ಟ್ರೇಲರ್ ನಲ್ಲೇ ಮೋಡಿ ಮಾಡಿದ “ಬ್ಯಾಚುಲರ್ ಪಾರ್ಟಿ”

Bachelor Party - In Cinemas Jan 26

ರಕ್ಷಿತ್ ಶೆಟ್ಟಿ ನಿರ್ಮಾಣದ ಈ ಚಿತ್ರ ಜನವರಿ 26 ರಂದು ತೆರೆಗೆ .

ಪರಂವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ ಎಸ್ ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ನಿರ್ಮಾಣದ, ಅಭಿಜಿತ್ ಮಹೇಶ್ ನಿರ್ದೇಶನದ, ದಿಗಂತ್, ಲೂಸ್ ಮಾದ ಯೋಗಿ, ಅಚ್ಯುತಕುಮಾರ್ ಪ್ರಮುಖಪಾತ್ರದಲ್ಲಿ ನಟಿಸಿರುವ “ಬ್ಯಾಚುಲರ್ ಪಾರ್ಟಿ” Bachelor Party ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಪಂಚಿಂಗ್ ಡೈಲಾಗ್ ಗಳ ಮೂಲಕ ಟ್ರೇಲರ್ ಎಲ್ಲರನ್ನೂ ಮೋಡಿ ಮಾಡುತ್ತಿದೆ‌ . ಟ್ರೇಲರ್ ಬಿಡುಗಡೆಯ ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

ನಾನು ಕಿರುಚಿತ್ರ ಮಾಡುತ್ತಿದ್ದ ಸಮಯದಲ್ಲಿ ನನಗೆ ಅಭಿಜಿತ್ ಮಹೇಶ್ ಪರಿಚಯವಾದರು. “ಕಿರಿಕ ಪಾರ್ಟಿ”, ” ಅವನೇ ಶ್ರೀಮನ್ನಾರಾಯಣ” ಚಿತ್ರಗಳಲ್ಲಿ ಒನ್ ಲೈನ್ ಪಂಚಿಂಗ್ ಡೈಲಾಗ್ ಗಳು ಅಭಿಜಿತ್ ಅವರ ಕೊಡುಗೆ. ಅಂತಹ ಅದ್ಭುತ ಪ್ರತಿಭೆ ಅವರು. ಆಗಿನಿಂದಲೂ ನಾನು ಅಭಿಜಿತ್ ಅವರಿಗೆ ನಿರ್ದೇಶನ ಮಾಡಲು ಹೇಳುತ್ತಿದ್ದೆ. ಈಗ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇನ್ನೂ ದಿಗಂತ್ ಹಾಗೂ ಯೋಗಿ ಇಬ್ಬರು ಅದ್ಭುತ ಕಲಾವಿದರು. ನಾನು ಅವರಿಬ್ಬರ ಚಿತ್ರಗಳನ್ನು ನೋಡಿ ಬಹಳ ಇಷ್ಟಪಟ್ಟಿದ್ದೇನೆ. ಈ ಚಿತ್ರದಲ್ಲಿ ಒಟ್ಟಿಗೆ ಅಭಿನಯಿಸಿದ್ದಾರೆ. ಒಟ್ಟಾರೆ ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ಇದೇ ಜನವರಿ 26 ಬಿಡುಗಡೆಯಾಗುತ್ತಿದೆ . ನೋಡಿ ಹಾರೈಸಿ ಎಂದರು ನಿರ್ಮಾಪಕ ರಕ್ಷಿತ್ ಶೆಟ್ಟಿ.bachelor party

ಲಾಕ್ ಡೌನ್ ಸಮಯದಲ್ಲಿ ಈ ಸಿನಿಮಾದ ಕಥೆ ಹುಟ್ಟಿದ್ದು ಎಂದು ಮಾತನಾಡಿದ ನಿರ್ದೇಶಕ ಅಭಿಜಿತ್ ಮಹೇಶ್, ಇದೊಂದು ಪಕ್ಕಾ ಎಂಟರ್ ಟೈನರ್ ಸಿನಿಮಾ. ಪ್ರೇಕ್ಷಕರು ಕೊಡುವ ದುಡ್ಡಿಗೆ ಖಂಡಿತ ಮೋಸ ಆಗುವುದಿಲ್ಲ. ನಿರ್ದೇಶನ ಮಾಡಲು ಅವಕಾಶ ನೀಡಿದ ರಕ್ಷಿತ್ ಶೆಟ್ಟಿ ಅವರಿಗೆ ಹಾಗೂ ಇಡೀ ತಂಡಕ್ಕೆ ಧನ್ಯವಾದ ಎಂದರು.

ನನ್ನ ಪಾತ್ರ ರಿಷಭ್ ಶೆಟ್ಟಿ ಅವರು ಮಾಡಬೇಕಿತ್ತು. ಅವರು “ಕಾಂತಾರ”ದಲ್ಲಿ ಬ್ಯುಸಿಯಾದ ಕಾರಣ ನಾನು ಈ ಚಿತ್ರದಲ್ಲಿ ನಟಿಸಿದ್ದೇನೆ. ಪಾತ್ರ ತುಂಬಾ ಚೆನ್ನಾಗಿದೆ. ನಾನು ಹಾಗೂ ದಿಗಂತ್ ಹದಿನೈದು ವರ್ಷಗಳ ಸ್ನೇಹಿತರು. ಆದರೆ ಒಂದು ಚಿತ್ರದಲ್ಲೂ ಒಟ್ಟಿಗೆ ನಟಿಸಿರಲಿಲ್ಲ. ಈ ಚಿತ್ರದಲ್ಲಿ ಒಟ್ಟಿಗೆ ಅಭಿನಯಿಸಿರುವುದು ಖುಷಿಯಾಗಿದೆ ಎಂದರು ಲೂಸ್ ಮಾದ ಯೋಗಿ.

ಪರಂವಃ ಸ್ಟುಡಿಯೋಸ್ ನಲ್ಲಿ ನನ್ನದು ಇದು ಎರಡನೇ ಚಿತ್ರ. ಯೋಗಿ ಹಾಗೂ ನಾನು ಒಟ್ಟಿಗೆ ನಟಿಸಿರುವ ಮೊದಲ ಚಿತ್ರ. ಅಭಿಜಿತ್ ಮಹೇಶ್ ಅವರ ನಿರ್ದೇಶನದಲ್ಲಿ ಚಿತ್ರ ತುಂಬಾ ಚೆನ್ನಾಗಿ ಮೂಡಿಬಂದಿದೆ. ಚಿತ್ರೀಕರಣದ ಸಮಯ ತುಂಬಾ ಸಂತಸಮಯವಾಗಿತ್ತು ಎಂದರು ದಿಗಂತ್.bachelor party

ಈ ಚಿತ್ರಕ್ಕೆ ಬೆಂಗಳೂರು ಅಷ್ಟೇ ಅಲ್ಲದೆ, ಥೈಲ್ಯಾಂಡ್, ಬ್ಯಾಂಕಾಕ್ ನಲ್ಲೂ ಹೆಚ್ಚಿನ ಚಿತ್ರೀಕರಣವಾಗಿದೆ. ನಾನು, ಯೋಗಿ ಹಾಗೂ ದಿಗಂತ್ ಅಲ್ಲಿನ ಚಿತ್ರೀಕರಣದಲ್ಲಿ ಭಾಗಿಯಾಗಿದ್ದೆವು. ಇಬ್ಬರು ಒಳ್ಳೆಯ ನಟರು. ಅಭಿಜಿತ್ ಅವರು ಪ್ರತಿಭಾವಂತ ನಿರ್ದೇಶಕ. ಎಲ್ಲರೂ ” ಬ್ಯಾಚುಲರ್ ಪಾರ್ಟಿ ” ನೋಡಿ. ಪ್ರೋತ್ಸಾಹ ನೀಡಿ ಎಂದು ನಟ ಅಚ್ಯುತ ಕುಮಾರ್ ತಿಳಿಸಿದರು.bachelor party

ಸಂಗೀತ ನಿರ್ದೇಶಕ ಅರ್ಜುನ್ ರಾಮ್, ಛಾಯಾಗ್ರಾಹಕ ಅರವಿಂದ್ ಕಶ್ಯಪ್, ಕಾಸ್ಟ್ಯೂಮ್ ಡಿಸೈನರ್ ಅರುಂಧತಿ ಹಾಗೂ ಪರಂವಃ ಸಂಸ್ಥೆಯ ಸಿ ಇ ಓ ಶ್ರೀನಿ ಶೆಟ್ಟಿ “ಬ್ಯಾಚುಲರ್ ಪಾರ್ಟಿ” ಚಿತ್ರದ ಕುರಿತು ಮಾತನಾಡಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…