ತೆರೆಯಲ್ಲೂ ಜೋಡಿಯಾದರು ಅರವಿಂದ್-ದಿವ್ಯಾ ಉರುಡುಗ

ardha bardha prema kathe in kannada divya uruduga

-ಇದು ಆರ್ಧಂಬರ್ಧ ಪ್ರೇಮಕಥೆಯ ವಿಚಾರ-

ಬಿಗ್‌ಬಾಸ್ ಖ್ಯಾತಿಯ ಯುವಜೋಡಿ ಅರವಿಂದ್ ಕೆಪಿ ಮತ್ತು ದಿವ್ಯಾ ಉರುಡುಗ ಈಗ ತೆರೆಯಮೇಲೂ ಒಟ್ಟಿಗೇ ಕಾಣಿಸಿಕೊಳ್ಳುತ್ತಿದ್ದಾರೆ. ಅರವಿಂದ್ ಕೌಶಿಕ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಆ ಚಿತ್ರದ ಹೆಸರು ಅರ್ಧಂಬರ್ಧ ಪ್ರೇಮಕಥೆ. ಹುಲಿರಾಯ, ತುಘ್ಲಕ್, ನಮ್ ಏರಿಯಾಲ್ ಒಂದಿನ ಸಿನಿಮಾಗಳಿಂದ ಗುರುತಿಸಿಕೊಂಡ ಅರವಿಂದ್ ಕೌಶಿಕ್, ರಕ್ಷಿತ್‌ಶೆಟ್ಟಿ, ರಿಶಬ್‌ಶೆಟ್ಟಿ, ರಚಿತಾರಾಮ್, ಅನೀಶ್, ಬಾಲು ನಾಗೇಂದ್ರ
ಸೇರಿದಂತೆ ಅನೇಕ ಕಲಾವಿದರನ್ನು ಪರಿಚಯಿಸಿದ್ದರು. ಈಗ ಬೈಕ್ ರೇಸರ್ ಅರವಿಂದ್‌ರನ್ನು ನಾಯಕನಾಗಿ ಇಂಟ್ರಡ್ಯೂಸ್ ಮಾಡುತ್ತಿದ್ದಾರೆ. ಅರ್ಜುನ್ ಜನ್ಯ ಅವರು ಅರ್ದಂಬರ್ಧ ಪ್ರೇಮಕಥೆಗೆ ಚೆಂದದ ಹಾಡುಗಳನ್ನು ಮಾಡಿಕೊಟ್ಟಿದ್ದಾರೆ. ಪ್ರೀತಿ ಎನ್ನುವುದು ನಮ್ಮ ಕನಸುಗಳ ಜೊತೆಗೇ ಬೆಳೆಯುತ್ತೆ, ಆದರೆ ಅದೇ ಪ್ರೀತಿ ಸಂಬಂಧವಾಗಿ ಬದಲಾದಾಗ ಅದು ಉಳಿಯೋದು ಕಷ್ಟ.ardha bardha prema kathe in kannada

ಏಕೆಂದರೆ ಅದು ನಮ್ಮ ಸುತ್ತಲಿನ ಸಮಾಜದ ಚೌಕಟ್ಟಿನಲ್ಲಿ ಬದುಕಬೇಕಾಗಿರುತ್ತೆ, ಇಂಥ ಒಂದು ಲವ್‌ಸ್ಟೋರಿಯೇ ಅರ್ಧಂಬರ್ಧ ಪ್ರೇಮಕಥೆ. ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿದಿದ್ದು, ನಾಯಕನ ಇಂಟ್ರಡಕ್ಷನ್ ಟೀಸರ್ ದಸರಾ ಹಬ್ಬದ ಶುಭದಿನ ಬಿಡುಗಡೆಯಾಯತು.ardha bardha prema kathe in kannada

ಈ ಸಂದರ್ಭದಲ್ಲಿ ಹಿರಿಯನಟ ದ್ವಾರಕೀಶ್, ಬಿಗ್‌ಬಾಸ್ ತಂಡದ ಶುಭಾ ಪುಂಜಾ, ರಾಜೀವ್, ಅರವಿಂದ್ ಕೂಡ ಹಾಜರಿದ್ದು ಗೆಳೆಯನಿಗೆ ಶುಭ ಹಾರೈಸಿದರು. ಈ ಚಿತ್ರದಲ್ಲಿ ಹಿರಿಯ ಕಲಾವಿದ ದ್ವಾರಕೀಶ್ ಅವರ ಪುತ್ರ ಅಭಿಲಾಷ್ ದ್ವಾರಕೀಶ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ೨೫ ವರ್ಷಗಳ ನಂತರ ನಟನೆಗೆ ಹಿಂದಿರುಗಿದ್ದಾರೆ. ಬೈಕ್
ರೇಸರ್ ಆಗಿದ್ದ ಅರವಿಂದ್ ಅವರ ಗುರುಗಳು ಕೂಡ ಈ ಸಮಾರಂಭದಲ್ಲಿ ಹಾಜರಿದ್ದರು. ನಿರ್ದೇಶಕ ಅರವಿಂದ್ ಕೌಶಿಕ್ ಮಾತನಾಡಿ ಚಿತ್ರದಲ್ಲಿ ಅರವಿಂದ್ ಅವರ ಬೈಕ್ ರೇಸಿಂಗ್ ಸಾಧನೆಗಳ ಬಗ್ಗೆ ಹೇಳಿಲ್ಲ, ನಾನು ಮಾಡಿಕೊಂಡ ಕಥೆಗೆ ಒಬ್ಬ ಹೊಸ ಹೀರೋ ಬೇಕಿತ್ತು. ಆತ ಜನ ಗುರುತಿಸುವಂಥ ಹೀರೋನೂ ಆಗಿರಬೇಕು ಅಂದುಕಡಾಗ ನೆನಪಿಗೆ ಬಂದದ್ದೇ ಕೆ.ಪಿ.ಅರವಿಂದ್. ಇದೊಂದು ಅಪ್ಪಟ ಪ್ರೇಮಕಥೆಯಾಗಿದ್ದು ಶೂಟಿಂಗ್ ಮುಗಿದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಅಂತಿಮ ಹಂತದಲ್ಲಿದೆ ನವೆಂಬರ್ ವೇಳೆಗೆ ರಿಲೀಸ್ ಮಾಡೋ ಯೋಜನೆಯಿದೆ ಎಂದು ಹೇಳಿದರು.ardha bardha prema kathe in kannada

ನಂತರ ದ್ವಾರಕೀಶ್ ಮಾತನಾಡುತ್ತ ನಮ್ಮ ಕಾಲದಲ್ಲಿ ಈ ಥರದ ನೆಗೆಟಿವ್ ಟೈಟಲ್ ಇಡುತ್ತಲೇ ಇರಲಿಲ್ಲ, ಈಗ ಅರವಿಂದ್ ಅಂಥಾ ಸಾಹಸ ಮಾಡಿದ್ದಾರೆ. ನಾಯಕ ಸೌತ್ ಕೆನರಾದವನು, ಈಗ ಅಲ್ಲಿನವರೇ ಜಾಸ್ತಿ ಹೆಸರು ಮಾಡುತ್ತಿದ್ದಾರೆ. ಹಿಂದೆ ಪುಟ್ಟಣ್ಣ ಕಣಗಾಲರು ನೀಡಿದ ಒಂದು ಸಲಹೆ, ನಾನು ಹೊಸಬರನ್ನು ಹಾಕಿಕೊಂಡು ಸಿನಿಮಾ ಮಾಡುವಂತೆ ಮಾಡಿತು ಎಂದು ಹಿಂದಿನ ಘಟನೆಗಳನ್ನು ನೆನಪಿಸಿಕೊಂಡರು.
ಬಕ್ಸಸ್ ಮೀಡಿಯಾ, ಲೈಟ್‌ಹೌಸ್ ಮೀಡಿಯಾ ಮತ್ತು ಆರ್‌ಎಸಿ ವಿಷುವಲ್ಸ್ ಸೇರಿ ಅರ್ದಂಬರ್ಧ ಪ್ರೇಮ ಕಥೆ ಚಿತ್ರವನ್ನು ನಿರ್ಮಿಸಿದ್ದಾರೆ. ಸೂರ್ಯ ಅವರ ಛಾಯಾಗ್ರಹಣ, ಸಂತೋಷ್ ರಾಧಾಕೃಷ್ಣನ್ ಅವರ ಶೀರ್ಷಿಕೆ ವಿನ್ಯಾಸದ ಜೊತೆಗೆ ಗ್ರಾಫಿಕ್ಸ್ ಕೆಲಸವನ್ನೂ ನಿಭಾಯಿಸಿದ್ದಾರೆ. ರ‍್ಯಾಪರ್ ಆಲ್‌ಓಕೆ ಅಲೋಕ್, ಶ್ರೇಯಾ, ವೆಂಕಟ್‌ಶಾಸ್ತ್ರಿ, ಪ್ರದೀಪ್‌ರೋಷನ್, ಸೂರಜ್ ಹೂಗಾರ್, ಸುಜಿತ್‌ಶೆಟ್ಟಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಶಿವರಾಜ್ ಮೇಹು ಅವರ ಸಂಕಲನ, ಸತೀಶ್ ಬ್ರಹ್ಮಾವರ್ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ.ardha bardha prema kathe in kannadaardha bardha prema kathe in kannada

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…