’ಡೊಳ್ಳು’ ಮುಕುಟಕ್ಕೆ ಮತ್ತೊಂದು ಮನ್ನಣೆ…RRR, ಸೂರರೈ ಪೊಟ್ರು ಚಿತ್ರಗಳ ಜೊತೆ ವೇದಿಕೆ ಹಂಚಿಕೊಳ್ತಿದೆ ಪವನ್ ಒಡೆಯರ್ ಸಿನಿಮಾ..

ರಾಷ್ಟ್ರಪ್ರಶಸ್ತಿ ಗೆದ್ದ ’ಡೊಳ್ಳು’ಗೆ ಮತ್ತೊಂದು ಅಂತರಾಷ್ಟ್ರೀಯ ಮನ್ನಣೆ..ಮೆಕ್ಸಿಕೋ ಚಿತ್ರೋತ್ಸವದಲ್ಲಿ ಪವನ್ ಒಡೆಯರ್ ಚಿತ್ರ ಪ್ರದರ್ಶನ..

ಪವನ್ ಒಡೆಯರ್ ನಿರ್ಮಾಣದ ಮೊದಲ ಸಿನಿಮಾ ‘ಡೊಳ್ಳು’ ಈಗಾಗಲೇ ಪ್ರಪಂಚ ಪರ್ಯಟನೆ ಮಾಡಿ ಬಂದಿದೆ. ಪ್ರತಿಷ್ಟಿತ ಬರ್ಲಿನ್ ಅಂತಾರಾಷ್ಟ್ರೀಯ ಚಿತ್ರೋತ್ಸವ, ಅಂತಾರಾಷ್ಟ್ರೀಯ ಢಾಕಾ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿರುವ ಡೊಳ್ಳು, ಎರಡು ರಾಷ್ಟ್ರಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಇದೀಗ ಈ ಚಿತ್ರ ಮತ್ತೊಂದು ಅಂತರಾಷ್ಟ್ರೀಯ ಮನ್ನಣೆಗೆ ಭಾಜನವಾಗಿದೆ.Another recognition for 'Dollu'

ಡೊಳ್ಳು ಸಿನಿಮಾ ಮೆಕ್ಸಿಕೋದಲ್ಲಿ ನಡೆಯಲಿರುವ ಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣಲಿದೆ. ಆಸ್ಕರ್ ಗೆದ್ದಿರುವ ಎಸ್ ಎಸ್ ರಾಜಮೌಳಿಯವರ RRR, ದೀಪಿಕಾ ಪಡುಕೋಣೆ ಹಾಗೂ ರಣ್ಬೀರ್ ಸಿಂಗ್ ನಟನೆಯ ಬಾಜಿರಾವ್ ಮಸ್ತಾನಿ, ಸೂರ್ಯ ನಟನೆಯ ಸೂರರೈ ಪೊಟ್ರು, ಅಜಯ್ ದೇವಗನ್ ನಟನೆಯ ತಾನಜಿ ಚಿತ್ರಗಳ ಜೊತೆಗೆ ನಮ್ಮ ಕನ್ನಡದ ಹೆಮ್ಮೆಯ ಡೊಳ್ಳು ಸಿನಿಮಾ ಪ್ರದರ್ಶನ ಕಾಣುತ್ತಿರುವುದು ಖುಷಿ ಜೊತೆಗೆ ಹೆಮ್ಮೆಯ ವಿಷಯ.

‘ಡೊಳ್ಳು’ ಸಿನಿಮಾ ಹೆಸರೇ ಹೇಳುವಂತೆ ಡೊಳ್ಳು ಕುಣಿತದ ಸುತ್ತಮುತ್ತ ಹಾಗೂ ನಮ್ಮ ನೆಲದ ಜಾನಪದ ಸೊಗಡನ್ನು ಮುಖ್ಯವಾಗಿ ಇರಿಸಿ ಹೆಣೆದ ಕಥೆ ಇದಾಗಿದೆ. ಸಾಗರ್ ಪುರಾಣಿಕ್ ನಿರ್ದೇಶನ ಮೂಡಿಬಂದಿದ್ದ ಈ ಚಿತ್ರದಲ್ಲಿ ಕಾರ್ತಿಕ್ ಮಹೇಶ್, ನಿಧಿ ಹೆಗ್ಡೆ ಜೋಡಿಯಾಗಿ ನಟಿಸಿದ್ದಾರೆ. ಬಾಬು ಹಿರಣ್ಣಯ್ಯ, ಚಂದ್ರ ಮಯೂರ್, ಶರಣ್ಯ ಸುರೇಶ್ ಸೇರಿದಂತೆ ಹಲವು ಮಂದಿ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ.Another recognition for 'Dollu'

ಸ್ಯಾಂಡಲ್ವುಡ್ನಲ್ಲಿ ಹಲವು ಯಶಸ್ವಿ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ಪವನ್ ಒಡೆಯರ್ ತಮ್ಮದೇ ಹೋಂ ಬ್ಯಾನರ್ ಒಡೆಯರ್ ಮೂವೀಸ್ನಲ್ಲಿ ಪತ್ನಿ ಅಪೇಕ್ಷಾ ಜೊತೆಗೂಡಿ ಡೊಳ್ಳು ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.

ಪ್ರತಿಭಾವಂತ ನಿರ್ದೇಶಕರಾಗಿರುವ ಪವನ್ ಒಡೆಯರ್, ಗೂಗ್ಲಿ, ರಣವಿಕ್ರಮ, ನಟ ಸಾರ್ವಭೌಮ ಸೇರಿದಂತೆ ಹಲವು ಹಿಟ್ ಸಿನಿಮಾಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ನಿರ್ದೇಶನ, ಬರವಣಿಗೆ ಜೊತೆಗೆ ಸಿನಿಮಾ ನಿರ್ಮಾಣ ಕೂಡ ಆರಂಭಿಸಿದ್ದು, ನಿರ್ಮಾಣ ಮಾಡಿದ ಮೊದಲ ಚಿತ್ರದ ಮೂಲಕವೇ ಸಂಚಲನ ಸೃಷ್ಟಿಸಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…