ಪುನೀತ್ ಬಯೋಗ್ರಫಿ ‘ನೀನೇ ರಾಜಕುಮಾರ್’ 4ನೇ ಆವೃತ್ತಿ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್

Ashwini Puneeth Rajkumar Releases 4th Edition of Puneeth Biography 'Neene Rajkumar'

ಪತ್ರಕರ್ತ ಡಾ.ಶರಣು ಹುಲ್ಲೂರು ಬರೆದ ಪುನೀತ್ ರಾಜ್ ಕುಮಾರ್ ಅವರ ಬಯೋಗ್ರಫಿ ‘ನೀನೇ ರಾಜಕುಮಾರ’ ಹನ್ನೊಂದು ತಿಂಗಳಲ್ಲಿ ನಾಲ್ಕನೇ ಮರುಮುದ್ರಣ ಕಂಡಿದ್ದು, ಈ ಸಂದರ್ಭದಲ್ಲಿ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ನಾಲ್ಕನೇ ಆವೃತ್ತಿಯನ್ನು ಇಂದು ಬೆಂಗಳೂರಿನ ಪಿ.ಆರ್.ಕೆ ಕಚೇರಿಯಲ್ಲಿ ಬಿಡುಗಡೆ ಮಾಡಿದರು. ಪುಸ್ತಕದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತ ಪಡಿಸಿದರು. ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ಲೇಖಕ ಡಾ.ಶರಣು ಹುಲ್ಲೂರು, ಪ್ರಕಾಶಕ ಜಮೀಲ್ ಸಾವಣ್ಣ ಮತ್ತು ಪಿ.ಆರ್.ಕೆಯ ಸತೀಶ್ ಅವರು ಕೂಡ ಹಾಜರಿದ್ದರು.Ashwini Puneeth Rajkumar Releases 4th Edition of Puneeth Biography 'Neene Rajkumar'

15 ಮಾರ್ಚ್ 2022ರಂದು ಮೊದಲ ಬಾರಿಗೆ ಈ ಪುಸ್ತಕವನ್ನು ಕಿಚ್ಚ ಸುದೀಪ್ ಅವರು ಬಿಡುಗಡೆ ಮಾಡಿದ್ದರು. ಆನಂತರ ಈ ಪುಸ್ತಕವು ಅಮೆಜಾನ್, ಸಪ್ನಾ ಸೇರಿದಂತೆ ಹಲವು ಕಡೆ ಟಾಪ್ ಪಟ್ಟಿಯಲ್ಲಿ ದಾಖಲಾಗಿತ್ತು. ಅಲ್ಲಿಂದ ಈವರೆಗೂ ಸತತ ನಾಲ್ಕು ಮುದ್ರಣಗಳನ್ನು ಕಂಡು ಇನ್ನೂ ದಾಖಲೆ ರೀತಿಯಲ್ಲೇ ಮಾರಾಟವಾಗುತ್ತಿದೆ. ಅಲ್ಲದೇ, ಈ ಪುಸ್ತಕದೊಂದಿಗೆ ಪುನೀತ್ ಅವರ ಸಹಿ ಇರುವಂತಹ ಫೋಟೋ ಮತ್ತು ಬುಕ್ ಮಾರ್ಕ್ ಕೂಡ ಉಚಿತವಾಗಿ ಕೊಡಲಾಗುತ್ತಿದೆ.Ashwini Puneeth Rajkumar Releases 4th Edition of Puneeth Biography 'Neene Rajkumar'

ಈ ವರ್ಷದಲ್ಲಿ ಕನ್ನಡದಲ್ಲಿ ಬಂದ ಬಯೋಗ್ರಫಿಯಲ್ಲಿ ಹೆಚ್ಚು ಮಾರಾಟಕಂಡ ಪುಸ್ತಕ ಎನ್ನುವ ಹೆಗ್ಗಳಿಕೆ ‘ನೀನೇ ರಾಜಕುಮಾರ್’ ಪುಸ್ತಕದ್ದು. ಪುನೀತ್ ಅವರ ಬಾಲ್ಯದಿಂದ ಅವರ ನಿಧನದವರೆಗೂ ಅವರ ಬದುಕನ್ನು ಲೇಖಕರು ಸೊಗಸಾಗಿ ಕಟ್ಟಿಕೊಟ್ಟಿದ್ದಾರೆ. ಪುನೀತ್ ಅವರ ಸಿನಿಮಾ, ಅವರ ಸಮಾಜಸೇವೆ, ಅವರ ಜೀವನದಲ್ಲಿ ನಡೆದ ಘಟನೆಗಳು ಮತ್ತು ಪುನೀತ್ ಅವರ ಜೀವನದ ಜೊತೆಗೆ ಕನ್ನಡ ಸಿನಿಮಾ ರಂಗದ ಸಂಕ್ಷಿಪ್ತ ಚರಿತ್ರೆ ಕೂಡ ಈ ಪುಸ್ತಕದಲ್ಲಿದೆ. ಅಲ್ಲದೇ, ಅಪರೂಪದ ಫೋಟೋಗಳನ್ನು ನೋಡಬಹುದಾಗಿದೆ.Ashwini Puneeth Rajkumar Releases 4th Edition of Puneeth Biography 'Neene Rajkumar'

ಪುನೀತ್ ಅವರ ಸಾಕಷ್ಟು ಸಂದರ್ಶನಗಳನ್ನು ಮಾಡಿದ್ದ ಪತ್ರಕರ್ತ ಶರಣು ಹುಲ್ಲೂರು, ಪುನೀತ್ ಅವರ ಕುರಿತಾಗಿ ಅನೇಕ ಅಪರೂಪದ ಸಂಗತಿಗಳನ್ನು ಈ ಪುಸ್ತಕದಲ್ಲಿ ಬರೆಯುತ್ತಾ ಹೋಗಿದ್ದಾರೆ. ಖ್ಯಾತ ಪತ್ರಕರ್ತರಾದ ಮುರಳಿಧರ ಖಜಾನೆ ಅವರು ಈ ಪುಸ್ತಕಕ್ಕೆ ಮುನ್ನುಡಿ ಬರೆದಿದ್ದರೆ, ಜೋಗಿ ಅವರು ಹಿನ್ನುಡಿ ಬರೆದಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…