ಮತ್ತೆ ಕನ್ನಡಕ್ಕೆ ಬಂದ ಅನೂಪ್‌ ಚಂದ್ರಶೇಖರನ್:‌
ಓಟಿಟಿ ಫ್ಲಾಟ್‌ಫಾರ್ಮ್‌ ಮೂಲಕ ಚಿತ್ರ ನಿರ್ಮಾಣ!

anup chandrasekharan ott platform

ಕನ್ನಡ ಕಿರುತೆರೆ ಲೋಕದಲ್ಲಿ ಅದ್ಭುತವನ್ನೇ ಸೃಷ್ಟಿಸಿ ದಾಖಲೆ ನಿರ್ಮಿಸಿದ್ದ ಕಿರುತೆರೆ ತಜ್ಞ ಅನೂಪ್‌ ಚಂದ್ರಶೇಖರನ್‌ ಮತ್ತೆ ಕನ್ನಡಕ್ಕೆ ಬಂದಿದ್ದಾರೆ. ಇನ್‌ 10 ಮೀಡಿಯಾ ಎಂಬ ಅಂತಾರಾಷ್ಟ್ರೀಯ ಓಟಿಟಿ ಮತ್ತು ಡಿಜಿಟಲ್‌ ಮಾಧ್ಯಮದ ರೀಜನಲ್‌ ಕಂಟೆಂಟ್‌ ವಿಭಾಗದ ಸಿಒಒ ಆಗಿ ನೇಮಕಗೊಂಡಿದ್ದಾರೆ. ಒಂದಷ್ಟು ಕಂಟೆಂಟ್‌ ಆಧಾರಿತ ಕನ್ನಡ ಸಿನೆಮಾಗಳ ನಿರ್ಮಾಣ ಮಾಡುವ ಜವಾಬ್ದಾರಿಯನ್ನು ಅನೂಪ್‌ ಹೊತ್ತಿದ್ದಾರೆ. ಇಡೀ ದಕ್ಷಿಣ ಭಾರತದ ಮಾರುಕಟ್ಟೆಯ ಸಂಪೂರ್ಣ ಉಸ್ತುವಾರಿ ವಹಿಸಿಕೊಂಡಿರುವ ಅವರು, ಇನ್‌10 ಮೀಡಿಯಾದ ಮ್ಯಾನೇಜಿಂಗ್‌ ಡೈರೆಕ್ಟರ್‌ ಆದಿತ್ಯ ಪೆಟ್ಟಿ ಅವರಿಗೆ ರಿಪೋರ್ಟ್‌ ಮಾಡಿಕೊಳ್ಳಲಿದ್ದಾರೆ.anup chandrasekharan ott platform

ಅನೂಪ್‌ ಚಂದ್ರಶೇಖರನ್‌ ಒಂದು ಕಾಲದಲ್ಲಿ ಕನ್ನಡ ಕಿರುತೆರೆಯಲ್ಲಿ ಇತಿಹಾಸ ಸೃಷ್ಟಿ ಮಾಡಿದವರು. ಮೂರು ದಶಕಗಳ ಕಾಲ ಮನರಂಜನಾ ಮಾಧ್ಯಮದಲ್ಲಿ ಅನುಭವ ಹೊಂದಿರುವ ಇವರು, ಇದಕ್ಕೂ ಮೊದಲು ಕಲರ್ಸ್‌ ತಮಿಳು ಚಾನೆಲ್‌ ನ ಬಿಜಿನೆಸ್‌ ಹೆಡ್‌ ಆಗಿ ಕಾರ್ಯನಿರ್ವಹಿಸಿದ್ದರು. ಜೊತೆಗೆ ಕನ್ನಡದ ಹಲವು ಜನಪ್ರಿಯ ಕಾರ್ಯಕ್ರಮಗಳನ್ನು ನೀಡಿರುವ, ಒಂದು ಕಾಲದಲ್ಲಿ ಟ್ರೆಂಡ್‌ ಸೃಷ್ಟಿ ಮಾಡಿದ್ದ ಸ್ಟಾರ್‌ ಸುವರ್ಣ, ಜೀ ಕನ್ನಡದಲ್ಲಿ ಇವರು ಮುಖ್ಯಸ್ಥರಾಗಿ ಕೆಲಸ ಮಾಡಿದ್ದರು. ಪ್ಯಾಟೆ ಹುಡ್ಗೀರ್‌ ಹಳ್ಳಿ ಲೈಫು, ಕನ್ನಡದ ಕೋಟ್ಯಧಿಪತಿ ಮೊದಲಾದ ಅತೀ ಜನಪ್ರಿಯ ರಿಯಾಲಿಟಿ ಶೋಗಳನ್ನು ಕನ್ನಡಕ್ಕೆ ಪರಿಚಯಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.

ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ಅವರನ್ನು ಕಿರುತೆರೆಗೆ ಕರೆತಂದ ಕ್ರೆಡಿಟ್‌ ಇವರಿಗೇ ಸಲ್ಲುತ್ತದೆ. ಇವರು ಮುಖ್ಯಸ್ಥರಾಗಿದ್ದಾಗ ಸುವರ್ಣ ವಾಹಿನಿ ನಂಬರ್‌ ಒನ್‌ ಸ್ಥಾನಕ್ಕೆ ಬಂದು ದಾಖಲೆ ನಿರ್ಮಿಸಿತ್ತು. ಶ್ರೀಲಂಕಾ ಮೂಲದ ವಾಹಿಯಿಯೊಂದನ್ನ ಲಾಂಚ್‌ ಮಾಡಿರುವ ಅನೂಪ್‌, ಕನ್ನಡದಲ್ಲಿ ಹೊಸ ಹೊಸ ಕಥೆ ಆಧಾರಿತ ವೆಬ್‌ ಸೀರೀಸ್‌ ಮತ್ತು ಚಲನಚಿತ್ರಗಳನ್ನು ನಿರ್ಮಾಣ ಮಾಡುವ ಯೋಜನೆ ಹೊಂದಿದ್ದಾರೆ.

ಈಗಾಗಲೇ ತಮಿಳಿನಲ್ಲಿ ಎರಡು ಸಿನೆಮಾಗಳನ್ನು ಕೈಗೆತ್ತಿಕೊಂಡಿದ್ದು ಕನ್ನಡಕ್ಕೆ ಇವರು ಮತ್ತೆ ವಾಪಾಸಾಗಿರುವುದು ಇಡೀ ಚಿತ್ರೋದ್ಯಮಕ್ಕೆ ನವೋಲ್ಲಾಸ ತಂದಿದೆ. ಕನ್ನಡ ಚಿತ್ರೋದ್ಯಮದಲ್ಲಿಯೂ ಇವರು ಸಕ್ರಿಯವಾಗಿ ತೊಡಗಿಸಿಕೊಳ್ಳಲು ಮುಂದಾಗಿರುವುದು ಮತ್ತಷ್ಟು ದಾಖಲೆ ನಿರ್ಮಾಣಕ್ಕೆ ನಾಂದಿ ಹಾಡುವ ಲಕ್ಷಣಗಳು ಕಾಣುತ್ತಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…