ಅಯುಕ್ತ ಟೀಸರ್ ಬಿಡುಗಡೆ

Ayukta Movie Press Meet | Teaser Launch Event

ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ ’ಅಯುಕ್ತ’ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮವು ಕಲಾವಿದರ ಸಂಘದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಲಹರಿವೇಲು ಮಾತನಾಡಿ ಇವತ್ತು ತುಂಬಾ ಭಾವುಕನಾಗಿದ್ದೇನೆ. ಸಮಾಜಮುಖಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯವೈಖರಿಯನ್ನು ಮೆಚ್ಚಲೇ ಬೇಕಾಗಿದೆ. ಅನಾಥ ಶವಗಳಿಗೆ ಮುಕ್ತಿ ನೀಡುವ ಸೇವೆಯನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದಾರೆ. ಇಂತಹವರಿಗೆ ಎಲ್ಲರ ಬೆಂಬಲ ಬೇಕಾಗಿದೆ. ಟೀಸರ್ ನೋಡಿದಾಗ ಹೊಸಬರ ಚಿತ್ರ ಅನಿಸಿವುದಿಲ್ಲ. ಒಳ್ಳೆಯದಾಗಲಿ ಎಂದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮ.ಹರೀಶ್ ಆಗಮಿಸಿ ತಂಡಕ್ಕೆ ಶುಭ ಹಾರೈಸಿದರು.Ayukta Movie Press Meet | Teaser Launch Event

ರಚನೆ,ಚಿತ್ರಕಥೆ ಮತ್ತು ನಿರ್ದೇಶನ ಮಾಡಿರುವ ಕನಸುರಮೇಶ್ ಹೇಳುವಂತೆ ಈ ಹಿಂದೆ ಸುಮಾರು 250 ನಾಟಕಗಳನ್ನು ನಿರ್ದೇಶಿಸಿದ ಅನುಭವವಿದೆ. ಅದರಿಂದಲೇ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲು ಸುಲಭವಾಯಿತು. ಸಿನಿಮಾದ ಕುರಿತು ಹೇಳುವುದಾದರೆ ಸಂಪಾದನೆಗೋಸ್ಕರ ಪದವಿ ಮಾಡಬೇಡಿ. ಜ್ಘಾನಾರ್ಜನೆಗೋಸ್ಕರ ಡಿಗ್ರಿ ಮಾಡುವುದು ಒಳಿತು. ಪೋಷಕರು ತಮ್ಮ ಧೋರಣೆಯನ್ನು ನೋಡದೆ ಮಕ್ಕಳು ಇಷ್ಟಪಡುವಂತ ಕೆಲಸಕ್ಕೆ ಸ್ವಾತಂತ್ರ ಕೊಡಬೇಕು. ಅದನ್ನು ಅನುಸರಿಸದೆ ಬಲವಂತ ಮಾಡಿದಾಗ, ಮಕ್ಕಳು ಯಾವ ರೀತಿ ದಿಕ್ಕು ತಪ್ಪುತ್ತಾರೆ. ಕೊನೆಗೆ ಏನಾಗುತ್ತಾರೆ ಎಂಬುದನ್ನು ಸೆಸ್ಪನ್ಸ್, ಥ್ರಿಲ್ಲರ್ ಹಾಗೂ ಪ್ರೀತಿಯೊಂದಿಗೆ ಹೇಳಲಾಗಿದೆ. ನೂರಾರು ತಿರುವುಗಳು ಇರಲಿದ್ದು ಒಂದೊಂದು ತಿರುವುಗಳಿಗೂ ಕಥೆ ಇರಲಿದೆ. ಮಂಡ್ಯ, ಕಿರುಗಾವಲು. ಮಳವಳ್ಳಿ, ಬೆಳಕವಾಡಿ ಕಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಮಾದ್ಯಮದ ಸಹಕಾರ ಬೇಕೆಂದು ಕೋರಿದರು.Ayukta Movie Press Meet | Teaser Launch Event

ಫಯುಸುಪಿಯಾನ್, ಅದ್ದೂರಿಬಸವ, ರಮೇಶ್, ಜಾನ್ಸನ್, ರುತ್ವಿಕಾ, ಸೌಂದರ್ಯಗೌಡ, ಚನ್ನಬಸಪ್ಪ ಮುಂತಾದವರು ಪಾತ್ರದ ಪರಿಚಯ ಮಾಡಿಕೊಂಡು ಅವಕಾಶ ನೀಡಿದ್ದಕ್ಕೆ ಧನ್ಯವಾದ ತಿಳಿಸಿದರು. ಬಾಲಾಜಿ ಕ್ರಿಯೇಶನ್ಸ್ ಅಡಿಯಲ್ಲಿ ವಿಶ್ವಾಸ್ ಆರ್.ಗಂಗಡ್ಕರ್ ನಿರ್ಮಾಣ ಮಾಡಿದ್ದಾರೆ. ಸಂಗೀತ ವಿಲಿಯಂದೃತ್, ಛಾಯಾಗ್ರಹಣ ಅರಸಿಕೆರೆ ದೀಪು, ಸಂಕಲನ ನಿಶಿತ್‌ಪೂಜಾರಿ ಅವರದಾಗಿದೆ.Ayukta Movie Press Meet | Teaser Launch Event

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…