ʻಅಥಿʼಯ ರೊಮ್ಯಾಂಟಿಕ್ ಫೋಟೋ ಶೂಟ್!

``Athi''s Romantic Photo Shoot!

ʻಅಥಿʼಯಾಯ್ತು ಈ ಫೋಟೋಶೂಟ್!

ಒಂದು ಮನೆ, ಎರಡು ಪಾತ್ರಗಳನ್ನಿಟ್ಟುಕೊಂಡು ಸಿನಿಮಾ ರೂಪಿಸುವುದು ಅಂದರೆ ಸುಲಭದ ಮಾತಲ್ಲ. ಅದೂ ಹತ್ತಕ್ಕೂ ಹೆಚ್ಚು ನಿಮಿಷಗಳ ಸಿಂಗಲ್ ಶಾಟ್ಗಳನ್ನು ಕಂಪೋಸ್ ಮಾಡೋದು ಕೂಡಾ ಕಷ್ಟದ ಕೆಲಸವೇ. ಆರಂಭದಿಂದಲೂ ಒಂದಲ್ಲಾ ಒಂದು ಕಾರಣಕ್ಕೆ ಕುತೂಹಲ ಹೆಚ್ಚಿಸಿಕೊಂಡು ಬಂದಿರುವ ಚಿತ್ರ ʻಅಥಿʼ. ಹಾಗೆ ನೋಡಿದರೆ, ಕನ್ನಡದಲ್ಲಿ ಗಂಡ-ಹೆಂಡತಿಯ ಸಂಬಂಧದ ಕುರಿತ ಸಾಕಷ್ಟು ಚಿತ್ರಗಳು ಬಂದಿವೆ. ಆದರೆ ʻʻಈ ವರೆಗೂ ಎಲ್ಲೂ, ಯಾರೂ ಹೇಳಿರದ ಹೊಸ ವಿಚಾರವೊಂದನ್ನು ನಾವಿನ್ನಲಿ ʻಅಥಿʼಯ ಮೂಲಕ ಅನಾವರಣ ಮಾಡುತ್ತಿದ್ದೇವೆʼʼ ಅನ್ನೋದು ಸ್ವತಃ ಚಿತ್ರದ ನಾಯಕನಟರೂ ಆಗಿರುವ, ನಿರ್ದೇಶಕ ಲೋಕೇಂದ್ರ ಸೂರ್ಯ ಅವರ ಮಾತು. ``Athi''s Romantic Photo Shoot!

ʻಅಟ್ಟಯ್ಯ ವರ್ಸಸ್ ಹಂದಿ ಕಾಯೋಳುʼ ಎನ್ನುವ ಚಿತ್ರದ ಮೂಲಕ ಚಿತ್ರರಂಗದ ವಾತಾವರಣದಲ್ಲಿ ಅಚ್ಛರಿ ಮೂಡಿಸಿದವರು ಲೋಕೇಂದ್ರ. ಆ ತನಕ ಯಾವ ಚಿತ್ರಗಳಲ್ಲೂ ನಟಿಸದ, ತಮಗೆ ಪರಿಚಿತರಿರುವವರನ್ನೇ ಪಾತ್ರಗಳನ್ನಾಗಿಸಿ, ಸಿನಿಮಾದ ಅನುಭವವೇ ಇರದವರನ್ನು ತಂತ್ರಜ್ಞರನ್ನಾಗಿಸಿ , ಕಾಡುವ ಕತೆಯ, ಚೆಂದದ ಸಿನಿಮಾ ನೀಡಿ ಎಲ್ಲರ ಗಮನ ಸೆಳೆದಿದ್ದರು. ಈ ಚಿತ್ರ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸೇರಿದಂತೆ ಸಾಕಷ್ಟು ಸಿನಿಮೋತ್ಸವಗಳಲ್ಲಿ ಪ್ರದರ್ಶನಗೊಂಡು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಲೋಕೇಂದ್ರ ಅವರೇ ರೂಪಿಸಿರುವ ʻಕುಗ್ರಾಮʼ ಚಿತ್ರ ಕೂಡ ಬಿಡುಗಡೆಗೆ ತಯಾರಾಗಿದೆ.
ಸದ್ಯ ಸೂರ್ಯ ಸಿನಿ ಫ್ಯಾಕ್ಟರಿಯಲ್ಲಿ ʻಅಥಿʼ ಚಿತ್ರಕ್ಕಾಗಿ ಕ್ಯೂಟ್ ಮತ್ತು ರೊಮ್ಯಾಂಟಿಕ್ ಫೋಟೋಶೂಟ್ ಮಾಡಲಾಗಿದೆ. ``Athi''s Romantic Photo Shoot!

ʻʻಫೋಟೋಗಳು ಎಲ್ಲರನ್ನೂ ಆಕರ್ಷಿಸುವುದರ ಜೊತೆಗೆ ಸಿನಿಮಾ ಕಂಟೆಂಟ್ ಹೇಳುವಂತಿರಬೇಕು ಎನ್ನುವ ಕಾರಣಕ್ಕೆ ಚಿತ್ರೀಕರಣವೆಲ್ಲಾ ಬಹುತೇಕ ಮುಕ್ತಾಯವಾಗುವ ಈ ಹಂತದಲ್ಲಿ ಫೋಟೋ ಶೂಟ್ ಮಾಡಿದ್ದೇವೆ. ಚುನಾವಣೆ ಮುಗಿಯುತ್ತಿದ್ದಂತೇ ಮೇ 13ರ ನಂತರ ʻಅಥಿʼ ಚಿತ್ರದ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡುತ್ತೇವೆʼʼ ಎಂದು ಚಿತ್ರದ ನಿರ್ಮಾಪಕರಾದ ರೆಡ್ ಅಂಡ್ ವೈಟ್ ಸೆವೆನ್ ರಾಜ್ ಅವರು ಹೇಳಿದ್ದಾರೆ. ನಟಿಯಾಗಿ ಸಾಕಷ್ಟು ಹೆಸರು ಮಾಡಿರುವ ಋತುಚೈತ್ರ ಅವರು ವಸ್ತ್ರವಿನ್ಯಾಸ ಮಾಡಿರುವುದು ಈ ಫೋಟೋಶೂಟ್ನ ಮತ್ತೊಂದು ವಿಶೇಷವಾಗಿದೆ. ``Athi''s Romantic Photo Shoot!

ಇನ್ನುಳಿದಂತೆ ಸೆವೆನ್ ರಾಜ್ ಆರ್ಟ್ಸ್ ನಿರ್ಮಿಸುತ್ತಿರುವ ಅಥಿ ಐ ಲವ್ ಯುʼ ಚಿತ್ರಕ್ಕೆ ಲೋಕೇಂದ್ರ ಸೂರ್ಯ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಅನಂತ್ ಆರ್ಯನ್ ಸಂಗೀತ ಚಿತ್ರಕ್ಕಿದೆ. ಎನ್. ಓಂ ಪ್ರಕಾಶ್ ರಾವ್ ಅವರ ಪುತ್ರಿ ಶ್ರಾವ್ಯಾ ರಾವ್ ಅಂದ್ರೆ ಸಾತ್ವಿಕ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಚಿತ್ರದ ಪರದೆಯನ್ನು ಬಹುತೇಕ ಸಾತ್ವಿಕ ಆವರಿಸಿಕೊಂಡಿದ್ದ ಬಿಡುಗಡೆಗೆ ಕಾತರದಲ್ಲಿ ಕಾಯುತ್ತಿರುವುದಾಗಿ ಹೇಳಿದ್ದಾರೆ ಸಾತ್ವಿಕ.
ಅಲ್ಲದೆ ರೆಡ್ ಅಂಡ್ ವೈಟ್ ಸೆವೆನ್ ರಾಜ್ ಅವರ ನಿರ್ಮಾಣದ ಎರಡನೇ ಚಿತ್ರ ಇದಾಗಿದೆ. ``Athi''s Romantic Photo Shoot!

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…