ದೀಪಾವಳಿ ಸುಸಂದರ್ಭದಲ್ಲಿ “ರಂಗಿತರಂಗ” ನಿರ್ಮಾಪಕ ಹೆಚ್ ಕೆ ಪ್ರಕಾಶ್ ಅವರಿಂದ ನೂತನ ಚಿತ್ರ ಘೋಷಣೆ.

bank of bhagyalakshmi kannada movie

ಅಭಿಷೇಕ್ ನಿರ್ದೇಶನದ “ಬ್ಯಾಂಕ್ ಆಫ್ ಭಾಗ್ಯಲಕ್ಷಿ” ಚಿತ್ರಕ್ಕೆ ಅಜೇಯ್ ರಾವ್ ನಾಯಕ.

“ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ದಂತಹ ಸೂಪರ್ ಹಿಟ್ ಚಿತ್ರಗಳ ನಿರ್ಮಾಪಕ ಹೆಚ್. ಕೆ ಪ್ರಕಾಶ್ ಅವರ ನಿರ್ಮಾಣದಲ್ಲಿ ‘ಬ್ಯಾಂಕ್ ಆಫ್ ಭಾಗ್ಯಲಕ್ಷಿ’ ಎಂಬ ಚಿತ್ರ ಬರುತ್ತಿದೆ.Ajay Rao to lead the cast of heist thriller Bank of Bhagyalakshmi

ದೀಪಾವಳಿ ಸುಸಂದರ್ಭದಲ್ಲಿ ಅಜಯ್ ರಾವ್ ನಾಯಕರಾಗಿ ನಟಿಸುತ್ತಿರುವ ಈ ನೂತನ ಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ. ಚಿತ್ರದ ಶೀರ್ಷಿಕೆ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಹೊಸ ಪ್ರತಿಭೆಗಳಿಗೆ ಉತ್ತೇಜನ ನೀಡುತ್ತಾ ಬಂದಿರುವ ನಿರ್ಮಾಪಕ ಪ್ರಕಾಶ್ ಅವರು, ಈ ಚಿತ್ರವನ್ನು ನಿರ್ದೇಶಿಸಲು ನೂತನ ಪ್ರತಿಭೆ ಅಭಿಷೇಕ್ ಅವರಿಗೆ ಅವಕಾಶ ನೀಡಿದ್ದಾರೆ. ಸಿಂಪಲ್ ಸುನಿ ಅವರ ಜೊತೆ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿರುವ ಅನುಭವ ಅಭಿಷೇಕ್ ಅವರಿಗಿದೆ. ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿರುವ ಅಭಿಷೇಕ್, “ಪಿನಾಕ” ಎಂಬ ವಿ ಎಫ್ ಎಕ್ಸ್ ಸ್ಟುಡಿಯೋ ಹೊಂದಿದ್ದಾರೆ.bank of bhagyalakshmi kannada movie

ಬ್ಯಾಂಕ್ ದರೋಡೆ ಮಾಡಲು ಹೊರಟಿರುವವರ ಸುತ್ತ ಈ ಕಥೆ ಹೆಣೆಯಲಾಗಿದೆ ಎಂದಿರುವ ನಿರ್ದೇಶಕರು, ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ಹೆಚ್. ಕೆ ಪ್ರಕಾಶ್ ಅವರು ತಮ್ಮ ಶ್ರೀದೇವಿ ಎಂಟರ್ ಟೈನರ್ಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ ಐದನೇ ಚಿತ್ರವಿದು.bank of bhagyalakshmi kannada movie

ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಅಭಿಷೇಕ್ ಜಿ ಕಾಸರಗೋಡು ಛಾಯಾಗ್ರಹಣ, ತೇಜಸ್ ಆರ್ ಸಂಕಲನ ಹಾಗೂ ರಾಘು ಅವರ ಕಲಾ ನಿರ್ದೇಶನ ‘ಬ್ಯಾಂಕ್ ಆಫ್ ಭಾಗ್ಯಲಕ್ಷಿ’ ಚಿತ್ರಕ್ಕಿದೆ. ನಾಯಕಿ ಸೇರಿದಂತೆ ಉಳಿದ ತಾರಬಳಗದ ಮಾಹಿತಿ ಸದ್ಯದಲ್ಲೇ ತಿಳಿಯಲಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…