಚಂದ್ರಜಿತ್‌ ನಿರ್ದೇಶನ ಮಾಡಿದ್ದರು. ಅದಕ್ಕೂ ಮೊದಲು “ಅವನೇ ಶ್ರೀಮನ್ನಾರಾಯಣ” ಚಿತ್ರದ ಬರವಣಿಗೆಯ ಭಾಗವಾಗಿದ್ದರು.ankita amar new movie

ಈ ಚಿತ್ರಕ್ಕೆ ನಾಯಕಿಯಾಗಿ ನಮ್ಮನ್ನೆ ಯುವರಾಣಿ ಧಾರಾವಾಹಿ ಮೂಲಕ ಎಲ್ಲರ ಗಮನ ಸೆಳೆದ ಅಂಕಿತಾ ಮರ್‌ ನಟಿಸಲಿದ್ದಾರೆ. ಇತ್ತೀಚೆಗಷ್ಟೇ ಪರಮ್‌ವಾ ಸ್ಟುಡಿಯೋಸ್‌ ತನ್ನ ಅಧಿಕೃತ ಸೋಷಿಯಲ್‌ ಮೀಡಿಯಾ ಹ್ಯಾಂಡಲ್‌ನಲ್ಲಿ ಅವರ ಜನ್ಮದಿನಕ್ಕೆ ಪೋಸ್ಟ್‌ ಹಾಕಿ ಸುಳಿವು ನೀಡಿತ್ತು. ಇದೀಗ ಅವರೇ ನಮ್ಮ ನಾಯಕಿ ಎಂದು ತಂಡ ಅಧಿಕೃತವಾಗಿ ಘೋಷಿಸಿದೆ.ankita amar new movie

ಹಾಗಾದರೆ ಏನಿದು ಸಿನಿಮಾ? ಸದ್ಯ ಚಿತ್ರೀಕರಣ ಪೂರ್ವ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ತಂಡ, ಆಗಸ್ಟ್‌ ವೇಳೆಗೆ ಚಿತ್ರದ ಶೀರ್ಷಿಕೆ ಘೋಷಣೆ ಮಾಡಿಕೊಳ್ಳುವ ಮೂಲಕ ಸಿನಿಮಾ ಕೆಲಸಗಳಿಗೆ ಚಾಲನೆ ನೀಡಲಿದೆ. ಅದಾದ ಬಳಿಕ ಸೆಪ್ಟೆಂಬರ್‌ನಲ್ಲಿ ಚಿತ್ರದ ಶೂಟಿಂಗ್‌ ಶುರುಮಾಡುವುದು ತಂಡದ ಪ್ಲಾನ್.ankita amar new movie

ರೊಮ್ಯಾನ್ಸ್‌ ಡ್ರಾಮಾ ಮತ್ತು ಮ್ಯೂಸಿಕಲ್‌ ಲವ್‌ಸ್ಟೋರಿ ಹಿನ್ನಲೆಯ ಈ ಸಿನಿಮಾದಲ್ಲಿ ಕಾಲೇಜು ಜೀವನವೂ ಕಾಣಿಸಲಿದೆ. ತಾಂತ್ರಿಕ ವರ್ಗದ ವಿಚಾರಕ್ಕೆ ಬಂದರೆ, ಅಮೆರಿಕಾದ ನ್ಯೂಯಾರ್ಕ್‌ ಫಿಲಂ ಅಕಾಡೆಮಿಯಲ್ಲಿ ಪದವಿ ಪಡೆದು, ಅಲ್ಲಿಯೇ ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿರುವ ಶ್ರೀವಾತ್ಸವನ್‌ ಸೆಲ್ವರಾಜನ್‌ ಈ ಸಿನಿಮಾಕ್ಕೆ ಕ್ಯಾಮರಾ ಹಿಡಿಯಲಿದ್ದಾರೆ. ಇದು ಅವರ ಚೊಚ್ಚಲ ಚಿತ್ರವಾಗಿರಲಿದೆ. ಗಗನ್‌ ಬದೇರಿಯಾ ಸಂಗೀತ ಸಂಯೋಜಿಸಲಿದ್ದಾರೆ.ankita amar new movie

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…