ರಾಷ್ಟ್ರಪ್ರಶಸ್ತಿ ವಿಜೇತ ನಟಿ ತಾರಾ ಅನುರಾಧ ಅವರಿಂದ “ಆವರ್ತ” ಚಿತ್ರದ ಹಾಡುಗಳ ಬಿಡುಗಡೆ.

avartha kannada movie songs release thara

ಕನ್ನಡ ಚಿತ್ರರಂಗಕ್ಕೆ “ತುಳಸಿದಳ” ದಂತಹ ಅದ್ಭುತ ಚಿತ್ರವನ್ನು ಕೊಟ್ಟ ವೇಮಗಲ್ ಜಗನ್ನಾಥ್ ರಾವ್ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರ “ಆವರ್ತ”. ಇತ್ತೀಚಿಗೆ ಈ ಚಿತ್ರದ ಹಾಡುಗಳನ್ನು ರಾಷ್ಟ್ರಪ್ರಶಸ್ತಿ ವಿಜೇತ ನಟಿ ತಾರಾ ಅನುರಾಧ ಬಿಡುಗಡೆ ಮಾಡಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಟ್ರೇಲರ್ ಅನಾವರಣಗೊಳಿಸಿದರು.avartha kannada movie songs release thara

ನನ್ನ ಮೊದಲ ಚಿತ್ರ “ತುಳಸಿದಳ”. ಆ ಚಿತ್ರದಲ್ಲಿ ವೇಮಗಲ್ ಜಗನ್ನಾಥ್ ರಾವ್ ಅವರು ನನ್ನನ್ನು ಗುರುತಿಸಿ ಅವಕಾಶ ನೀಡಿದ್ದರು. ನನ್ನ ಗುರುಗಳು ನಿರ್ದೇಶಿಸಿರುವ ಈ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿರುವುದಕ್ಕೆ ಬಹಳ ಖುಷಿಯಾಗಿದೆ. ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ತಾರಾ ಅನುರಾಧ ಶುಭ ಕೋರಿದರು. ಭಾ.ಮ.ಹರೀಶ್ ಅವರು ಚಿತ್ರಕ್ಕೆ ಶುಭ ಹಾರೈಸಿದರು.avartha kannada movie songs release thara

ಯುವಕನೊಬ್ಬನಿಗೆ ಕಥೆ ಬರೆಯುವ ಹವ್ಯಾಸ. ಕಾಲ್ಪನಿಕ ಕಥೆ ಬರೆಯುವ ಬಯಕೆಯಿಲ್ಲದ ಆತನಿಗೆ ನೈಜಘಟನೆ ಕುರಿತು ಕಥೆ ಬರೆಯುವ ಆಸಕ್ತಿ. ಆ ಸಮಯದಲ್ಲಿ ಆತನಿಗೊಂದು ಮೆಸೇಜ್ ಬರುತ್ತದೆ. ಆತ ಆ ಸ್ಥಳಕ್ಕೆ ಹೋದಾಗ ಏನೆಲ್ಲಾ ಆಗುತ್ತದೆ? ಎಂಬುದು ನಮ್ಮ ಚಿತ್ರದ ಕಥೆ ಎನ್ನುವ ನಿರ್ದೇಶಕ ವೇಮಗಲ್ ಜಗನ್ನಾಥರಾವ್, ನವೆಂಬರ್ 18 ರಂದು ಚಿತ್ರವನ್ನು ತೆರೆಗೆ ತರುವುದಾಗಿ ತಿಳಿಸಿದರು.

ಕಥೆಗಾರನ ಪಾತ್ರದಲ್ಲಿ ಕಾಣಿಸಿಕೊಂಡಿರುವುದಾಗಿ ನಾಯಕ ಜಯ್ ಚಂದ್ರ ಹೇಳಿದರು. ಸಿ.ಓ.ಡಿ ಅಧಿಕಾರಿ ಪಾತ್ರಧಾರಿ ಧನ್ವಿತ್ ಹಾಗೂ ನಾಯಕಿ ನಯನ “ಆವರ್ತ” ಚಿತ್ರದ ಬಗ್ಗೆ ಮಾತನಾಡಿದರು. ಮೂರು ಸಾಹಸ ಸನ್ನಿವೇಶಗಳು ಚೆನ್ನಾಗಿದೆ ಎಂದು ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ತಿಳಿಸಿದರು. ಸಂಗೀತ ನಿರ್ದೇಶಕ ಅತಿಶಯ್ ಜೈನ್ ಹಾಗೂ ಛಾಯಾಗ್ರಾಹಕ ಮಲ್ಲಿಕಾರ್ಜುನ್ ತಮ್ಮ ಕಾರ್ಯದ ಕುರಿತು ಮಾಹಿತಿ ನೀಡಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…