ಅಭಿಮಾನಿಗಳೊಂದಿಗೆ ಹುಟ್ಟು ಹಬ್ಬ ಆಚರಿಸಿಕೊಂಡ ಅನೂಪ್ ರೇವಣ್ಣ – ‘ಹೈಡ್ ಅಂಡ್ ಸೀಕ್’ ಪೋಸ್ಟರ್ ಲಾಂಚ್

Anoop Revanna celebrated his birthday with his fans - 'Hide and Seek' poster launch

ಲಕ್ಷ್ಮಣ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಭರವಸೆ ಮೂಡಿಸಿರುವ ಯುವನಟ ಅನೂಪ್ ರೇವಣ್ಣ. ‘ಹೈಡ್ ಅಂಡ್ ಸೀಕ್’ ಸಿನಿಮಾ ಮೂಲಕ ಪ್ರೇಕ್ಷಕರೆದುರು ಬರಲು ಸಜ್ಜಾಗಿರುವ ಅನೂಪ್ ರೇವಣ್ಣ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ.Anoop Revanna celebrated his birthday with his fans - 'Hide and Seek' poster launch

ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸಿ ಅನೂಪ್ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಈ ಸಂತಸದ ದಿನದಂದೇ ಹೈಡ್ ಅಂಡ್ ಸೀಕ್ ಚಿತ್ರತಂಡ ಸಿನಿಮಾದ ಪೋಸ್ಟರ್ ಲಾಂಚ್ ಮಾಡಿ ಚಿತ್ರದ ನಾಯಕ ನಟನಿಗೆ ಶುಭಕೋರಿದೆ.Anoop Revanna celebrated his birthday with his fans - 'Hide and Seek' poster launch

ಪುನೀತ್ ನಾಗರಾಜು ನಿರ್ದೇಶನದಲ್ಲಿ ಮೂಡಿ ಬರ್ತಿರುವ ಚಿತ್ರ ಹೈಡ್ ಅಂಡ್ ಸೀಕ್. ಚಿತ್ರದಲ್ಲಿ ಅನೂಪ್ ರೇವಣ್ಣ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಾಯಕಿಯಾಗಿ ಧನ್ಯಾ ರಾಮ್ ಕುಮಾರ್ ನಟಿಸಿದ್ದಾರೆ. ಹುಟ್ಟುಹಬ್ಬದ ದಿನವೇ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ಚಿತ್ರದಲ್ಲಿ ಸ್ಪೆಶಲ್ ರೋಲ್ ನಲ್ಲಿ ಕಾಣಿಸಿಕೊಂಡಿರುವ ಬಗ್ಗೆ ಸೀಕ್ರೆಟ್ ರಿವೀಲ್ ಮಾಡಿದ್ದಾರೆ ಅನೂಪ್ ರೇವಣ್ಣ. ‘ಕಬ್ಜ’ ಹಾಗೂ ‘ಹೈಡ್ ಅಂಡ್ ಸೀಕ್’ ಎರಡೂ ಚಿತ್ರಗಳು ಸ್ಪೆಶಲ್ ಸಿನಿಮಾಗಳಾಗುತ್ತವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ ಅನೂಪ್.Anoop Revanna celebrated his birthday with his fans - 'Hide and Seek' poster launch


‘ಹೈಡ್ ಅಂಡ್ ಸೀಕ್’ ಸಿನಿಮಾ ಚಿತ್ರೀಕರಣ ಕಂಪ್ಲೀಟ್ ಆಗಿದ್ದು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದೆ. ಪುನೀತ್ ನಾಗರಾಜು, ವಸಂತ್ ರಾವ್ ಎಂ.ಕುಲ್ಕರ್ಣಿ ನಿರ್ಮಾಣದಲ್ಲಿ ಈ ಚಿತ್ರ ಮೂಡಿ ಬರ್ತಿದ್ದು, ರಿಜೋ ಪಿ ಜಾನ್ ಛಾಯಾಗ್ರಾಹಣ, ಸ್ಯಾಂಡಿ ಅದ್ದಾನ್ಕಿ ಸಂಗೀತ ನಿರ್ದೇಶನ, ಮಧು ತುಂಬಕೆರೆ ಸಂಕಲನ ‘ಹೈಡ್ ಅಂಡ್ ಸೀಕ್’ ಚಿತ್ರಕ್ಕಿದೆ.Anoop Revanna celebrated his birthday with his fans - 'Hide and Seek' poster launch

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…