ಸೆನ್ಸರ್ ಕೊಟ್ಟ U ಸರ್ಟಿಫಿಕೇಟ್ ಗೆ ತಿರುಗುಬಾಣ ಬಿಟ್ಟ ಲೋಕೇಂದ್ರ ಸೂರ್ಯ

AthiILoveYou

ಈವರೆಗೂ ಚಲನಚಿತ್ರಗಳಿಗೆ ಸೆನ್ಸರ್ ಮಂಡಳಿ ಕೊಡುವ U, U/A, A, ಸರ್ಟಿಫಿಕೇಟ್ಗಳು ಪ್ರೇಕ್ಷಕರ ವರ್ಗವನ್ನು ನಿಗದಿ ಮಾಡುತ್ತಿದ್ದು ಅದೇ ರೀತಿ ಅಥಿ ಐ ಲವ್ ಯು ಚಿತ್ರಕ್ಕೂ ಸಹ ಸೆನ್ಸಾರ್ ಮಂಡಳಿ ಯು ಸರ್ಟಿಫಿಕೇಟ್ ನೀಡುವ ಮೂಲಕ ಮಕ್ಕಳಿಂದ ವಯೋ ವೃದ್ಧರವರೆಗೂ ಸೇರಿದಂತೆ ಎಲ್ಲಾ ವರ್ಗದ ಜನರು ಸಿನಿಮಾವನ್ನು ವೀಕ್ಷಣೆ ಮಾಡಬಹುದು ಎಂದು ಅನುಮತಿ ನೀಡಿದ್ದಾರೆ. ಆದರೆ ನಿರ್ದೇಶಕ ಲೋಕೇಂದ್ರ ಸೂರ್ಯ ಈ ಚಿತ್ರ ಕೇವಲ ದಂಪತಿಗಳಿಗೆ ಮಾತ್ರ ಎಂದು ಹೇಳುವ ಮೂಲಕ ಗೊಂದಲ ಸೃಷ್ಟಿಸಿದ್ದಾರೆ.AthiILoveYou

ಹೌದು ನಿರ್ದೇಶಕರ ಈ ಹೇಳಿಕೆಯಿಂದ ಎಂಥವರಿಗಾದರೂ ಗೊಂದಲ ಎನಿಸುವುದು ಸಹಜ. ಜನಸಾಮಾನ್ಯರು ಇಂದು ಥಿಯೇಟರ್ ಕಡೆ ಮುಖ ಮಾಡಿ ಚಿತ್ರಗಳನ್ನ ವೀಕ್ಷಿಸುವ ಪ್ರಮಾಣ ಕಡಿಮೆಯಾದ ಬೆನ್ನಲ್ಲಿ ಗಾಂಧಿನಗದ ನಟರು, ನಿರ್ದೇಶಕರು, ನಿರ್ಮಾಪಕರು ಪ್ರೇಕ್ಷಕರನ್ನು ಥಿಯೇಟರ್ ನತ್ತ ಕರೆದು ತರಲು ಸಾಕಷ್ಟು ಸರ್ಕಸ್ ಮಾಡುತ್ತಿರುವ ಸಂದರ್ಭದಲ್ಲಿ, ನಿರ್ದೇಶಕ ಲೋಕೇಂದ್ರ ಸೂರ್ಯ ನನ್ನ ಅಥಿ ಐ ಲವ್ ಯು ಚಿತ್ರವನ್ನು ದಂಪತಿಗಳು ಮಾತ್ರ ಜೊತೆಯಲ್ಲಿ ಕುಳಿತು ನೋಡಬೇಕಿದೆ ಮಕ್ಕಳು ಮತ್ತು ಪ್ರೀತಿಯ ಅನುಭವ ಇಲ್ಲದ ಎಳೆ ನಿಂಬೆಕಾಯಿಗಳು ಈ ಚಿತ್ರಕ್ಕೆ ಬರುವುದು ಬೇಡ ಎಂದು ನೇರವಾಗಿ ಹೇಳಿದ್ದಾರೆ.AthiILoveYou

ಸೆನ್ಸರ್ ಮಂಡಳಿ ಕೊಟ್ಟಿರುವ U ಸರ್ಟಿಫಿಕೇಟ್ ಮತ್ತು ನಿರ್ದೇಶಕ ಲೋಕೇಂದ್ರ ಸೂರ್ಯ ಕೊಟ್ಟಿರುವ ಹೇಳಿಕೆಗೆ ಒಂದಕ್ಕೊಂದು ವಿರುದ್ಧವಾಗಿದೆ. ಈ ಬಗ್ಗೆ ನಿರ್ಮಾಪಕ ರೆಡ್ ಅಂಡ್ ವೈಟ್ ಸೆವೆನ್ ರಾಜ್ ಅವರು ನಿರ್ದೇಶಕರು ಕೊಟ್ಟಿರುವ ಹೇಳಿಕೆ ಸರಿಯಾಗಿದೆ ಅದರಿಂದ ನನಗೇನು ನಷ್ಟವಿಲ್ಲ ನಮ್ಮ ಸಿನಿಮಾ ದಂಪತಿಗಳೇ ನೋಡಬೇಕಾದ ಚಿತ್ರವಾದ ಕಾರಣ ಅವರನ್ನೇ ಉದ್ದೇಶಿಸಿ ನಿರ್ದೇಶಕರು ಮಾತನಾಡಿದ್ದಾರೆ ಈ ಸಾಂಸಾರಿಕ ವಿಚಾರಗಳು ಸಂಸಾರದ ಅನುಭವವನ್ನು ಕಂಡವರಿಗೆ ಮಾತ್ರವೇ ರುಚಿಸುತ್ತದೆ ವಿನಹ ಅದರ ಅನುಭವ ಇಲ್ಲದವರಿಗೆ ಅದು ಕ್ಷುಲ್ಲಕ ಎನಿಸಬಹುದು ಆ ನಿಟ್ಟಿನಲ್ಲಿ ನಿರ್ದೇಶಕರು ಕೊಟ್ಟಿರುವ ಹೇಳಿಕೆಯನ್ನೇ ನಾನು ಗೌರವಿಸುತ್ತೇನೆ ಎಂದು ಹೇಳಿದ್ದಾರೆ. ಅಲ್ಲದೆ ಈ ಮೊದಲ ಚಿತ್ರ A ಸರ್ಟಿಫಿಕೇಟ್ ಪಡೆದುಕೊಂಡ ಕಾರಣ ನನಗೆ ಬಹಳ ನಿರಾಶೆಯಾಗಿತ್ತು ಆದರೆ ಈಗ ಅತಿ ಐ ಲವ್ ಯು U ಸರ್ಟಿಫಿಕೇಟ್ ಪಡೆದುಕೊಂಡು ಬಿಡುಗಡೆಗೆ ಮತ್ತಷ್ಟು ಧೈರ್ಯ ತುಂಬಿದೆ ಎಂದರು ರೆಡ್ ಅಂಡ್ ವೈಟ್ ನಿರ್ಮಾಪಕ ಸವೆನ್ ರಾಜ್.AthiILoveYou

ಮೊದಲಿನಿಂದಲೂ ಒಂದಲ್ಲ ಒಂದು ರೀತಿ ವಿಭಿನ್ನ ಪ್ರಯತ್ನಗಳನ್ನ ತಮ್ಮ ಇತಿಮಿತಿಗಳಲ್ಲಿ ಸಾಬೀತು ಪಡಿಸುತ್ತಿರುವ ಲೋಕೇಂದ್ರ ಸೂರ್ಯ ಈ ಬಾರಿಯೂ ಅಂತಹದ್ದೆ ಒಂದು ವಿಭಿನ್ನತೆಗೆ ಜೀವ ನೀಡಿದ್ದಾರೆ ಎಂದು ಕಾಣುತ್ತಿದೆ. ಈ ಎಲ್ಲಾ ಗೊಂದಲಗಳಿಗೆ ಡಿಸೆಂಬರ್ 7ರಂದು ಚಿತ್ರದ ಬಿಡುಗಡೆ ಉತ್ತರವಾಗಳುದೆ

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…