ಕಿಚ್ಚನ ಹುಟ್ಟುಹಬ್ಬಕ್ಕೆ ಅರಸು ಕ್ರಿಯೇಷನ್ಸ್ ಉಡುಗೊರೆ..ಆಕಾಶದ ನಕ್ಷತ್ರಕ್ಕೆ ಸುದೀಪ್ ಹೆಸರು ನಾಮಕರಣ

Arasu Creations gift for Kich's birthday.. Sudeep named the star of the sky

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸೆಪ್ಟಂಬರ್ 2ರಂದು 50ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಕಿಚ್ಚೋತ್ಸವ ಈಗಾಗಲೇ ಫ್ಯಾನ್ಸ್ ಸಜ್ಜಾಗಿದ್ದಾರೆ. ಈ ಬಾರಿ ನಂದಿ ಲಿಂಕ್ಸ್ ಗ್ರೌಂಡ್ ನಲ್ಲಿ ಅಭಿಮಾನಿಗಳೊಟ್ಟಿಗೆ ತಮ್ಮ ದಿನವನ್ನು ಸಂಭ್ರಮಿಸಲಿದ್ದಾರೆ. ಕಿಚ್ಚನ ಜನ್ಮದ ಅಂಗವಾಗಿ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಾಗಿದೆ. ನೆಚ್ಚಿನ ಸ್ಟಾರ್ಸ್ ಹುಟ್ಟುಹಬ್ಬಕ್ಕೆ ಕಿಚ್ಚನ ಗುಣಗಾನ ಮಾಡುವ ಸ್ಪೆಷಲ್ ಹಾಡುಗಳು ಯೂಟ್ಯೂಬ್ ಅಂಗಳ ಪ್ರವೇಶಿಸಿವೆ. ಅದರ ಹೊರತಾಗಿ ಅರಸು ಕ್ರಿಯೇಷನ್ಸ್ ಸುದೀಪ್ 50ನೇ ಜನ್ಮೋತ್ಸವಕ್ಕೆ ವಿಶೇಷ ಉಡುಗೊರೆ ನೀಡಿದೆ.Arasu Creations gift for Kich's birthday.. Sudeep named the star of the sky

ಕಳೆದ ಎರಡು ವರ್ಷಗಳಿಂದ PRO ಆಗಿ ಕನ್ನಡ ಮಾಧ್ಯಮದ ನಡುವೆ ಕೆಲಸ ಮಾಡುತ್ತಿರುವ ಹರೀಶ್ ಅರಸು ತಮ್ಮದೇ ಅರಸು ಕ್ರಿಯೇಷನ್ಸ್ ನಡಿ ಸುದೀಪ್ ಹುಟ್ಟಹಬ್ಬಕ್ಕೆ ಪ್ರೀತಿಯ ಉಡುಗೊರೆ ನೀಡಿದ್ದಾರೆ. ಆಕಾಶದ ನಕ್ಷತ್ರಕ್ಕೆ ಕಿಚ್ಚ ಸುದೀಪ್ ಎಂದು ನಾಮಕರಣ ಮಾಡಿದ್ದಾರೆ. ಈ ಜಗತ್ತಿನಲ್ಲಿರುವ ರತ್ನಗಳಲ್ಲಿ ನೀನೇ ಅತ್ಯಮೂಲ್ಯ. ಇಂದು ನಕ್ಷತ್ರ ಹುಟ್ಟಿದ ದಿನವನ್ನು ನಾವು ಆಚರಿಸುತ್ತೇವೆ. ಆದರೆ ಆಕಾಶದಲ್ಲಿ ಅಲ್ಲ ಭೂಮಿಯಲ್ಲಿ ಎಂಬ ಅರ್ಥಪೂರ್ಣ ಸಂದೇಶದ ಮೂಲಕ ಕಿಚ್ಚನಿಗೆ ಅರಸು ಕ್ರಿಯೇಷನ್ಸ್ ಮನದುಂಬಿ ಶುಭಾಶಯ ಕೋರಿದೆ.Arasu Creations gift for Kich's birthday.. Sudeep named the star of the sky

ಕಿಚ್ಚ ಸುದೀಪ್ ಬರ್ತ್ ಡೇ 46ನೇ ಸಿನಿಮಾದ ಟೈಟಲ್ ರಿವೀಲ್ ಆಗಲಿದೆ. ಮಧ್ಯರಾತ್ರಿ 12ಕ್ಕೆ ಶೀರ್ಷಿಕೆ ಘೋಷಣೆಯಾಗಲಿದೆ. ಈ ಮೊದಲು ನಂದಿ ಲಿಂಕ್ಸ್ ಗ್ರೌಂಡ್ ನಲ್ಲಿ ಮಾತ್ರ ಜನ್ಮದಿನ ಆಚರಿಸಿಕೊಳ್ತಾರೆ. ಮನೆ ಬಳಿ ಯಾವುದೇ ಸಂಭ್ರಮ ಇರುವುದಿಲ್ಲ ಎಂದಿದ್ದರು. ಈಗ ಸುದೀಪ್ ಜೆಪಿ ನಗರದಲ್ಲಿಯೂ ಕಿಚ್ಚೋತ್ಸವ ನಡೆಯಲಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…