ಪೋಷಕರ ಜವಾಬ್ದಾರಿಗಳ ಸುತ್ತ ಅನಾವರಣಗೊಳ್ಳಲಿರುವ ʻಬಾಲ್ಯʼ!

Balya kannada movie

ಸುಲ್ತಾನ್ ರಾಜು ನಿರ್ದೇಶನದ ಚಿತ್ರ

ಉಳ್ಳವರು, ಬಡವರು, ವಿದ್ಯಾವಂತರು, ಅವಿದ್ಯಾವಂತರು ಯಾರೇ ಆಗಲಿ, ತಮ್ಮ ಮಕ್ಕಳು ಒಳ್ಳೆ ರೀತಿಯಲ್ಲಿ ಬೆಳೆಯಬೇಕು. ತಾವು ಅನುಭವಿಸಿದ ಕಷ್ಟಗಳು ಅವರು ಅನುಭವಿಸಬಾರದು… ಅಂತಾ ಬಯಸುತ್ತಾರೆ. ತಮ್ಮ ಮಕ್ಕಳಿಗಾಗಿ ಸರ್ವಸ್ವವನ್ನೂ ತ್ಯಾಗ ಮಾಡುತ್ತಾರೆ. ಹಗಲಿರುಳೂ ಅವರ ಭವಿಷ್ಯವನ್ನೇ ಗಮನದಲ್ಲಿಟ್ಟುಕೊಂಡು ಬದುಕು ಸಾಗಿಸುತ್ತಾರೆ. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ತಾವೂ ಶ್ರಮಿಸುತ್ತಾರೆ. ಒಟ್ಟಾರೆ ಮಕ್ಕಳ ಬೆಳವಣಿಗೆ, ಭವಿಷ್ಯದ ವಿಚಾರದಲ್ಲಿ ಹೆತ್ತವರ ಪಾತ್ರ ಮಹತ್ತರವಾಗಿರುತ್ತದೆ.
ಈ ವರೆಗೆ ಮಕ್ಕಳ ಕುರಿತು ಸಾಕಷ್ಟು ಸಿನಿಮಾಗಳು ತಯಾರಾಗಿವೆ. ಆದರೆ, ಮಕ್ಕಳ ಬಗೆಗೆ ಈ ವರೆಗೆ ಎಲ್ಲೂ ಬಾರದ ಅಪರೂಪದ ಕಥೆಯನ್ನು ಆಧರಿಸಿ ಚಿತ್ರವೊಂದು ರೂಪುಗೊಂಡಿದೆ. ಈ ಚಿತ್ರದ ಹೆಸರೇ ʻಬಾಲ್ಯʼ.Balya kannada movie

ಮಕ್ಕಳು ಬಾಲ್ಯಾವಸ್ಥೆಯಲ್ಲಿದ್ದಾಗ ಪೋಷಕರ ಪಾತ್ರ ಎಷ್ಟು ಮುಖ್ಯವಾಗಿರುತ್ತದೆ… ತಂದೆ ತಾಯಿ ತೆಗೆದುಕೊಳ್ಳುವ ತೀರ್ಮಾನಗಳು ಅವರ ಭವಿಷ್ಯವನ್ನು ಹೇಗೆ ನಿರ್ಧರಿಸುತ್ತವೆ? ಅವರ ಒಟ್ಟಾರೆ ಬದುಕಿನ ಮೇಲೆ ಎಂಥಾ ಪರಿಣಾಮ ಬೀರುತ್ತದೆ? ಎಂಬಿತ್ಯಾದಿ ಅಂಶಗಳನ್ನು ʻಬಾಲ್ಯʼ ಚಿತ್ರ ಅನಾವರಣಗೊಳಿಸಲಿದೆ.Balya kannada movie

ಈ ಹಿಂದೆ ಜಗ್ಗೇಶ್ ಅಭಿನಯದ ಸುಲ್ತಾನ ಮತ್ತು ಜಗ್ಗಿ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ ವಿ.ಎಂ. ರಾಜು (ಸುಲ್ತಾನ್ ರಾಜು) ʻಬಾಲ್ಯʼ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಹಿಂದೆ ಔಟ್ ಅಂಡ್ ಔಟ್ ಕಮರ್ಷಿಯಲ್ ಸಿನಿಮಾಗಳನ್ನು ನೀಡಿದ್ದ ರಾಜು ಈ ಸಲ ಮಕ್ಕಳ ವಿಚಾರಗಳ ಸುತ್ತಲಿನ ಸಂದೇಶವಿರುವ ಕಥಾವಸ್ತುವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಶ್ರೀ ಜಗನ್ಮಾತೆ ಎಂಟರ್ಪ್ರೈಸಸ್ ಲಾಂಛನದಲ್ಲಿ ಎನ್. ಸತ್ಯನಾರಾಯಣಾಚಾರ್ ವಿಶ್ವಕರ್ಮ ʻಬಾಲ್ಯʼವನ್ನು ನಿರ್ಮಿಸಿದ್ದಾರೆ. ಇಂದು ವಿಶ್ವನಾಥ್ ಮತ್ತು ಎ.ಟಿ. ರವೀಶ್ ಸಂಗೀತ ನಿರ್ದೇಶನ, ರಮೇಶ್ ಕೋಯಿರ ಛಾಯಾಗ್ರಹಣ, ಲಕ್ಷ್ಮಣ್ ರೆಡ್ಡಿ ಸಂಕಲನ, ನೀಲ್ ಕಮಲ್ ಕೆಂಗಾಪುರ ಸಾಹಿತ್ಯ ಈ ಚಿತ್ರಕ್ಕಿದೆ.Balya kannada movie ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ಪೂರೈಸಿರುವ ಈ ಚಿತ್ರದಲ್ಲಿ ಶಾಲಾ ಮಕ್ಕಳು ಸೇರಿದಂತೆ,
ನಾರಾಯಣಸ್ವಾಮಿ, ಬುಲ್ಲೆಟ್ ವಿನೋದ್, ಕುರಿರಂಗ, ನಿಶ್ಚಿತ, ಅಪ್ಸರ, ಶಶಿರೇಖಾ, ಗೋಲ್ಡನ್ ಗೌರಿ, ಸಿದ್ದೇಶ್ ಮಾಸ್ಟರ್ ಆರ್ಯಮನ್, ಮಾಸ್ಟರ್ ದಕ್ಷಿತ್, ಮಾಸ್ಟರ್ ಮನೀಶ್, ಮಾಸ್ಟರ್ ದತ್ತಾ, ಕುಮಾರಿ ಯೋಗಿತಾ, ಕುಮಾರಿ ದೀಕ್ಷಾ ಮೊದಲಾದವರ ತಾರಾಗಣವಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…