ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಅನಾವರಣವಾಯಿತು “ದೇವರ ಕನಸು” ಚಿತ್ರದ ಟ್ರೇಲರ್

Ashwini Puneeth Rajkumar unveils the trailer of "Devara kanasu".

ಪ್ರತಿಷ್ಠಿತ ಕಾನ್ಸ್ ಸೇರಿದಂತೆ ಮೂವತ್ತಕ್ಕೂ ಅಧಿಕ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನವಾಗಿರುವ ಈ ಮಕ್ಕಳ ಚಿತ್ರ ಜುಲೈ 21 ರಂದು ತೆರೆಗೆ.

ಸುರೇಶ್ ಲಕ್ಕೂರ್ ನಿರ್ದೇಶಿಸಿರುವ “ದೇವರ ಕನಸು” ಚಿತ್ರದ ಟ್ರೇಲರ್ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಅನಾವರಣವಾಯಿತು. ಟ್ರೇಲರ್ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ್‍ಕುಮಾರ್ ಚಿತ್ರತಂಡಕ್ಕೆ ಶುಭ ಕೋರಿದರು. ಇದೇ ಸಂದರ್ಭದಲ್ಲಿ ಚಿತ್ರದ ಮೂರು ಹಾಡುಗಳನ್ನು ಪ್ರದರ್ಶಿಸಲಾಯಿತು. ಪಿ.ಆರ್.ಕೆ ಸಂಸ್ಥೆ ಮೂಲಕ ಹಾಡುಗಳು ಬಿಡುಗಡೆಯಾಗಿದೆ. ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾಹಿತಿ ನೀಡಿದರು.Ashwini Puneeth Rajkumar unveils the trailer of "Devara kanasu".

ನಾನು ನ್ಯೂಯಾರ್ಕ್ ಫಿಲಂ ಅಕಾಡಮಿಯಲ್ಲಿ ನಾನು ಅಧ್ಯಯನ ‌ಮಾಡಿದ್ದೇನೆ ಎಂದು ಮಾತು ಪ್ರಾರಂಭಿಸಿದ ನಿರ್ದೇಶಕ ಸುರೇಶ್ ಲಕ್ಕೂರ್, “ದೇವರ ಕನಸು” ನನ್ನ ನಿರ್ದೇಶನದ ಮೊದಲ ಚಿತ್ರ. ಈ ಮಕ್ಕಳ ಚಿತ್ರ ಈಗಾಗಲೇ ಪ್ರತಿಷ್ಠಿತ ಕಾನ್ಸ್ ಫಿಲಂ ಫೆಸ್ಟಿವಲ್ ಸೇರಿದಂತೆ ಅನೇಕ ಫಿಲಂ ಫೆಸ್ಟಿವಲ್ ಗಳಲ್ಲಿ ಪ್ರದರ್ಶನವಾಗಿ ಪ್ರಶಂಸೆ ಪಡೆದುಕೊಂಡಿದೆ. “ದೇವ” ಎನ್ನುವುದು ಈ ಚಿತ್ರದ ಮುಖ್ಯ ಪಾತ್ರಧಾರಿಯ ಹೆಸರು. ಈ ಪಾತ್ರದಲ್ಲಿ ಮಾಸ್ಟರ್ ದೀಪಕ್ ಅಭಿನಯಿಸಿದ್ದಾರೆ. ಈ ಹುಡುಗ ಕಾಣುವ ಕನಸು ಈಡೇರುವುದೊ ಅಥವಾ ಇಲ್ಲವೋ? ಎಂಬುದು ಕಥಾಹಂದರ. ‌ದೀಪಕ್, ಅಮೂಲ್ಯ, ಅಋಷಿ ವೇದಿಕ ಹಾಗೂ ಮಾಕ್ ಮಣಿ ಚಿತ್ರದ ಪ್ರಮುಖಪಾತ್ರಗಳಲ್ಲಿ ನಟಿಸಿದ್ದಾರೆ. ಜುಲೈ 21 ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ನೋಡಿ ಹಾರೈಸಿ ಎಂದರು.Ashwini Puneeth Rajkumar unveils the trailer of "Devara kanasu".

ನಿರ್ಮಾಪಕರಾದ ಜಯ್ ಕುಮಾರ್, ಶೇಖರ್, ಕಥೆ ಬರೆದಿರುವ ಸುನೀಲ್ ರಾಮ್, ಹಾಡುಗಳು ಹಾಗೂ ಸಂಭಾಷಣೆ ರಚಿಸಿರುವ ಲಿಂಗರಾಜ್ ಇತಿಹಾಸ, ಸಂಗೀತ ನಿರ್ದೇಶಕ ಸ್ಯಾಂಡಿ ಹಾಗೂ ಚಿತ್ರದಲ್ಲಿ ನಟಿಸಿರುವ ಮಾಸ್ಟರ್ ದೀಪಕ್, ಬೇಬಿ ಅಮೂಲ್ಯ, ಅಋಷಿ ವೇದಿಕ, ಮಾಕ್ ಮಣಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.Ashwini Puneeth Rajkumar unveils the trailer of "Devara kanasu".

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…