ಬನಾರಸ್ ಗೆಲುವಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ ಸಲ್ಲಿಸಿದ ಝೈದ್ ಖಾನ್!

banaras successfully

ಝೈದ್ ಖಾನ್ ನಾಯಕನಾಗಿ ನಟಿಸಿರುವ ಬನಾರಸ್ ಚಿತ್ರ ಯಶಸ್ವಿಯಾಗಿ ಮೂರನೇ ವಾರದತ್ತ ದಾಪುಗಾಲಿಟ್ಟಿದೆ. ಈಗಲೂ ಅದೇ ಪ್ರೀತಿಯಿಂದ ಪ್ರೇಕ್ಷಕರು ಬನಾರಸ್ ಅನ್ನು ಮೆಚ್ಚಿ ಕೊಂಡಾಡುತ್ತಿದ್ದಾರೆ. ಇದರೊಂದಿಗೆ ಮೊದಲ ಹೆಜ್ಜೆಯಲ್ಲಿಯೇ ನಾಯಕನಾಗಿ ನೆಲೆ ಕಂಡುಕೊಂಡ ಖುಷಿ ಝೈದ್ ಪಾಲಿಗೆ ದಕ್ಕಿದೆ. ಇದಕ್ಕೆಲ್ಲ ಕಾರಣರಾದ ಸಮಸ್ತ ಕನ್ನಡ ನಾಡಿನ ಜನತೆಗೆ, ಸಹಕಾರ ನೀಡಿದ ಮಾಧ್ಯಮ ಮಿತ್ರರಿಗೆ ಝೈದ್ ಖಾನ್ ಮನಃಪೂರ್ವಕವಾಗಿ ಧನ್ಯವಾದ ಸಲ್ಲಿಸಿದ್ದಾರೆ.banaras successfully

ಬನಾರಸ್‍ನ ಪ್ರತೀ ಕದಲಿಕೆಗಳನ್ನೂ ಕಾಲ ಕಾಲಕ್ಕೆ ಪ್ರೇಕ್ಷಕರಿಗೆ ತಲುಪಿಸುತ್ತಾ, ತುಂಬು ಸಹಕಾರ ನೀಡಿದ ಮಾಧ್ಯಮದವರಿಗೆ ಧನ್ಯವಾದ ಸಮರ್ಪಿಸಿರುವ ಝೈದ್ ಖಾನ್, ಈ ಸ್ನೇಹಶೀಲತೆ ಮುಂದಿನ ದಿನಗಳಲ್ಲಿಯೂ ಚಾಲ್ತಿಯಲ್ಲಿರಲೆಂದು ಆಶಿಸಿದ್ದಾರೆ. ಇನ್ನುಳಿದಂತೆ ತಮ್ಮನ್ನು ನಾಯಕ ನಟನಾಗಿ ಪ್ರೀತಿಯಿಂದ ಬರಮಾಡಿಕೊಂಡ, ತನ್ನ ಪ್ರಯತ್ನವನ್ನು ಮನಸಾರೆ ಮೆಚ್ಚಿಕೊಂಡ ಎಲ್ಲ ಕನ್ನಡಿಗರಿಗೂ ವಂದನೆ ಸಲ್ಲಿಸಿದ್ದಾರೆ. ಎಲ್ಲ ಸವಾಲುಗಳನ್ನೂ ದಾಟಿಕೊಂಡು, ಇಂಥಾದ್ದೊಂದು ಗೆಲುವು ದಾಖಲಿಸಲು ಸಾಧ್ಯವಾಗಿಸಿದ ಸಮಸ್ತರಿಗೂ ಝೈದ್ ಖಾನ್ ವಂದಿಸಿದ್ದಾರೆ.banaras successfullyಒಟ್ಟಾರೆಯಾಗಿ ಬನಾರಸ್ ಚಿತ್ರಕ್ಕೆ ಗೆಲುವು ದಕ್ಕಿದೆ. ಪ್ರೇಕ್ಷಕರ ಕಡೆಯಿಂದ ಕೇಳಿಬರುತ್ತಿರುವ ಅಭೂತಪೂರ್ವ ಪ್ರತಿಕ್ರಿಯೆಗಳೇ ಮೂರನೇ ವಾರಕ್ಕೆ ದಾಟಿಕೊಳ್ಳುವಂತೆ ಮಾಡಿದೆ. ಇದೇ ಖುಷಿಯಲ್ಲಿ ಮತ್ತೊಂದು ಖುಷಿಯ ಸಂಗತಿಯನ್ನೂ ಕೂಡಾ ಝೈದ್ ಖಾನ್ ಹಂಚಿಕೊಂಡಿದ್ದಾರೆ. ಸಿನಿಮಾ ಮಂದಿರಗಳಲ್ಲಿ ಯಶಸ್ವೀ ಪ್ರದರ್ಶನ ಕಾಣುತ್ತಿರುವಾಗಲೇ ಬನಾರಸ್ ಓಟಿಟಿಗೆ ಒಂದು ದೊಡ್ಡ ಮೊತ್ತಕ್ಕೆ ಸೇಲ್ ಆಗಿದೆ. ಈಗಾಗಲೇ ಹಾಕಿದ ಬಂಡವಾಳವೂ ವಾಪಾಸಾಗಿದೆ. ಇದೇ ಹೊತ್ತಿನಲ್ಲಿ ಮೂರನೇ ವಾರದ ಯಶಸ್ವೀ ಯಾನ ಶುರುವಿಟ್ಟಿರುವ ಬನಾರಸ್‍ಗೆ ಒಂದಷ್ಟು ಹೆಚ್ಚು ಥಿಯೇಟರ್‍ಗಳೂ ಸಿಗುತ್ತಿವೆ. ಈ ಎಲ್ಲ ವಿದ್ಯಮಾನಗಳಿಂದ ಝೈದ್ ಖಾನ್ ಸೇರಿದಂತೆ ಒಂದಿಡೀ ಚಿತ್ರತಂಡ ಖುಷಿಗೊಂಡಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…