ಮತ್ತೆ ನಿರ್ದೇಶನಕ್ಕಿಳಿದ ಅರ್ಜುನ್ ಸರ್ಜಾ…ಮಗಳ ಚಿತ್ರಕ್ಕೆ ಆಕ್ಷನ್ ಕಟ್..

ಬಹುಭಾಷಾ ನಟ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಮತ್ತೆ ನಿರ್ದೇಶನಕ್ಕಿಳಿದಿದ್ದಾರೆ. ತಮ್ಮ ಅಮೋಘ ಅಭಿನಯದ ಮೂಲಕ ಚಿತ್ರರಸಿಕರನ್ನು ರಂಜಿಸ್ತಿರುವ ಅರ್ಜುನ್ ಸರ್ಜಾ ಇದೀಗ ಮಗಳ ಸಿನಿಮಾಗೆ ಮತ್ತೆ ಆಕ್ಷನ್ ಕಟ್ ಹೇಳ್ತಿದ್ದಾರೆ.WhatsApp Image 2022 06 26 at 9.54.44 PM

ಪ್ರೇಮ ಬರಹ ಸಿನಿಮಾ ಮೂಲಕ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಐಶ್ವರ್ಯ ಸರ್ಜಾ ಅಡಿ ಇಟ್ಟಿದ್ದರು. ಈ ಸಿನಿಮಾಗೆ ಅರ್ಜುನ್ ಸರ್ಜಾ ನಿರ್ದೇಶನದ ಜೊತೆಗೆ ನಿರ್ಮಾಣ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಆದಾದ ಬಳಿಕ ಐಶ್ವರ್ಯ ಯಾವುದೇ ಸಿನಿಮಾದಲ್ಲಿ ನಟಿಸಿಲ್ಲ. ಈಗ ಮತ್ತೆ ಅರ್ಜುನ್ ಸರ್ಜಾ ಮಗಳ ಸಿನಿಮಾಗೆ ಆಕ್ಷನ್ ಕಟ್ ಹೇಳುವುದರ ಜೊತೆಗೆ ನಿರ್ಮಾಣಕ್ಕೂ ಇಳಿದಿದ್ದಾರೆ.WhatsApp Image 2022 06 26 at 9.54.45 PM 1

ಅರ್ಜುನ್ ತಮ್ಮದೇ ಶ್ರೀ ರಾಮ್ ಫಿಲ್ಮ್ಸ್ ಇಂಟರ್ನ್ಯಾಷನಲ್ ಬ್ಯಾನರ್ ನಡಿಯಲ್ಲಿ ನಿರ್ಮಿಸಲಿರುವ ೧೫ನೇ ಸಿನಿಮಾದ ಮೂಲಕ ಮಗಳು ಐಶ್ವರ್ಯ ಅರ್ಜುನ್ ಅವರನ್ನು ತೆಲುಗಿನಲ್ಲಿ ನಾಯಕ ನಟಿಯಾಗಿ ಪರಿಚಯಿಸ್ತಿದ್ದಾರೆ. ಐಶ್ವರ್ಯಾ ಅರ್ಜುನ್ ನಾಯಕಿಯಾಗಿ ನಟಿಸ್ತಿರುವ ಈ ಸಿನಿಮಾದಲ್ಲಿ ತೆಲುಗು ಚಿತ್ರರಂಗದ ಯುವ ಮತ್ತು ಭರವಸೆಯ ನಟ ವಿಶ್ವಕ್ ಸೇನ್ ನಾಯಕನಾಗಿ ಅಭಿನಯಿಸ್ತಿದ್ದಾರೆ.WhatsApp Image 2022 06 26 at 9.54.46 PM

ವಿಶ್ವಕ್ ಸೇನ್ ನಿರ್ದೇಶನ ಫಲಕ್ನುಮಾ ದಾಸ್ ಸಿನಿಮಾ ಭರ್ಜರಿ ಯಶಸ್ಸು ಸಾಧಿಸಿದ್ದು, ಸದ್ಯ ದಾಸ್ ಕಾ ಧಮ್ಕಿ ಎಂಬ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ಜೊತೆಯಲೀಗ ಹೊಸ ಚಿತ್ರವನ್ನು ವಿಶ್ವಕ್ ಸೇನ್ ಒಪ್ಪಿಕೊಂಡಿದ್ದಾರೆ. ಇನ್ನೂ ಹೆಸರಿಡದ ಈ ಚಿತ್ರದಲ್ಲಿ ವಿಲನ್ ಗೆಟಪ್ ನಲ್ಲಿ ಜಗಪತಿ ಬಾಬು ನಟಿಸಲಿದ್ದಾರೆ.WhatsApp Image 2022 06 26 at 9.54.46 PM 1

ಇದೊಂದು ರೋಡ್ ಟ್ರಿಪ್ ಸಿನಿಮಾವಾಗಿದ್ದು, ಶೀರ್ಘದಲ್ಲಿಯೇ ಶೂಟಿಂಗ್ ಶುರುವಾಗಲಿದೆ. ಬಳಿಕ ಉಳಿದ ಪಾತ್ರ ವರ್ಗವನ್ನು ಚಿತ್ರತಂಡ ಪರಿಚಯಿಸಲಿದೆ. ಇತ್ತೀಚೆಗಷ್ಟೇ ಸಿನಿಮಾದ ಮುಹೂರ್ತ ಸಮಾರಂಭ ಜರುಗಿದ್ದು, ಪವನ್ ಕಲ್ಯಾಣ್ ಚಿತ್ರಕ್ಕೆ ಕ್ಲಾಪ್ ಮಾಡಿ ಶುಭಾ ಹಾರೈಸಿದರು. ಈ ಸಂದರ್ಭದಲ್ಲಿ ನಿರ್ದೇಶಕ ರಾಘವೇಂದ್ರ ರಾವ್ ಉಪಸ್ಥಿತರಿದ್ದರು.WhatsApp Image 2022 06 26 at 9.54.46 PM 2

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…