ದೀಪಾವಳಿ ಪ್ರಯುಕ್ತ ಹೊಸ ಫೋಟೋಶೂಟ್ – ಬೆಳಕಿನ ನಡುವೆ ಕಂಗೊಳಿಸಿದ ಕೆಜಿಎಫ್ ಖ್ಯಾತಿಯ ಅರ್ಚನಾ ಜೋಯಿಸ್

archana jois kgf Photoshoot

ಬದುಕಿನ ಕತ್ತಲೆಯನ್ನು ಕಳೆದು ಬೆಳಕಿನ ಭರವಸೆ ನೀಡುವ ದೀಪಗಳ ಹಬ್ಬ ದೀಪಾವಳಿಯನ್ನು ಎಲ್ಲೆಡೆ ಸಂಭ್ರಮ ಸಡಗರದಿಂದ ಆಚರಿಸುತ್ತಿದ್ದಾರೆ. ಚಂದನವನದಲ್ಲೂ ದೀಪಾವಳಿಯ ಸಂಭ್ರಮ ಜೋರಾಗಿಯೇ ಮನೆ ಮಾಡಿದೆ. ಕೆಜಿಎಫ್ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಖ್ಯಾತಿ ಗಳಿಸಿರೋ ನಟಿ ಅರ್ಚನಾ ಜೋಯಿಸ್ ದೀಪಾವಳಿ ಸಂಭ್ರಮದಲ್ಲಿದ್ದು, ಹೊಸದೊಂದು ಫೋಟೋಶೂಟ್ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ.archana jois kgf

ದೀಪಾವಳಿ ಪ್ರಯುಕ್ತ ಕಲರ್ ಫುಲ್ ಬೆಳಕಿನ ನಡುವೆ ಅರ್ಚನಾ ಜೋಯಿಸ್ ಫೋಟೋಶೂಟ್ ಮಾಡಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದು, ಕಲರ್ ಫುಲ್ ಆಗಿ ಮಿಂಚಿರೋ ನಟಿಯನ್ನು ಕಂಡು ಎಲ್ಲರು ಮೆಚ್ಚುಗೆ ಸೂಚಿಸುತ್ತಿದ್ದಾರೆ.archana jois kgf

ಸೆಲೆಬ್ರೆಟಿ ಫೋಟೋಗ್ರಾಫರ್ ನಾಗರಾಜ್ ಸೋಮಯಾಜಿ ರೂಪಿಸಿದ್ದ ಕಾನ್ಸೆಪ್ಟ್ ನಡಿ ಫೋಟೋಗಳನ್ನು ಸೆರೆ ಹಿಡಿಯಲಾಗಿದೆ. ನಾಗರಾಜ್ ಸೋಮಯಾಜಿ ತಮ್ಮ ಫೋಕಸ್ ಫೋಟೋಗ್ರಫಿ ಸರ್ವಿಸ್ ನಡಿ ಈ ಕಲರ್ ಫುಲ್ ಫೋಟೋಗಳನ್ನು ಕ್ಲಿಕ್ಕಿಸಿದ್ದಾರೆ. ಅರ್ಚನಾ ಜೋಯಿಸ್ ಚೆಂದದ ಈ ಫೋಟೋಗಳಿಗೆ ಯೋಗಿತ ಕಾಸ್ಟ್ಯೂಮ್ ಡಿಸೈನ್, ರೇಣುಕ ಹೇರ್ ಸ್ಟೈಲ್ ಮತ್ತು ಮೇಕಪ್ ಮಾಡಿದ್ದಾರೆ.archana jois kgf

ಫೋಟೋಶೂಟ್ ಬಗ್ಗೆ ಪ್ರತಿಕ್ರಿಯೆಸಿರುವ ನಟಿ ಅರ್ಚನಾ ಜೋಯಿಸ್ ದೀಪಾವಳಿ ಪ್ರಯುಕ್ತ ಫೋಟೋಶೂಟ್ ಮಾಡಲಾಗಿದೆ. ದೀಪಾವಳಿ ಅಂದ್ರೆ ಬೆಳಕು ಅದನ್ನೇ ಥೀಮ್ ಆಗಿಸಿಕೊಂಡು ನಾಗರಾಜ್ ಸೋಮಯಾಜಿ ಫೋಟೋಶೂಟ್ ಮಾಡಿದ್ದಾರೆ ಎಂದು ತಿಳಿಸಿದ್ರು. ಹಾಗೆ ದೀಪಾವಳಿ ಸಂಭ್ರಮದ ಬಗ್ಗೆಯೂ ಅನಿಸಿಕೆ ಹಂಚಿಕೊಂಡಿದ್ದು, ಪಟಾಕಿ ಹೊಡೆಯೋ ಅಭ್ಯಾಸ ಹೊರಟು ಹೋಗಿದೆ. ದೀಪಗಳ ಮೂಲಕವೇ ದೀಪಾವಳಿ ಸೆಲೆಬ್ರೇಟ್ ಮಾಡುತ್ತಿದ್ದೇವೆ. ನನಗೆ ಈ ಬಾರಿ ದೀಪಾವಳಿ ತುಂಬಾ ಸ್ಪೆಷಲ್. ಯಾಕಂದ್ರೆ ‘ಹೊಂದಿಸಿ ಬರೆಯಿರಿ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಸಿನಿಮಾ ಪ್ರಚಾರ ಕೂಡ ಜೋರಾಗಿ ನಡೆಯುತ್ತಿದೆ ಎಂದು ತಿಳಿಸಿದ್ರು.archana jois kgf

ಕೆಜಿಎಫ್ ಸಿನಿಮಾ ನಂತರ ಸ್ಯಾಂಡಲ್ ವುಡ್ ಅಂಗಳದಲ್ಲಿ ಅರ್ಚನಾ ಜೋಯಿಸ್ ಸಖತ್ ಬ್ಯುಸಿಯಾಗಿದ್ದಾರೆ. ಇವರು ನಟಿಸಿರುವ ‘ಹೊಂದಿಸಿ ಬರೆಯಿರಿ’ ಸಿನಿಮಾ ನವೆಂಬರ್ 18ರಂದು ಬಿಡುಗಡೆಯಾಗುತ್ತಿದ್ದು, ‘ಕ್ಷೇತ್ರಪಾಲ’ ಸಿನಿಮಾ ಕೂಡ ಬಿಡುಗಡೆಯ ಸನಿಹದಲ್ಲಿದೆ.archana jois kgf

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…