ಏನೇ ಬದಲಾದರೂ ‘ಬೈರಾಗಿ’ಯ ವ್ಯಕ್ತಿತ್ವ ಬದಲಾಗುವುದಿಲ್ಲ!

ಶಿವರಾಜಕುಮಾರ್ ಚಿತ್ರಗಳ ಮಧ್ಯೆ ಇಷ್ಟೊಂದು ಗ್ಯಾಪ್ ಆಗಿದ್ದೇ ಇಲ್ಲ. ಸಾಮಾನ್ಯವಾಗಿ ನಾಲ್ಕೈದು ತಿಂಗಳುಗಳ ಅಂತರದಲ್ಲಿ ಅವರ ಅಭಿನಯದ ಒಂದು ಚಿತ್ರ ಬಿಡುಗಡೆಯಾಗುತ್ತಿತ್ತು. ಆದರೆ, ‘ಭಜರಂಗಿ 2’ ನಂತರ ಭರ್ಜರಿ ಎಂಟು ತಿಂಗಳುಗಳ ನಂತರ ‘ಬೈರಾಗಿ’ ಇದೇ ಜುಲೈ 01ರಂದು ಬಿಡುಗಡೆಯಾಗುತ್ತಿದೆ. ಮೊದಲು ಶಿವಣ್ಣ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರ ಮಾಡಬೇಕು ಎಂಬುದು ಚಿತ್ರತಂಡದ ಆಸೆಯಾಗಿತ್ತಂತೆ. ಆದರೆ, ಪುನೀತ್ ನಿಧನದ ಕಾರಣ ಶಿವಣ್ಣ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ತೀರ್ಮಾನಿಸಿದ್ದರಿಂದ ಚಿತ್ರ ಇದೇ ಶುಕ್ರವಾರ ಬಿಡುಗಡೆಯಾಗುತ್ತಿದೆ.Bairagee1 2f81ccb0 8c2f 11ec 891d 751fcf51b961ಈ ಚಿತ್ರದ ಬಗ್ಗೆ ಶಿವಣ್ಣ ಸಖತ್ ಎಕ್ಸೈಟ್ ಆಗಿದ್ದಾರೆ. ಕಾರಣ ಹಲವಿದೆ. ಪ್ರಮುಖವಾಗಿ, ಟಗರು ನಂತರ ಅವರು ಧನಂಜಯ್ ಜೊತೆಗೆ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಅವರಿಗೆ ಹುಲಿವೇಷವಿದೆ. ಒಂದು ಹಾಡಿಗೆ ಶರಣ್ ಧ್ವನಿಯಾಗಿದ್ದಾರೆ. ಒಂದು ಹಾಡನ್ನು ಒಂದೇ ಟೇಕ್ನಲ್ಲಿ ಚಿತ್ರೀಕರಣ ಮಾಡಲಾಗಿದೆ. ಇನ್ನೂ ಹಲವು ವಿಶೇಷತೆಗಳಿಂದ ಕೂಡಿರುವ ಈ ಚಿತ್ರವು ಒಂದು ಬೇರೆ ಪ್ರಯತ್ನ ಎಂಬ ನಂಬಿಕೆ ಅವರದು.85068766

‘ಬೈರಾಗಿ’ ಬಗ್ಗೆ ಮಾತನಾಡುವ ಶಿವಣ್ಣ, ‘ನಾನು ಇದುವರೆಗೂ ಹುಲಿ ವೇಷ ತೊಟ್ಟಿರಲಿಲ್ಲ. ಹುಲಿ ವೇಷ ಚಿತ್ರದ ಒಂದು ಭಾಗವೇ ಹೊರತು, ಅದೇ ಸಂಪೂರ್ಣ ಚಿತ್ರವಲ್ಲ. ಈ ಚಿತ್ರದಲ್ಲಿ ನನಗೆ ಮೂರು ಶೇಡ್ಗಳಿವೆ. ಏನೇ ಬದಲಾದರೂ ವ್ಯಕ್ತಿತ್ವ ಬದಲಾಗುವುದಿಲ್ಲ. ಮನುಷ್ಯನ ಆಸೆಗಳು, ವರ್ತನೆ ಬದಲಾಗುವುದಿಲ್ಲ ಎಂದು ಹೇಳುವ ಪ್ರಯತ್ನ ಈ ಚಿತ್ರದಲ್ಲಿ ಮಾಡಲಾಗಿದೆ. ಇಷ್ಟಪಟ್ಟ ವ್ಯಕ್ತಿ ಬದಲಾದರೆ ಬಹಳ ನೋವಾಗುತ್ತದೆ. ಆ ಸಂದರ್ಭದಲ್ಲಿ ಏನು ಮಾಡಬೇಕು, ಆ ವ್ಯಕ್ತಿಯ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾ? ಅಥವಾ ತಿರುಗಿ ಬೀಳಬೇಕಾ? ಎಂಬುದನ್ನು ನಿರ್ದೇಶಕರು ಬಹಳ ಚೆನ್ನಾಗಿ ಹೇಳುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕರು’ ಎನ್ನುತ್ತಾರೆ ಶಿವರಾಜಕುಮಾರ್.WhatsApp Image 2022 06 21 at 8.41.13 AMಚಿತ್ರಕ್ಕೆ ಮೊದಲು ‘ಶಿವಪ್ಪ’ ಎಂಬ ಹೆಸರನ್ನು ಇಡಲಾಗಿತ್ತು. ಆದರ, ಅದಕ್ಕಿಂತ ಪವರ್ಫುಲ್ ಆದ ಏನಾದರೂ ಶೀರ್ಷಿಕೆ ಸಿಗಬಹುದಾಗ ಎಂದು ಯೋಚಿಸುತ್ತಿದ್ದಾಗ, ನಿರ್ದೇಶಕ ಗುರುಪ್ರಸಾದ್ ಇಂಥದ್ದೊಂದು ಶೀರ್ಷಿಕೆ ಇಟ್ಟರೆ ಹೇಗೆ ಎಂದು ಸಲಹೆ ಕೊಟ್ಟಿದ್ದಾರೆ. ಅದು ಎಲ್ಲರಿಗೂ ಇಷ್ಟವಾಗಿದೆ. ಆದರೆ, ಈ ಶೀರ್ಷಿಕೆ ರಾಕ್ಲೈನ್ ವೆಂಕಟೇಶ್ ಅವರ ಬಳಿ ಇತ್ತಂತೆ. ಅದನ್ನು ಅವರಿಂದ ಪಡೆದು ಚಿತ್ರಕ್ಕೆ ಅಂತಿಮವಾಗಿ ‘ಬೈರಾಗಿ’ ಎಂದು ಇಡಲಾಗಿದೆ. ಚಿತ್ರಕ್ಕೆ ಈ ಶೀರ್ಷಿಕೆ ಹೇಳಿ ಮಾಡಿಸಿದಂತಿದೆ ಎಂಬ ಅಭಿಪ್ರಾಯ ಚಿತ್ರತಂಡದ್ದು.E7IXIBDUYAEOKBK‘ಬೈರಾಗಿ’, ತಮಿಳಿನ ‘ಕಡುಗು’ ಚಿತ್ರದ ರೀಮೇಕ್ ಆಗಿದ್ದು, ಮೂಲ ಚಿತ್ರವನ್ನು ನಿರ್ದೇಶಿಸಿದ್ದ ವಿಜಯ್ ಮಿಲ್ಟನ್ ಅವರೇ ಈ ಚಿತ್ರವನ್ನೂ ನಿರ್ದೇಶಿಸಿದ್ದಾರೆ. ಶಿವಣ್ಣ ಮತ್ತು ಧನಂಜಯ್ ಜತೆಗೆ ಪೃಥ್ವಿ ಅಂಬರ್, ಅಂಜಲಿ, ಯಶಾ ಶಿವಕುಮಾರ್, ಶಶಿಕುಮಾರ್ ಮುಂತಾದವರು ನಟಿಸಿದ್ದು, ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿದ್ದಾರೆ. ಕೃಷ್ಣ ಸಾರ್ಥಕ್ ಈ ಚಿತ್ರದ ನಿರ್ಮಾಪಕರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…