ಮುಲಕುಪ್ಪಡಮ್ ಸಂಸ್ಥೆಯ ತೆಕ್ಕೆಗೆ ಬನಾರಸ್ ವಿತರಣಾ ಹಕ್ಕು!

banaras kannada movie

ಝೈದ್ ಖಾನ್ ನಾಯಕನಾಗಿ ನಟಿಸಿರುವ ಬನಾರಸ್ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಇದೇ ಹೊತ್ತಿನಲ್ಲಿ ಅತ್ತ ಝೈದ್ ಖಾನ್ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರುವಾಗಲೇ, ಇತ್ತ ಬಿಡುಗಡೆಗೆ ಬೇಕಿರುವಂಥಾ ತಯಾರಿಯೂ ತೀವ್ರವಾಗಿಯೇ ಶುರುವಾಗಿದೆ. ಇಂಥಾ ವಾತಾವರಣದಲ್ಲಿ ಬನಾರಸ್ ಚಿತ್ರತಂಡದ ಕಡೆಯಿಂದ ಖುಷಿಯ ಸಂಗತಿಯೊಂದು ಹೊರಬಿದ್ದಿದೆ.banaras kannada movie

ಕೇರಳದಲ್ಲಿ ಪ್ರಖ್ಯಾತ ವಿತರಣಾ ಸಂಸ್ಥೆಯಾಗಿರುವ ಮಲಕುಪ್ಪಡಮ್, ಬನಾರಸ್‌ನ ವಿತರಣಾ ಹಕ್ಕುಗಳನ್ನು ಪಡೆದುಕೊಂಡಿದೆ. ಈಗಾಗಲೇ ಕೇರಳದಲ್ಲಿ ದೊಡ್ಡ ಹೆಸರು ಮಾಡಿರುವ ಸದರುಇ ಸಂಸ್ಥೆ ಹಲವಾರು ಹಿಟ್ ಸಿನಿಮಾಗಳನ್ನು ಕೇರಳದಲ್ಲಿ ಬಿಡುಗಡೆಗೊಳಿಸಿದೆ. ಆದ್ದರಿಂದಲೇ ಕೇರಳದ ತುಂಬೆಲ್ಲ ಬನಾರಸ್ ಬಗೆಗೀಗ ಬೇರೆಯದ್ದೇ ದಿಕ್ಕಿನಲ್ಲಿ ನಿರೀಕ್ಷೆ ಮೂಡಿಕೊಂಡಿದೆ.banaras kannada movie

ಈ ವಿಚಾರವನ್ನು ಖುದ್ದು ಆ ಸಂಸ್ಥೆಯೇ ಅಧಿಕೃತವಾಗಿ ಘೋಶಿಸಿಕೊಂಡಿದೆ. ದೇಶಾದ್ಯಂತ ಉದ್ಯಮಿಯಾಗಿ ದೊಡ್ಡ ಹೆಸರು ಮಾಡಿರುವ ಥಾಮಸ್ ಆಂಟೋನಿ, ತೋಮಿಚನ್ ಮುಪಕುಪ್ಪದಮ್ ಎಂದೇ ಹೆಸರುವಾಸಿಯಾಗಿರುವವರು. ಅವರು ಉದ್ಯಮಿಯಾಗಿದ್ದುಕೊಂಡೇ ಮಲಕುಪ್ಪಡಮ್ ಫಿಲಂಸ್ ಮೂಲಕ ಹಲವಾರು ಚಿತ್ರಗಳನ್ನು ನಿಮರ್ಠಾಣ ಮಾಡಿದ್ದಾರೆ. ಅದರೊಂದಿಗೇ ಮಲಕುಪ್ಪಡಮ್ ರಿಲೀಸ್ ಸಂಸ್ಥೆಯ ಮೂಲಕ ಹಲವಾರು ಸಿನಿಮಾಗಳ ವಿತರಕರಾಗಿಯೂ ಯಶಸ್ವಿಯಾಗಿದ್ದಾರೆ.

ಎಲ್ಲ ರೀತಿಯಲ್ಲಿಯೂ ಗುಣಮಟ್ಟ ಹೊಂದಿರುವ ಚಿತ್ರಗಳ ವಿತರಣಾ ಹಕ್ಕುಗಳನ್ನು ಖರೀದಿಸೋದು ಈ ಸಂಸ್ಥೆಯ ಹೆಚ್ಚುಗಾರಿಕೆ. ಆದ್ದರಿಂದಲೇ, ಈ ಸಂಸ್ಥೆ ಒಂದು ಚಿತ್ರದ ವಿತರಣಾ ಹಕ್ಕುಗಳನ್ನು ಖರೀದಿಸಿತೆಂದರೆ, ಆ ಚಿತ್ರದ ಬಗ್ಗೆ ತಾನೇ ತಾನಾಗಿ ನಿರೀಕ್ಷೆ ಮೂಡಿಕೊಳ್ಳುತ್ತದೆ.banaras kannada movie

ಈವತ್ತಿಗೂ ಆಯ್ಕೆಯಲ್ಲಿ ಗುಣಮಟ್ಟ ಕಾಯ್ದುಕೊಂಡಿರುವ ಈ ಸಂಸ್ಥೆ, ಆ ಮಾನದಂಡಗಳ ಆಧಾರದಲ್ಲಿಯೇ ಬನಾರಸ್ ಅನ್ನು ಆರಿಸಿಕೊಂಡಿದೆ. ವಿಶೇಷವೆಂದರೆ, ಈ ಸಂಸ್ಥೆಯ ಮುಖ್ಯಸ್ಥರು ಬನಾರಸ್ ಮೂಡಿ ಬಂದಿರುವ ರೀತಿ ಕಂಡು ಥ್ರಿಲ್ ಆಗಿದ್ದಾರೆ. ಆ ಮೆಚ್ಚುಗೆಯಿಂದಲೇ ದೊಡ್ಡ ಮೊತ್ತಕ್ಕೆ ಬನಾರಸ್ ವಿತರಣಾ ಹಕ್ಕುಗಳನ್ನು ಖರೀದಿಸಿದ್ದಾರೆ. ಇದೇ ನವೆಂಬರ್ ನಾಲಕ್ಕರಂದು ವಿಶಾಲ ಕೇರಳಕ್ಕೆ ಅತ್ಯಂತ ವ್ಯವಸ್ಥಿತವಾಗಿ ಬನಾರಸ್ ಹಬ್ಬಿಕೊಳ್ಳಲಿದೆ. ಈ ವಿದ್ಯಮಾನ ಒಂದಿಡೀ ಬನಾರಸ್ ಚಿತ್ರತಂಡವನ್ನು ಥ್ರಿಲ್ ಆಗಿಸಿದೆ. ಹೊಸಾ ಹೀರೋನ ಚಿತ್ರವೊಂದು ಇಷ್ಟು ದೊಡ್ಡ ಮೊತ್ತದ ವ್ಯವಹಾರ ನಡೆಸಿರೋದೊಂದು ದಾಖಲೆ ಎಂಬುದರಲ್ಲಿ ಎರಡು ಮಾತಿಲ್ಲ. ಇದರಿಂದಾಗಿ ನವನಾಯಕ ಝೈದ್ ಖಾನ್ ಪಾಲಿಗೂ ಹೊಸಾ ಭರವಸೆ, ಹುರುಪು ಮೂಡಿಕೊಂಡಂತಾಗಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…