ಹೊಂಬಾಳೆ ಫಿಲಂಸ್ ನ ಮತ್ತೊಂದು ಅದ್ದೂರಿ ಚಿತ್ರ “ಬಘೀರ” ಆರಂಭ.

ಡಾ|| ಸೂರಿ ನಿರ್ದೇಶನದ ಈ ಚಿತ್ರಕ್ಕೆ ಶ್ರೀಮುರಳಿ ನಾಯಕ.

ಇಡೀ ವಿಶ್ವವೇ ಕನ್ನಡ ಚಿತ್ರರಂಗದ ಕಡೆ ನೋಡುವಂತಹ “ಕೆ ಜಿ ಎಫ್ ೨” ನಂತಹ ಬಿಗ್ ಹಿಟ್ ಸಿನಿಮಾ ನಿರ್ಮಾಣ ಮಾಡಿರುವ ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರ್ ನಿರ್ಮಾಣದ “ಬಘೀರ” ಚಿತ್ರಕ್ಕೆ ಚಾಲನೆ ದೊರಕಿದೆ. ಡಾ||ಸೂರಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಶ್ರೀಮುರಳಿ ನಾಯಕರಾಗಿ ಅಭಿನಯಿಸುತ್ತಿದ್ದಾರೆ‌.WhatsApp Image 2022 05 20 at 3.43.00 PM

“ಬಘೀರ” ಚಿತ್ರದ ಮುಹೂರ್ತ ಸಮಾರಂಭ ಮಹಾಲಕ್ಷ್ಮಿ ಲೇಔಟ್ ನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಮೊದಲ ದೃಶ್ಯಕ್ಕೆ ನಿರ್ಮಾಪಕ ವಿಜಯ್ ಕಿರಗಂದೂರ್ ಅವರ ಸಹೋದರ ಮಂಜುನಾಥ್ ಆರಂಭ ಫಲಕ ತೋರಿದರು. ನಿರ್ದೇಶಕ ಸೂರಿ ಅವರ ತಾಯಿ ಸರೋಜ ಅವರು ಕ್ಯಾಮೆರಾ ಚಾಲನೆ ಮಾಡಿದರು. ಮೇ ಕೊನೆಯ ವಾರದಲ್ಲಿ ಚಿತ್ರೀಕರಣ ಆರಂಭವಾಗಲಿದೆ.WhatsApp Image 2022 05 20 at 3.42.59 PM 1

ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಈ ಚಿತ್ರಕ್ಕೆ ಕಥೆ ಬರೆದಿದ್ದು, ಡಾ||ಸೂರಿ ನಿರ್ದೇಶನ ಮಾಡುತ್ತಿದ್ದಾರೆ‌. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಎ ಜೆ ಶೆಟ್ಟಿ ಛಾಯಾಗ್ರಹಣ ಹಾಗೂ ಶಿವಕುಮಾರ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.WhatsApp Image 2022 05 20 at 3.42.58 PM

ಈ ಹಿಂದೆ ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಶ್ರೀಮುರಳಿ ನಾಯಕರಾಗಿ ನಟಿಸಿದ್ದ “ಉಗ್ರಂ” ಚಿತ್ರ ಭರ್ಜರಿ ಯಶಸ್ಸು ಕಂಡಿದ್ದು, ಈ ಚಿತ್ರಕ್ಕೂ ಪ್ರಶಾಂತ್ ನೀಲ್ ಕಥೆ ಬರೆದಿದ್ದಾರೆ. ಚಿತ್ರಕಥೆ ನಿರ್ದೇಶಕ ಡಾ||ಸೂರಿ ಅವರದು.
ಹಿಂದೆ ಬಿಡುಗಡೆಯಾಗಿದ್ದ “ಬಘೀರ” ಚಿತ್ರದ ಫಸ್ಟಲುಕ್ ಗೆ ಶ್ರೀಮುರಳಿ ಅಭಿಮಾನಿಗಳು ಫಿದಾ ಆಗಿದ್ದರು. ಈಗ ಈ ಚಿತ್ರ ಯಾವಾಗ ಬಿಡುಗಡೆಯಾಗುತ್ತದೆ? ಎಂಬ ಕಾತುರದಲ್ಲಿದ್ದಾರೆ.WhatsApp Image 2022 05 20 at 3.42.59 PM

ಶ್ರೀಮುರಳಿ “ಬಘೀರ” ಚಿತ್ರದ ನಾಯಕರಾಗಿ ನಟಿಸುತ್ತಿದ್ದು, ರಂಗಾಯಣ ರಘು, ಅಚ್ಯುತಕುಮಾರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…