ಡಿಸೆಂಬರ್ ೧ಕ್ಕೆ ತೆರೆ ಮೇಲೆ ʻಅರ್ದಂಬರ್ಧ ಪ್ರೇಮಕಥೆʼ

Ardambardha Premkatha'' hits the screens on December 1

ಜರ್ನಿಯೊಂದಿಗೆ ಜನರನ್ನು ತಲುಪುತ್ತಿದೆ ದಿವ್ಯಾ-ಅರವಿಂದ್ ಜೋಡಿ

ನಿರ್ದೇಶಕ ಅರವಿಂದ್ ಕೌಶಿಕ್ ಆರಂಭದಿಂದಲೂ ಹೊಸತನಕ್ಕೆ ಹೆಚ್ಚು ತೆರೆದುಕೊಂಡವರು. ಕನ್ನಡ ಚಿತ್ರರಂಗ ಇನ್ನೂ ಫಿಲ್ಮ್ ಬಳಸಿ ಸಿನಿಮಾ ಮಾಡುತ್ತಿದ್ದಾಗಲೇ ಡಿಜಿಟಲ್ ಫಾರ್ಮ್ಯಾಟಿನಲ್ಲಿ ಸಿನಿಮಾ ರೂಪಿಸಿದವರು. ತುಘ್ಲಕ್, ನಮ್ ಏರಿಯಾಲ್ ಒಂದಿನ, ಹುಲಿರಾಯ ಮೊದಲಾದ ಚಿತ್ರಗಳು ಅರವಿಂದ್ ಅವರ ವಿಭಿನ್ನ ಚಿಂತನೆಗೆ ಸಾಕ್ಷಿ. ಈ ಹಿಂದೆ ಅರವಿಂದ್ ಕೌಶಿಕ್ ಆಯ್ಕೆ ಮಾಡಿಕೊಂಡಿದ್ದ ಕಲಾವಿದರು, ತಂತ್ರಜ್ಞರೆಲ್ಲಾ ಇವತ್ತಿಗೆ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಹೀಗಾಗಿ ಇನ್ನೇನು ತೆರೆಗೆ ಬರಲು ಸಿದ್ದಗೊಂಡಿರುವ ಅವರ ʻಅರ್ದಂಬರ್ಧ ಪ್ರೇಮಕಥೆʼಯ ಬಗ್ಗೆ ಕೂತೂಹಲಗಳು ಗರಿಗೆದರಿಕೊಂಡಿವೆ.Ardambardha Premkatha'' hits the screens on December 1 ಈ ಚಿತ್ರದಲ್ಲಿ ಬಿಗ್ ಬಾಸ್ ಸ್ಪರ್ಧಿಗಳಾಗಿ ಹೆಚ್ಚು ಹೆಸರು ಮಾಡಿದ ನಟಿ ದಿವ್ಯಾ ಉರುಡುಗ ಮತ್ತು ಬೈಕರ್ ಅರವಿಂದ್ ಕೆ.ಪಿ. ಜೊತೆಯಾಗಿ ನಟಿಸಿದ್ದಾರೆ. ನಿಜಜೀವನದಲ್ಲೂ ಈ ಜೋಡಿ ಒಂದಾಗಲಿದೆ ಎನ್ನುವ ಗುಮಾನಿ ಇರುವುದು ಕೂಡಾ ʻಅರ್ದಂಬರ್ಧ ಪ್ರೇಮಕಥೆʼಯ ಕುರಿತಾಗಿ ಕ್ಯೂರಿಯಾಸಿಟಿ ಹೆಚ್ಚಲು ಕಾರಣವಾಗಿದೆ.Ardambardha Premkatha'' hits the screens on December 1 ಸದ್ಯಕ್ಕೆ ಅರವಿಂದ್ ಮತ್ತು ದಿವ್ಯಾ ರಾಜ್ಯವ್ಯಾಪಿ ಪ್ರವಾಸ ಕೈಗೊಂಡಿದ್ದಾರೆ. ಪ್ರತೀ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿಗಳು ಮತ್ತು ಜನ ಸಾಮಾನ್ಯರನ್ನು ಖುದ್ದು ಭೇಟಿ ಮಾಡಿ ಚಿತ್ರದ ಪ್ರಚಾರಕಾರ್ಯದಲ್ಲಿ ನಿರತರಾಗಿದ್ದಾರೆ. ಇದೇ ಡಿಸೆಂಬರ್ ೧ರಂದು ʻಅರ್ದಂಬರ್ಧ ಪ್ರೇಮಕಥೆʼ ತೆರೆಗೆ ಬರುತ್ತಿದೆ. ʻಅರ್ದಂಬರ್ಧ ಪ್ರೇಮಕಥೆʼ ಕೂಡಾ ಜರ್ನಿ ಕಥಾವಸ್ತುವನ್ನು ಹೊಂದಿದ್ದು ಈಗ ಈ ಚಿತ್ರದ ನಾಯಕ-ನಾಯಕಿ ಕೂಡಾ ಜರ್ನಿಯ ಮುಖಾಂತರ ಜನರನ್ನು ತಲುಪುವ ಪ್ರಯತ್ನ ಮಾಡುತ್ತಿದ್ದಾರೆ.Ardambardha Premkatha'' hits the screens on December 1ಬಕ್ಸಸ್ ಮೀಡಿಯಾ, ಆರ್.ಎ.ಸಿ ವಿಷುವಲ್ಸ್ ಮತ್ತು ಲೈಟ್ ಹೌಸ್ ಮೀಡಿಯಾದ ಸಹಕಾರದೊಂದಿಗೆ ಈ ಚಿತ್ರವನ್ನು ನಿರ್ಮಿಸಿದೆ. ದಿವ್ಯಾ ಮತ್ತು ಅರವಿಂದ್ ಜೊತೆಗೆ ರ‍್ಯಾಪರ್ ಅಲೋಕ್, ಶ್ರೇಯಾ ಬಾಬು, ವೆಂಕಟಶಾಸ್ತ್ರಿ, ಪ್ರದೀಪ್ ರೋಷನ್, ಸೂರಜ್ ಹೂಗಾರ್, ಸುಜಿತ್ ಶೆಟ್ಟಿ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಹಿರಿಯನಟ ದ್ವಾರಕೀಶ್ ಪುತ್ರ ಅಭಿಲಾಷ್ ವಿಶೇಷ ಪಾತ್ರದ ಮೂಲಕ ಬಹುಕಾಲದ ನಂತರ ಬಣ್ಣ ಹಚ್ಚಿದ್ದಾರೆ. ಸೂರ್ಯ ಅವರ ಛಾಯಾಗ್ರಹಣ, ಸ್ವತಃ ಅರವಿಂದ್ ಕೌಶಿಕ್ ಅವರೇ ಸಂಕಲನ ಮಾಡಿದ್ದು , ಸತೀಶ್ ಬ್ರಹ್ಮಾವರ್ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ.Ardambardha Premkatha'' hits the screens on December 1

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…