ಅಡಿವಿ ಶೇಷ್ ಗೆ ಸಿಕ್ಕಳು ಜೋಡಿ…’ಗೂಢಚಾರಿ-2’ ಸಿನಿಮಾಗೆ ಬನಿತಾ ಸಂಧು ನಾಯಕಿ

Banita Sandhu is the heroine of the movie 'Goodchari-2'

ತೆಲುಗು ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದ ಸೂಪರ್ ಹಿಟ್ ಸಿನಿಮಾ ‘ಗೂಢಚಾರಿ’. ಅಡಿವಿ ಶೇಷ್ ನಟನೆಯಲ್ಲಿ ಮೂಡಿ ಬಂದ ಆಕ್ಷನ್ ಅಂಡ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ದಾಖಲೆ ಗಳಿಕೆ ಕಂಡಿತ್ತು. ಈ ಚಿತ್ರದ ಸೀಕ್ವೆಲ್ ಬರ್ತಿರೋದು ಗೊತ್ತೇ ಇದೆ. ಈಗಾಗಲೇ ರಿಲೀಸ್ ಆಗಿದ್ದ ‘ಗೂಢಚಾರಿ 2’ ಫಸ್ಟ್ ಲುಕ್ ಬರೀ ಸದ್ದು ಮಾಡಿತ್ತು. ಇದೀಗ ಚಿತ್ರತಂಡ ನಾಯಕಿಯನ್ನು ಪರಿಚಯಿಸಿದೆ.

MALAVIKA MOHANAN ಕೇರಳ ಬ್ಯೂಟಿಯ ಗ್ಲಾಮರ್ ಲುಕ್‌ಗೆ ಮನಸೋಲದವರು ಯಾರು?

ಗೂಢಚಾರಿ-2 ಸಿನಿಮಾಗೆ ನಾಯಕಿ ಸಿಕ್ಕಿದ್ದಾರೆ. ಪ್ರತಿಭಾನ್ವಿತ ನಟಿ ಬನಿತಾ ಸಂಧು ಶೇಶ್ ಅಡಿವಿ ಶೇಷ್ ಗೆ ಜೋಡಿಯಾಗಿ ನಟಿಸುತ್ತಿದ್ದಾಳೆ. ಅಕ್ಟೋಬರ್, ಸರ್ದಾರ್ ಉದಾಮ್, ಆದಿತ್ಯ ವರ್ಮಾ ಸೇರಿದಂತೆ ಹಲವು ಹಿಂದಿ ಹಾಗೂ ತಮಿಳು ಚಿತ್ರಗಳಲ್ಲಿ ನಟಿಸಿದ್ದು, ಇದೇ ಮೊದಲ ಬಾರಿಗೆ ಪ್ಯಾನ್ ಇಂಡಿಯಾ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.Banita Sandhu is the heroine of the movie 'Goodchari-2'


ಈ ಬಗ್ಗೆ ಸಂತಸ ಹಂಚಿಕೊಂಡಿರುವ ಬನಿತಾ, ಇದು ನನ್ನ ಮೊದಲ ಪ್ಯಾನ್ ಇಂಡಿಯಾ ಸಿನಿಮಾ. ವಿಷನರಿ ತಂಡದ ಜೊತೆ ಕೈ ಜೋಡಿಸಿರುವುದಕ್ಕೆ ಉತ್ಸುಕಳಾಗಿದ್ದೇನೆ. ನಾನು ಹಿಂದೆಂದೂ ಮಾಡದಿರುವ ವಿಭಿನ್ನ ಪಾತ್ರವೊಂದರಲ್ಲಿ ನಟಿಸುತ್ತಿದ್ದೇನೆ. ಪ್ರೇಕ್ಷಕರು ನನ್ನನ್ನು ಸಂಪೂರ್ಣವಾಗಿ ಹೊಸ ಅವತಾರದಲ್ಲಿ ನೋಡುತ್ತಾರೆ. ಈ ಚಿತ್ರದಲ್ಲಿ ಕೆಲಸ ಮಾಡಲು ನಾನು ಎಕ್ಸೈಟ್ ಆಗಿದ್ದೇನೆ ಎಂದಿದ್ದಾರೆ.

ಅಡಿವಿ ಶೇಷ್ ಮಾತನಾಡಿ, ಗೂಢಚಾರಿ ಪ್ರಪಂಚಕ್ಕೆ ಬಬಿತಾ ಅವರಿಗೆ ಸ್ವಾಗತ..ಅವರ ಜೊತೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.Banita Sandhu is the heroine of the movie 'Goodchari-2'

‘ಗೂಢಚಾರಿ 2’ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಬಿಗ್ ಬಜೆಟ್ ನಲ್ಲಿ ನಿರ್ಮಾಣವಾಗುತ್ತಿದೆ. ಅಡಿವಿ ಶೇಷ್ ನಟನೆಯ ‘ಮೇಜರ್’ ಚಿತ್ರದ ಎಡಿಟರ್ ವಿನಯ್ ಕುಮಾರ್ ಸಿರಿಗಿನೀದಿ ಈ ಚಿತ್ರದ ಮೂಲಕ ನಿರ್ದೇಶಕನಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಚಿತ್ರಕ್ಕೆ ಅಡಿವಿ ಶೇಷ್ ಕಥೆ ಬರೆದಿದ್ದು, ಕಾರ್ತೀಕೇಯ 2, ಮೇಜರ್ ಹಾಗೂ ಕಾಶ್ಮೀರಿ ಫೈಲ್ಸ್ ನಂತ ಸೂಪರ್ ಹಿಟ್ ಸಿನಿಮಾ ನಿರ್ಮಾಣ ಮಾಡಿರೋ ದೊಡ್ಡ ನಿರ್ಮಾಣ ಸಂಸ್ಥೆಗಳು ‘ಗೂಢಚಾರಿ 2’ಗೆ ಬಂಡವಾಳ ಹೂಡುತ್ತಿವೆ. ಪೀಪಲ್ ಮೀಡಿಯಾ ಫ್ಯಾಕ್ಟರಿ, ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಮತ್ತು AK ಎಂಟಟೈನ್ಮೆಂಟ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಬ್ಯಾನರ್ ನಡಿ ಟಿಜಿ. ವಿಶ್ವಪ್ರಸಾದ್ ಮತ್ತು ಅಭಿಷೇಕ್ ಅಗರ್ ವಾಲ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…